Jharkhand ಸ್ಥಾಪನೆಯಾಗುವ ಕಂಪೆನಿಗಳಲ್ಲಿ ಶೇ.75 ಉದ್ಯೋಗ ಸ್ಥಳೀಯರಿಗೆ: ಸಿಎಂ ಸೊರೇನ್
ಇತರ ರಾಜ್ಯಗಳಲ್ಲಿ ಆಗುವುದಿದ್ದರೆ ನಮಲ್ಲೇಕೆ ಸಾಧ್ಯವಿಲ್ಲ ಎಂದು ಹೇಮಂತ್ ಆಕ್ರೋಶ
Team Udayavani, Dec 30, 2023, 12:24 AM IST
ರಾಂಚಿ: ಝಾರ್ಖಂಡ್ನಲ್ಲಿ ಸ್ಥಾಪನೆಗೊಳ್ಳುವ ಕಂಪೆನಿಗಳಲ್ಲಿ ಶೇ.75ರಷ್ಟು ಉದ್ಯೋಗವನ್ನು ಸ್ಥಳೀಯರಿಗೆ ಮೀಸಲಿಡುವ ನಿಯಮ ಜಾರಿಗೊಳಿಸುವುದಾಗಿ ಜಾರ್ಖಂಡ್ ಮುಖ್ಯ ಮಂತ್ರಿ ಹೇಮಂತ್ ಸೊರೇನ್ ಘೋಷಿಸಿದ್ದಾರೆ.
ಸೊರೇನ್ ನೇತೃತ್ವದ ಸರ ಕಾರ ರಚನೆಯಾಗಿ 4 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ರಾಜ್ಯದ ಯುವ ಜನತೆಗೆ ಉದ್ಯೋಗ ಅವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಸ್ಥಾಪನೆಯಾಗುವ ಖಾಸಗಿ ಸಂಸ್ಥೆಗಳಲ್ಲಿ ಶೇ.75ರಷ್ಟು ಉದ್ಯೋಗ ಸ್ಥಳೀಯರಿಗೆ ಮೀಸಲಿರಿಸುವ ನಿಯಮವನ್ನು ಸರ ಕಾರ ಪ್ರಸ್ತಾವಿಸಿದೆ. ಆದರೆ, ವಿಪಕ್ಷಗಳು ಇದರ ವಿರುದ್ಧ ಪಿತೂರಿ ನಡೆಸಿ, ಅಡ್ಡಿಪಡಿಸಲು ಪ್ರಯತ್ನಿಸುತ್ತಿವೆ. ಬೇರೆ ರಾಜ್ಯಗಳು ಸ್ಥಳೀಯರಿಗೆ ಉದ್ಯೋಗ ನೀಡುವುದಕ್ಕೆ ಆದ್ಯತೆ ನೀಡುವಾಗ ನಮ್ಮ ರಾಜ್ಯದಲ್ಲಿ ಏಕೆ ಆಗಬಾರದು ಎಂದು ಪ್ರಶ್ನಿಸಿದರು. ಶೇ.75 ಮೀಸಲನ್ನು ಜಾರಿ ಗೊಳಿಸಲು ನಮ್ಮ ಸರ ಕಾರ ಬದ್ಧವಾಗಿದೆ ಎಂದಿದ್ದಾರೆ.
ಹರಿಯಾಣದಲ್ಲೂ ಇಂಥದ್ದೇ ಕಾನೂನು ಜಾರಿಗೊಳಿಸುವ ಪ್ರಸ್ತಾವವನ್ನು ಪಂಜಾಬ್-ಹರಿ ಯಾ ಣ ಹೈಕೋರ್ಟ್ ಕಳೆದ ತಿಂಗಳು ವಜಾಗೊಳಿಸಿತ್ತು. ಇನ್ನೊಂದೆಡೆ, ರಾಜ್ಯದಲ್ಲಿ ದಲಿತರು ಹಾಗೂ ಬುಡಕಟ್ಟು ಸಮುದಾಯದಲ್ಲಿ ವೃದ್ಧಾಪ್ಯವೇತನ ಪಡೆಯುವ ಹಿರಿಯರ ವಯಸ್ಸಿನ ಮಿತಿಯನ್ನು 60 ರಿಂದ 50ಕ್ಕೆ ಇಳಿಕೆ ಮಾಡುವುದಾಗಿ ಸಿಎಂ ಸೊರೇನ್ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.