NIAಯಿಂದ ರಾಯಭಾರ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಪತ್ತೆ
Team Udayavani, Jan 1, 2024, 1:55 AM IST
ಹೊಸದಿಲ್ಲಿ: ಅಮೆರಿಕ, ಬ್ರಿಟನ್ ಹಾಗೂ ಕೆನಡಾದಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮೇಲೆ ನಡೆದ ದಾಳಿಗಳಿಗೆ ಸಂಬಂಧಿಸಿದಂತೆ 43 ಶಂಕಿತರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಪತ್ತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ರಾಯಭಾರ ಕಚೇರಿಗಳ ಮೇಲಿನ ದಾಳಿಯ ವಿಚಾರಣೆಯನ್ನು ಕೇಂದ್ರ ಗೃಹ ಸಚಿವಾಲಯದ ಆದೇಶದ ಬಳಿಕ 2023ರ ಜೂನ್ನಲ್ಲಿ ಎನ್ಐಎ ಕೈಗೆತ್ತಿಕೊಂಡಿದೆ. ಆ ಬಳಿಕ ಪ್ರಕರಣ ಸಂಬಂಧ ಭಾರತದಲ್ಲೂ 50 ಶೋಧ ಕಾರ್ಯಾಚರಣೆಗಳನ್ನು ನಡೆಸಲಾಗಿದ್ದು, 80ಕ್ಕೂ ಅಧಿಕ ಮಂದಿಯನ್ನು ವಿಚಾರಣೆ ನಡೆಸಿದೆ. ಅಲ್ಲದೇ, ರಾಯಭಾರ ಕಚೇರಿಯ ದಾಳಿಗಳಿಗೆ ಸಂಬಂಧಿಸಿದ ಕೆಲವು ಸಿಸಿಟಿವಿ ವೀಡಿಯೋಗಳನ್ನು ಎನ್ಐಎ ಬಿಡುಗಡೆಗೊಳಿಸಿ, ದುಷ್ಕರ್ಮಿಗಳನ್ನು ಸೆರೆ ಹಿಡಿ ಯಲು ಸಾರ್ವಜನಿಕರ ಸಹಾಯ ಕೋರಿತ್ತು. ಇದೀಗ ಜನರು ನೀಡಿರುವಮಾಹಿತಿಗಳನ್ನೇ ಆಧರಿಸಿ 43 ಶಂಕಿತರನ್ನು ಗುರುತಿಸಲಾಗಿದೆ ಎಂದು ಮೂಲಗಳು ಹೇಳಿವೆ.
2023ರ ಮಾರ್ಚ್ ಮತ್ತು ಜುಲೈಯಲ್ಲಿ ಭಾರತದ ರಾಯಭಾರ ಕಚೇರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿತ್ತು. ಮಾ.19ರಂದು ಲಂಡನ್ನಲ್ಲಿರುವ ರಾಯಭಾರ ಕಚೇರಿ ಮೇಲೆ ಖಲಿಸ್ಥಾನಿ ಉಗ್ರರು 2 ಪ್ರತ್ಯೇಕ ದಾಳಿ ನಡೆಸಿದ್ದರು. ಜು.12ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಇದೇ ಮಾದರಿಯ ದಾಳಿ ನಡೆದಿತ್ತು. ಕೆನಡಾದಲ್ಲಿ ಪ್ರತಿಭಟನೆ ವೇಳೆ ಖಲಿಸ್ಥಾನಿ ಪರ ಪ್ರತಿಭಟನಕಾರರು ಭಾರತದ ಹೈಕಮಿಷನ್ ಮೇಲೆ ಗ್ರೆನೇಡ್ ದಾಳಿಯನ್ನೂ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.