Russia ವಿರುದ್ಧ ಉಕ್ರೇನ್ ಪ್ರತೀಕಾರ: ಶೆಲ್ ದಾಳಿಗೆ 21 ನಾಗರಿಕರ ಸಾವು
Team Udayavani, Jan 1, 2024, 1:51 AM IST
ಮಾಸ್ಕೋ: ರಷ್ಯಾದ ಗಡಿ ಭಾಗದಲ್ಲಿರುವ ಬೆಲ್ಗಾರ್ಡ್ ನಗರದಲ್ಲಿ ಶನಿವಾರ ರಾತ್ರಿ ಶೆಲ್ ದಾಳಿ ನಡೆದಿದ್ದು, ಮಕ್ಕಳು ಸೇರಿದಂತೆ 21 ಮಂದಿ ಸಾವಿಗೀಡಾಗಿದ್ದಾರೆ. ದಾಳಿಯಲ್ಲಿ 110ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಷ್ಯಾ- ಉಕ್ರೇನ್ ದಾಳಿ ಆರಂಭವಾದ ಬಳಿಕ ಮಾಸ್ಕೋ ಮೇಲೆ ನಡೆದ ಭೀಕರ ದಾಳಿ ಇದಾಗಿದೆ. ಯುದ್ಧ ಆರಂಭವಾಗಿ 22 ತಿಂಗಳುಗಳು ಕಳೆದಿವೆ.
ಇತ್ತೀಚೆಗಷ್ಟೇ ಉಕ್ರೇನ್ ಮೇಲೆ ರಷ್ಯಾ ಸೈನಿಕರು ಬರೋಬ್ಬರಿ 18 ಗಂಟೆಗಳ ಕಾಲ ವೈಮಾನಿಕ ದಾಳಿ ನಡೆಸಿ, ಉಕ್ರೇನ್ನ 41 ನಾಗರಿಕರನ್ನು ಹತ್ಯೆಗೈದಿದ್ದರು. ಇದರ ಬೆನ್ನಲ್ಲೇ ರಷ್ಯಾ ಮೇಲೆ ದಾಳಿ ನಡೆದಿದೆ. ಹೀಗಾಗಿ, ಶನಿವಾರ ನಡೆದ ದಾಳಿಗೆ ಉಕ್ರೇನ್ ಕಾರಣ ಎಂದು ರಷ್ಯಾ ಆರೋಪಿಸಿದೆ.
ಗಾಜಾದಲ್ಲಿ 35 ಸಾವು: ಇನ್ನೊಂದೆಡೆ, ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಕೇಂದ್ರ ಗಾಜಾದಲ್ಲಿ ರವಿವಾರ ಇಸ್ರೇಲ್ ಪಡೆಗಳು ನಡೆಸಿದ ವೈಮಾನಿಕ ದಾಳಿಯಲ್ಲಿ 35 ಮಂದಿ ಮೃತಪಟ್ಟಿದ್ದಾರೆ. ಕದನ ವಿರಾಮ ಘೋಷಿಸುವಂತೆ ಅಂತಾರಾಷ್ಟ್ರೀಯ ಒತ್ತಡಗಳು ಬರುತ್ತಿದ್ದರೂ, ಯುದ್ಧ ಇನ್ನೂ ಹಲವು ತಿಂಗಳುಗಳ ಕಾಲ ಮುಂದುವರಿಯಲಿದೆ ಎಂದು ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ನೀಡಿದ ಬೆನ್ನಲ್ಲೇ ಈ ದಾಳಿ ನಡೆದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.