Vijayapura; ಚಡಚಣ ಸಹೋದರ ಹತ್ಯಾ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಮಹದೇವ ಭೈರಗೊಂಡ, ಸಹಚರರು
Team Udayavani, Dec 29, 2023, 5:53 PM IST
ವಿಜಯಪುರ ಭೀಮಾತೀರದ ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಣ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹದೇವ ಭೈರಗೊಂಡ ಹಾಗೂ ಸಹಚರರು ಶುಕ್ರವಾರ ನ್ಯಾಯಾಲದ ವಿಚಾರಣೆಗೆ ಹಾಜರಾಗಿದ್ದರು.
ಶುಕ್ರವಾರ ನಗರದಲ್ಲಿರುವ ವಿಜಯಪುರ ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯಕ್ಕೆ ಪ್ರಮುಖ ಆರೋಪಿ ಮಹಾದೇವ ಭೈರಗೊಂಡ ಸೇರಿದಂತೆ ಇತರೆ ಆರೋಪಗಳು ವಿಚಾರಣೆಗೆ ಹಾಜರಾಗಿದ್ದರು.
ಭೀಮಾತೀರದ ಚಡಚಣ ತಾಲೂಕಿನ ಕೊಂಕಣಗಾಂವ್ ಗ್ರಾಮದ ತೋಟದಲ್ಲಿ 2017 ಅಕ್ಟೋಬರ್ 30 ರಂದು ಧರ್ಮರಾಜ ಚಡಚಣ ನಕಲಿ ಪೊಲೀಸ್ ಎನ್ಕೌಂಟರ್ ಹಾಗೂ ಆತನ ಸಹೋದರ ಗಂಗಾಧರ ಚಡಚಡ ನಿಗೂಢ ಹತ್ಯೆ ಪ್ರಕರಣದಲ್ಲಿ ಮಹಾದೇವ ಬೈರಗೊಂಡ ವಿರುದ್ಧದ ವಿಚಾರಣೆ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇದೇ ಪ್ರಕರಣದಲ್ಲಿ ಮಹದೇವ ಭೈರಗೊಂಡನಿಂದ ಹಣ ಪಡೆದು ನಕಲಿ ಎನ್ಕೌಂಟರ್ ನಡೆಸಿದ ಹಾಗೂ ಹತ್ಯೆಗೆ ಸಹಕರಿಸಿದ ಪ್ರಕರಣದಲ್ಲಿ ಸಿಪಿಐ, ಪಿಎಸ್ಐ ಸೇರಿ ಒಟ್ಟು 18 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಆರು ವರ್ಷಗಳ ಹಿಂದಿನ ಈ ಪ್ರಕರಣದಲ್ಲಿ ಶುಕ್ರವಾರ 15 ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಪೊಲೀಸ್ ಭದ್ರತೆ: ಜಿಲ್ಲೆಯ ಮಟ್ಟಿಗೆ ಅತ್ಯಂತ ಚಡಚಣ ಹಾಗೂ ಭೈರಗೊಂಡ ಕುಟುಂಬಗಳ ಮಧ್ಯೆ ರಕ್ತಸಿಕ್ತ ಅಧ್ಯಾಯ ಇರುವ ಕಾರಣ ಶುಕ್ರವಾರ ಭೈರಗೊಂಡ ನ್ಯಾಯಾಲಯಕ್ಕೆ ಹಾಜರಾಗಿದ್ದಾಗ ಕೋರ್ಟ್ ಸುತ್ತಲೂ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು.
ಮಹಾದೇವ ಬೈರಗೊಂಡ, ಹಣಮಂತ ಪೂಜಾರಿ, ಅಂದು ಚಡಚಣ ಸಿಪಿಐ ಆಗಿದ್ದ ಮಲ್ಲಿಕಾರ್ಜುನ್ ಅಸೋಡೆ ನಕಲಿ ಎನ್ಕೌಂಟರ್ ನಡೆಸಿದ್ದರು. ಪ್ರಕರಣದ ಆರೋಪಿಯಾಗಿದ್ದ ಅಂದಿನ ಚಡಚಣ ಪಿಎಸ್‌ಐ ಗೋಪಾಲ್ ಹಳ್ಳೂರ ಶುಕ್ರವಾರದ ವಿಚಾರಣೆಗೆ ಗೈರು ಹಾಜರಾಗಿದ್ದರು.
ವಿಚಾರಣೆ ಬಳಿಕ ನ್ಯಾಯಾಲಯದ ಆವರಣದಲ್ಲಿ ಭೈರಗೊಂಡ ಹಾಗೂ ಒತರೆ ಆರೋಪಿಗಳ ಸುತ್ತಲೂ ಸಶಸ್ತ್ರ ಪೊಲೀಸ್ ಕಾವಲು ಸಹಿತ ಭಾರಿ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್‌ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.