Karnataka: ಜನವರಿ ಅಂತ್ಯದಲ್ಲಿ ಸರಕಾರದಿಂದಲೇ ಉದ್ಯೋಗ ಮೇಳ
ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸಲು ಮುಂದಾದ ರಾಜ್ಯ ಸರಕಾರ
Team Udayavani, Dec 29, 2023, 10:51 PM IST
ಬೆಂಗಳೂರು: ನಿರುದ್ಯೋಗ ಭತ್ತೆ ನೀಡುವ “ಯುವನಿಧಿ” ಯೋಜನೆ ಅಡಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬೆನ್ನಲ್ಲೇ, ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಕಾರ್ಯಕ್ರಮಕ್ಕೆ ಸರಕಾರ ಮುಂದಾಗಿದೆ. ಈ ಸಂಬಂಧ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಿದ್ದು, ಇದಕ್ಕಾಗಿ ಸಚಿವರ ತಂಡ ರಚಿಸಲಾಗಿದೆ.
ಗೃಹ ಕಚೇರಿ “ಕೃಷ್ಣಾ’ದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಉದ್ಯೋಗ ಮೇಳದ ಪೂರ್ವಭಾವಿ ಸಭೆಯಲ್ಲಿ ಮೇಳದ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವರ ತಂಡ ರಚಿಸಲು ಸೂಚಿಸಲಾಯಿತು.
ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಜನವರಿ ಕೊನೆಯ ವಾರದಲ್ಲಿ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜಿಸಲು ಉದ್ದೇಶಿಸಲಾಗಿದೆ. ಇದನ್ನು ಪರಿಣಾಮಕಾರಿಯಾಗಿ ಆಯೋಜಿಸಲು ಸಚಿವರ ತಂಡ ರಚಿಸಲಾಗುವುದು.ಈ ತಂಡವು ವಿವಿಧ ಉದ್ದಿಮೆಗಳೊಂದಿಗೆ ಚರ್ಚಿಸಿ, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತರು ಮೇಳದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಲಿದೆ ಎಂದರು.
ವಿದೇಶದಲ್ಲಿರುವ ಉದ್ಯೋಗಾವಕಾಶಗಳ ಕುರಿತೂ ಪರಿಶೀಲಿಸುವಂತೆ ಸೂಚಿಸಿದ ಮುಖ್ಯಮಂತ್ರಿ, ಇದಲ್ಲದೆ ರಾಜ್ಯದ ಯುವಕರಿಗೆ ಉದ್ಯೋಗಾವಕಾಶಗಳನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಉದ್ಯೋಗ ನೀತಿಯನ್ನು ಹೊಂದುವ ಅಗತ್ಯವಿದೆ. ಈ ನೀತಿಯನ್ನು ರೂಪಿಸಲು ಸಿದ್ಧತೆ ನಡೆಸುವಂತೆ ತಿಳಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಡಾ| ಜಿ. ಪರಮೇಶ್ವರ್, ಎಂ.ಬಿ. ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ| ಎಂ.ಸಿ. ಸುಧಾಕರ, ಸಂತೋಷ್ ಲಾಡ್, ಬಿ. ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿ ಡಾ| ಕೆ.ವಿ. ತ್ರಿಲೋಕಚಂದ್ರ ಮತ್ತಿತರರಿದ್ದರು.
ಸಚಿವರ ತಂಡದಲ್ಲಿ ಯಾರ್ಯಾರು?
ಚುನಾವಣೆ ಪ್ರಣಾಳಿಕೆಯಲ್ಲಿ ತಿಳಿಸಿದಂತೆ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಇದಕ್ಕಾಗಿ ರಚಿಸಿದ ಸಚಿವರ ತಂಡದಲ್ಲಿ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ, ಡಾ| ಶರಣಪ್ರಕಾಶ ಪಾಟೀಲ್, ಡಾ| ಎಂ.ಸಿ. ಸುಧಾಕರ್, ಬಿ. ನಾಗೇಂದ್ರ, ಸಂತೋಷ್ ಲಾಡ್, ದಿನೇಶ್ ಗುಂಡೂರಾವ್ ಇರಲಿದ್ದಾರೆ. ಕೈಗಾರಿಕೆಗಳೊಂದಿಗೆ ಚರ್ಚಿಸಿ, ಉದ್ಯೋಗಾಕಾಂಕ್ಷಿಗಳ ಕೌಶಲ ಹಾಗೂ ಕೈಗಾರಿಕೆಗಳ ಅಗತ್ಯದ ನಡುವಿನ ಅಂತರವನ್ನು ಸರಿಪಡಿಸುವ ಬಗ್ಗೆ ದೂರಗಾಮಿ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆಯೂ ಶಿಫಾರಸು ಮಾಡುವಂತೆ ಸಚಿವರ ತಂಡಕ್ಕೆ ಸಿಎಂ ನಿರ್ದೇಶನ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
MUST WATCH
ಹೊಸ ಸೇರ್ಪಡೆ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.