ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಏರಿಕೆ; ಜ. 1ರಿಂದ ಅನ್ವಯವಾಗುವಂತೆ ಜಾರಿ

Team Udayavani, Dec 29, 2023, 11:43 PM IST

teacher

ಬೆಂಗಳೂರು: ಸೇವೆ ಖಾಯಂ ಗೊಳಿಸುವಂತೆ ರಾಜ್ಯವ್ಯಾಪಿ ಮುಷ್ಕರ ನಡೆಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜತೆಗೆ ರಾಜ್ಯ ಸರಕಾರ ಸಂಧಾನಕ್ಕೆ ಮುಂದಾಗಿದೆ. ಜ. 1ರಿಂದ ಅನ್ವಯವಾಗುವಂತೆ ಹಾಲಿ ಇರುವ ಗೌರವಧನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ.

ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರ ಜತೆಗೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರ ದಿಂದ 31 ಸಾವಿರ ರೂ.ವರೆಗೆ ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಪ್ರಯೋ ಜನ ಸಮಾನವಾಗಿ ದೊರಕಲಿದೆ. ರಾಜ್ಯದ ಬೊಕ್ಕಸಕ್ಕೆ ಇದರಿಂದ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದರು.

ನಿವೃತ್ತರಿಗೆ ಭದ್ರತ ಇಡುಗಂಟು
ಅತಿಥಿ ಉಪನ್ಯಾಸಕರಾಗಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿ, 60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡಗಂಟು ನೀಡಲು ನಿರ್ಧರಿಸಲಾಗಿದೆ. ವಾರ್ಷಿಕ 50 ಸಾವಿರ ರೂ.ಗಳಂತೆ ಲೆಕ್ಕಹಾಕಿ 5 ಲಕ್ಷ ರೂ. ಧನಸಹಾಯ ನೀಡಲಾಗುವುದು. ಇದಕ್ಕಾಗಿ 72 ಕೋಟಿ ರೂ. ಕಾಯ್ದಿರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಪ್ರ.ದರ್ಜೆ ಕಾಲೇಜುಗಳ ಪ್ರಾಂಶುಪಾಲರು, ಖಾಯಂ ಸಿಬಂದಿ ಅತಿಥಿ ಉಪನ್ಯಾಸಕರನ್ನು ಗೌರವದಿಂದ ನಡೆಸಿಕೊಳ್ಳಬೇಕು. ಗೌರವಕ್ಕೆ ಚ್ಯುತಿ ಬರದಂತೆ ವರ್ತಿಸಬೇಕು. ಕೌನ್ಸೆಲಿಂಗ್‌ ಮೂಲಕ ಆಯ್ಕೆಯಾದವರಿಗೆ ಕೆಲಸದ ಅವಧಿ ಕಡಿಮೆಯ ಕಾರಣ ವಜಾ ಮಾಡುವಂತಿಲ್ಲ. 10 ತಿಂಗಳು ಗೌರವಧನ ಕಡ್ಡಾಯ. ಪ್ರತೀ ತಿಂಗಳು ಒಂದು ವೇತನ ಸಹಿತ ರಜೆ ನೀಡಲು ಸಮ್ಮತಿಸಲಾಗಿದೆ. ಒಮ್ಮೆ ದಾಖಲೆ ಸಲ್ಲಿಸಿದವರು ಪ್ರತೀ ವರ್ಷ ಸಲ್ಲಿಸುವ ಅಗತ್ಯವಿಲ್ಲ. ಅದಕ್ಕೆ ಹೊಸ ತಂತ್ರಜ್ಞಾನ ಬಳಸಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು.

ಏನಿತ್ತು? ಏನಾಗಲಿದೆ?
ಪ್ರಸ್ತುತ ಅನುಭವ ಆಧರಿಸಿ ಅತಿಥಿ ಉಪನ್ಯಾಸಕರಿಗೆ 26ರಿಂದ 31 ಸಾವಿರ ರೂ.ವರೆಗೆ ವೇತನ.
ಈಗ 5 ಸಾವಿರ ರೂ. ಏರಿಕೆ. 10,600 ಅತಿಥಿ ಉಪನ್ಯಾಸಕರಿಗೆ ಲಾಭ. ಸರಕಾರಕ್ಕೆ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ.
60 ವರ್ಷಕ್ಕೆ ನಿವೃತ್ತರಾಗುವವರಿಗೆ ಭದ್ರತ ಇಡುಗಂಟು. ತಲಾ 5 ಲಕ್ಷ ರೂ. ನೆರವು, ಸರಕಾರಕ್ಕೆ ಹೆಚ್ಚುವರಿ 72 ಕೋಟಿ ರೂ. ನೀಡುವ ಒತ್ತಡ.
ಅತಿಥಿ ಉಪನ್ಯಾಸಕರಿಗೆ 5 ಲಕ್ಷ ರೂ. ಉಚಿತ ವಿಮೆ.

ಟಾಪ್ ನ್ಯೂಸ್

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.