LPG ಕೆವೈಸಿಗೆ ಗಡುವು ವಿಧಿಸಿಲ್ಲ: ಸರಕಾರ ಸ್ಪಷ್ಟನೆ

Team Udayavani, Dec 29, 2023, 11:47 PM IST

vidhana soudha

ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ. ಆದರೆ ಅದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಹಾಗಾಗಿ ಈ ವಿಚಾರದಲ್ಲಿ ಗ್ರಾಹಕರಿಗೆ ಆತಂಕ, ಅನಗತ್ಯ ಗೊಂದಲ ಬೇಡ ಎಂದು ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಡುಗೆ ಅನಿಲ ಸಂಪರ್ಕ ಹೊಂದಿದವರು ಡಿ. 31ರ ಒಳಗೆ ಇ-ಕೆವೈಸಿ ಮಾಡಿಸಬೇಕು. ಇಲ್ಲದಿದ್ದರೆ ಸಬ್ಸಿಡಿ ರದ್ದಾಗಲಿದೆ ಎಂಬ ವದಂತಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದರಿಂದ ಆತಂಕಗೊಂಡ ಜನ ರಾಜ್ಯದ ಹಲವು ಭಾಗಗಳಲ್ಲಿ ಗ್ಯಾಸ್‌ ಏಜೆನ್ಸಿಗಳಿಗೆ ಮುಗಿಬೀಳುತ್ತಿದ್ದಾರೆ. ಇದನ್ನು ಗಮನಿಸಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.
“ತೈಲ ನಿಗಮಗಳಿಂದ ಆಧಾರ್‌ ಲಿಂಕ್‌ ಮೂಲಕ ಇ-ಕೆವೈಸಿ ಬಗ್ಗೆ ಜಾಗೃತಿ, ಕೆವೈಸಿ ಅಭಿಯಾನ ನಡೆದಿರುವುದು ನಿಜ.

ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಇದಕ್ಕೂ ಸಬ್ಸಿಡಿಗೂ ಸಂಬಂಧ ಇಲ್ಲ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ತಿಳಿಸಿದರು.

ಈಗಾಗಲೇ ಬಹುತೇಕ ಗ್ರಾಹಕರು ಇ-ಕೆವೈಸಿ ಮಾಡಿಕೊಂಡಿದ್ದಾರೆ. ಆ ಪೈಕಿ ಕೆಲವರ ಆಧಾರ್‌ ಸಂಖ್ಯೆ ಮತ್ತಿತರ ದಾಖಲಾತಿಗಳ ಅಪ್‌ಡೇಟ್‌ ಆಗುವುದು ಬಾಕಿ ಇರುತ್ತದೆ. ಅದು ಸೇರಿದಂತೆ ಉಜ್ವಲ ಯೋಜನೆ ಫ‌ಲಾನುಭವಿಗಳು, ಇನ್ನೂ ಕೆವೈಸಿ ಮಾಡಿಕೊಳ್ಳದವರನ್ನು ವ್ಯವಸ್ಥೆಯ ವ್ಯಾಪ್ತಿಗೆ ತರಲು ತೈಲ ನಿಗಮಗಳಿಂದ ಆಯಾ ಏಜೆನ್ಸಿಗಳ ಮೂಲಕ ಅಭಿಯಾನದ ರೀತಿಯಲ್ಲಿ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಆದರೆ ಇದಕ್ಕೆ ಯಾವುದೇ ಗಡುವು ವಿಧಿಸಿಲ್ಲ. ಈ ಸಂಬಂಧ ಸ್ವತಃ ಇಲಾಖೆ ಭಾರತೀಯ ತೈಲ ನಿಗಮದ ಕರ್ನಾಟಕ ವಲಯದ ಮುಖ್ಯಸ್ಥರೊಂದಿಗೂ ಚರ್ಚಿಸಲಾಗಿದ್ದು, ಕೆವೈಸಿಗೆ ಯಾವುದೇ ಗಡುವು ನಿಗದಿಪಡಿಸಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ನಿಗಮಗಳಿಗೆ ಇಲಾಖೆ ಪತ್ರ
ಇದಲ್ಲದೆ ತೈಲ ನಿಗಮಕ್ಕೆ ಇಲಾಖೆ ಯಿಂದ ಪತ್ರವನ್ನೂ ಬರೆಯಲಾಗಿದೆ. ಇ-ಕೆವೈಸಿ ಸೇರಿದಂತೆ ಯಾವುದೇ ಚಟುವಟಿಕೆಗಳನ್ನು ಕೈಗೊಳ್ಳುವ ಮುನ್ನ ಇಲಾಖೆ ಗಮನಕ್ಕೆ ತರಬೇಕು. ಇದರಿಂದ ಪೂರಕ ಮಾಹಿತಿ ಜತೆಗೆ ಅಗತ್ಯ ನೆರವು ನೀಡಬಹುದು. ಜತೆಗೆ ಪ್ರಸ್ತುತ ಉಂಟಾಗಿರುವ ಗೊಂದಲವನ್ನೂ ತಪ್ಪಿಸಬಹುದು. ಮುಂಬರುವ ದಿನಗಳಲ್ಲಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ. ಈ ಸಂಬಂಧ ಭಾರತೀಯ ತೈಲ ನಿಗಮದ ರಾಜ್ಯ ಸಮನ್ವಯ ಅಧಿಕಾರಿಯನ್ನು ಸಂಪರ್ಕಿಸಲು ಹಲವು ಬಾರಿ ಪ್ರಯತ್ನಿಸಿದರೂ ಸಂಪರ್ಕಕ್ಕೆ ಸಿಕ್ಕಿಲ್ಲ.

ಟಾಪ್ ನ್ಯೂಸ್

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

School bag

School; ಶೀಘ್ರವೇ ಶಾಲಾ ಮಕ್ಕಳಿಗೆ ಆ್ಯಪ್‌ ಆಧಾರಿತ ಹಾಜರಾತಿ?

BY-Vijayendra

Government Failure: ಹಿಂದೂಗಳ ಮೇಲೆ ಕಾಂಗ್ರೆಸ್‌ ಸರಕಾರ ದಬ್ಬಾಳಿಕೆ: ಬಿಜೆಪಿ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.