BJP: ಯತ್ನಾಳ್ ವಿರುದ್ಧ ಕ್ರಮ ವಿಚಾರದಲ್ಲಿ ಬಿಜೆಪಿ ದ್ವಂದ್ವ
ಯತ್ನಾಳ್ ಅಮಾನತಿಗೆ ನಿರಾಣಿ, ರೇಣುಕಾಚಾರ್ಯ ಆರಗ ಪಟ್ಟು ಅರವಿಂದ ಬೆಲ್ಲದ್ ವಿರೋಧ
Team Udayavani, Dec 28, 2023, 11:27 PM IST
ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕುಟುಂಬ ವರ್ಗ ಹಾಗೂ ಪಕ್ಷದ ನಾಯಕರ ವಿರುದ್ಧ ಪದೇಪದೆ ಟೀಕಿಸಿ ಮಾತನಾಡುತ್ತಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ವಿಚಾರದಲ್ಲು ಗುರುವಾರ ನಡೆದ ಪ್ರಮುಖರ ಸಭೆಯಲ್ಲಿ ಪರ-ವಿರೋಧ ವ್ಯಕ್ತವಾಗಿದೆ.
ಯತ್ನಾಳ್ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ವರಿಷ್ಠರಿಗೆ ಶಿಫಾರಸು ಮಾಡಬೇಕೆಂಬ ಬಗ್ಗೆ ಬುಧವಾರ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಚರ್ಚೆಯಾಗಿತ್ತು. ಅದು ಮತ್ತೆ ಮುಂದುವರಿದಿದ್ದು, ಈ ಬಗ್ಗೆ ಪಕ್ಷ ನಿರ್ಣಯ ತೆಗೆದುಕೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಎಂ.ಪಿ.ರೇಣುಕಾಚಾರ್ಯ ಹಾಗೂ ಆರಗ ಜ್ಞಾನೇಂದ್ರ ಸಹಿತ ಹಲವರು ಯತ್ನಾಳ್ ಉಚ್ಚಾಟನೆ ಅಥವಾ ಅಮಾನತಿಗೆ ಪಟ್ಟು ಹಿಡಿದಿದ್ದಾರೆ.
ಆದರೆ ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಯತ್ನಾಳ್ ವಿಚಾರವನ್ನು ವರಿಷ್ಠರು ನಿರ್ಧರಿಸುತ್ತದೆ. ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಯಾವುದೇ ಹಿರಿಯ ನಾಯಕರ ವಿರುದ್ಧ ಕ್ರಮ ಅವಶ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಯತ್ನಾಳ್ ವಿರುದ್ಧ ಕ್ರಮ ಬೇಕೋ, ಬೇಡವೋ ಎಂಬ ವಿಚಾರದಲ್ಲಿ ಮಾಜಿ ಡಿಸಿಎಂಗಳಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ| ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವ ಸಿ.ಟಿ.ರವಿ ಮೊದಲಾದವರು ಮೌನಕ್ಕೆ ಶರಣಾಗಿದ್ದರು ಎಂದು ಗೊತ್ತಾಗಿದೆ. ಆದರೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತ್ರ ಯಾವುದೇ ಕಾರಣಕ್ಕೂ ಈ ವಿಚಾರವನ್ನು ಬೆಳೆಸುವುದಕ್ಕೆ ಹೋಗುವುದು ಬೇಡ. ಹೇಳಿಕೆ-ಪ್ರತಿ ಹೇಳಿಕೆಗಳಿಂದ ಪರಿಸ್ಥಿತಿ ಬಿಗಡಾಯಿಸುತ್ತದೆ. ಹೀಗಾಗಿ ಈ ಬಗ್ಗೆ ತಟಸ್ಥರಾಗಿರಿ ಎಂದು ಸೂಚನೆ ನೀಡಿದರು ಎಂದು ತಿಳಿದು ಬಂದಿದೆ.
ವರಿಷ್ಠರ ಮೂಲಕ ವಿಶ್ವಾಸ
ಈ ವಿಚಾರಕ್ಕೆ ಸಂಬಂಧಿಸಿ ಬೊಮ್ಮಾಯಿ ನೀಡಿದ ಸಲಹೆಗೆ ಬಹುತೇಕರು ಸಹಮತ ವ್ಯಕ್ತಪಡಿಸಿದ್ದು, ವರಿಷ್ಠರ ಮೂಲಕ ಯತ್ನಾಳ್ ಅವರನ್ನು ವಿಶ್ವಾಸಕ್ಕೆ ಪಡೆಯುವುದು ಸೂಕ್ತ ಎಂದು ನಿರ್ಣ ಯಿಸಲಾಗಿದೆ. ಯತ್ನಾಳ್ ಆಡಿರುವ ಮಾತುಗಳ ಆಡಿಯೋ, ವೀಡಿಯೋ ತುಣುಕುಗಳನ್ನು ವರಿಷ್ಠರಿಗೆ ಕಳುಹಿಸಿಕೊಡೋಣ. ಅವರ ಮೂಲಕವೇ ಅವರಿಗೆ ಕಡಿವಾಣ ಹಾಕೋಣ. ಅವರ ಮಾತುಗಳಿಗೆ ಅತಿಯಾದ ಆದ್ಯತೆ ನೀಡುವುದು ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.