Mysore; ನಿಮ್ಮನ್ನು ತಾಯಿ ಚಾಮುಂಡಿ, ಕಾವೇರಿ ತಾಯಿ ಬಿಡಲ್ಲ…: ಪ್ರತಾಪ್ ಸಿಂಹ ಆಕ್ರೋಶ
Team Udayavani, Dec 31, 2023, 10:43 AM IST
ಮೈಸೂರು: “ಮಾನ್ಯ ಸಿದ್ದರಾಮಯ್ಯ ಅವರಿಗೆ ಸಾಷ್ಟಾಂಗ ನಮಸ್ಕಾರಗಳು. ಅವರನ್ನು ನಾನು ಶ್ಲಾಘನೆ ಮಾಡಬೇಕು ಎಂದುಕೊಂಡಿದ್ದೇನೆ. ತನ್ನ ಮಗನ ರಾಜಕೀಯ ಭವಿಷ್ಯಕ್ಕಾಗಿ ತಮ್ಮ ಮಗನನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲು ಯಾರನ್ನು ಬೇಕಾದರೂ ತುಳಿಯುತ್ತಾರೆ. ಇದನ್ನು ಸಿದ್ದರಾಮಯ್ಯ ಅವರಿಂದ ಕಲಿಯಬೇಕು. ಇಂತಹ ತಂದೆ ಎಲ್ಲರಿಗೂ ಸಿಗಲ್ಲ. ನೀವೊಬ್ಬ ಬ್ರಿಲಿಯೆಂಟ್ ಫಾದರ್. ನಿಜಕ್ಕೂ ನಿಮ್ಮನ್ನ ಮೆಚ್ಚಿದ್ದೇನೆ. ನಿಮಗೆ ಸಾಷ್ಟಾಂಗ ನಮಸ್ಕಾರಗಳು. ನಿಮ್ಮಂತಹ ತಂದೆ ಜಗತ್ತಿನಲ್ಲಿ ಯಾರಿಗೂ ಸಿಗಲ್ಲ. ಎಲ್ಲಾ ಮಕ್ಕಳಿಗೂ ನಿಮ್ಮಂತಹ ತಂದೆ ಸಿಗಲ್ಲ” ಇದು ಸಂಸದ ಪ್ರತಾಪ್ ಸಿಂಹ ಅವರ ಮಾತು.
ಸಹೋದರನ ಬಂಧನ ವಿಚಾರಕ್ಕೆ ಭಾವುಕರಾಗಿ ಮಾತನಾಡಿದ ಅವರು, ಮಗನಿಗೆ ಪ್ರತಾಪ ಸಿಂಹ ಅಡ್ಡಿಯಾಗಿದ್ದಾನೆಂದು ಮುಗಿಸಲು ಮುಂದಾಗಿದ್ದೀರಿ. ನಿಮ್ಮಂತಹ ತಂದೆ ಪ್ರಪಂಚದಲ್ಲೇ ಎಲ್ಲೂ ಸಿಗಲ್ಲ. ಎರಡನೇ ಕಾರಣ, ನೀವು ಬ್ರಿಲಿಯೆಂಟ್ ರಾಜಕಾರಣಿ. ಬೆಳಗಾವಿಯಲ್ಲಿ ಹಿಂದುಳಿದ ಮಹಿಳೆಯನ್ನ ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ್ದಾರೆ. ಆ ವಿಚಾರವನ್ನು ನೀವು ನನ್ನ ವಿಷ್ಯ ಇಟ್ಟುಕೊಂಡು ಡೈವರ್ಟ್ ಮಾಡುತ್ತೀರಿ. ನೀವು, ನಿಮ್ಮ ಸಚಿವ ಸಂಪುಟದ ಸದಸ್ಯರು, ಡಿಸಿಎಂ ಎಲ್ಲರೂ ಪಾರ್ಲಿಮೆಂಟ್ ಪಾಸ್ ಇಟ್ಟುಕೊಂಡು ಮಾತನಾಡುತ್ತೀರಿ. ನಿಮಗೆ 40 ವರ್ಷದ ಅನುಭವವಿದೆ. ನನ್ನ ಹೆಸರು ಇಟ್ಟುಕೊಂಡು, ತನಿಖೆ ನಡೆಸಬೇಕೆಂದು ವಿಷಯ ಹಸ್ತಾಂತರಿಸಿದ್ದೀರಿ. ಆರುವರೆ ಕೋಟಿ ಚೆಕ್ ಬೌನ್ಸ್ ಮಾಡಿದ್ದು ಮಧು ಬಂಗಾರಪ್ಪ, ಆರು ತಿಂಗಳು ಜೈಲು ಸಜೆಗೆ ಒಳಗಾಗಿರುವುದು ಮಧು ಬಂಗಾರಪ್ಪ. ಆದರೆ ಆಗಿದ್ದು ಪ್ರತಾಪ್ ಸಿಂಹನ ತಮ್ಮ ಅರೆಸ್ಟ್. ಸಿನಿಮೀಯ ಶೈಲಿ ಚೇಸ್ ಮಾಡಿ ಬಂಧನ. ಮಾಧ್ಯಮ ಮೂಲಕ ವಿಚಾರವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದ್ದೀರಿ. ನಿಜಕ್ಕೂ ನೀವು ಬ್ರಿಲಿಯಂಟ್ ರಾಜಕಾರಣಿ ಎಂದರು.
ಡಿ.16 ರಂದು ಬೇಲೂರಿನ ಜಮೀನಿನ ವಿಚಾರಕ್ಕೆ ನನ್ನ ತಮ್ಮನ ಹೆಸರು ಎಳೆ ತಂದಿದ್ದೀರಿ. ಮರವನ್ನು ಕಡಿದಿದ್ದಾರೆ ಎಂದು ಎಫ್ ಐಆರ್ ದಾಖಲಾಗಿತ್ತು. ಪ್ರಕರಣದಲ್ಲಿ ಜಯಮ್ಮ, ರಾಜೇಶ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಸಹಾಯ ಮಾಡಿದ್ದ ರವಿ ಎಂಬವರು ಪರಾರಿಯಾಗಿದ್ದಾರೆ. ಈವರಗೆ ಮೂವರನ್ನು ಹಿಡಿಯಲು ಆಗಿಲ್ಲ. ಎಲ್ಲಾ ಮರಗಳನ್ನ ಹಾಸನದ ಅರಣ್ಯ ಭವನದಲ್ಲಿ ಇರಿಸಿದ್ದೀರಿ. 24 ನೇ ತಾರೀಖಿನವರಗೆ ನೀವು ಅವರನ್ನ ಬಂಧಿಸಲು ಸಾಧ್ಯವಾಗಿಲ್ಲ. ಹನುಮ ಜಯಂತಿ ಸಂದರ್ಭ ನಾನು ಒಂದು ಹೇಳಿಕೆ ನೀಡಿದ್ದೆ. ಅದಾದ ಎರಡೇ ಗಂಟೆಯಲ್ಲಿ ಪ್ರತಾಪಸಿಂಹನ ತಮ್ಮ ಮರಗಳ್ಳತನ ಮಾಡಿದನೆಂದು ಕಾಂಗ್ರೆಸ್ ನವರು ಪೋಸ್ಟ್ ಹಾಕಿದ್ದರು. ಎಫ್ ಐಆರ್ ನಲ್ಲಿ ನನ್ನ ತಮ್ಮನ ಹೆಸರೇ ಇಲ್ಲ. ಆದರೂ ಆತನನ್ನ ಬಂಧಿಸುವ ಮೂಲಕ ಪ್ರತಾಪಸಿಂಹನನ್ನ ಮುಗಿಸುವ ಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ನನ್ನ ತಮ್ಮ ತಲೆ ಮರೆಸಿಕೊಂಡಿದ್ದಾನಾ? ಎರಡು ದಿನ ಮೊದಲೇ ನನ್ನ ತಮ್ಮ ಅರಣ್ಯ ಇಲಾಖೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾನೆ. ಆತನ ವಿರುದ್ಧ ಎಫ್‌ಐಆರ್ ಆಗಿಲ್ಲ. ಆತ ತಲೆ ಮರೆಸಿಕೊಂಡಿರಲಿಲ್ಲ. ಯಾಕೆ ದಾರಿ ತಪ್ಪಿಸುತ್ತಿದ್ದೀರಿ ಎಂದು ಪ್ರಶ್ನಿಸಿದರು.
ನಿಮ್ಮ ರಾಜಕೀಯ ಭವಿಷ್ಯಕ್ಕಾಗಿ ಪ್ರತಾಪ ಸಿಂಹನನ್ನು ಎಲ್ಲಾರೀತಿ ತುಳಿಯುವ ಪ್ರಯತ್ನ ಮಾಡುತ್ತಿದ್ದೀರಿ. ನನ್ನ ಚಾರಿತ್ರ್ಯವಧೆ ಮಾಡುತ್ತಿದ್ದೀರಿ, ನನ್ನ ಕುಟುಂಬದವರನ್ನು ಬೀದಿಗೆ ಎಳೆ ತರುತ್ತಿದ್ದೀರಿ, ನಿನ್ನೆ ಮೂರು ಗಂಟಗೆ ಅರೆಸ್ಟ್ ಮಾಡಿದ್ದೀರಿ.? ಆದರೆ ಈವರಗೆ ಯಾಕೆ ಕೋರ್ಟಿಗೆ ಪ್ರೊಡ್ಯೂಸ್ ಮಾಡಿಲ್ಲ. ಇಷ್ಟೊತ್ತು ಯಾಕೆ ಇಟ್ಕೊಂಡಿದ್ದೀರಿ.? ನಮ್ಮ ವಯೋವೃದ್ಧ ತಾಯಿ, ತಂಗಿ ಅರೆಸ್ಟ್ ಮಾಡಿ. ನಿಮ್ಮಕುಟುಂಬ ರಾಜಕಾರಣವೇ ಮುಂದುವರಿಯಲಿ. ನಿಮಗೆ ಬಹಳಷ್ಟು ದಾರಿಗಳಿಲ್ಲ ಸರ್. ತಾಯಿ ಚಾಮುಂಡಿ, ಕಾವೇರಿ ತಾಯಿ ಬಿಡಲ್ಲ. ಮೈಸೂರು- ಕೊಡಗು ಜನರು ಬಿಡಲ್ಲ ಎಂದು ಪ್ರತಾಪ್ ಸಿಂಹ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.