ಬ್ಯಾಡಗಿ-ತಾಯಿ-ಮಕ್ಕಳ ಆರೈಕೆಗೆ “ಕೂಸಿನ ಮನೆ’ ಸಹಕಾರಿ
3 ವರ್ಷದೊಳಗಿನ ಮಕ್ಕಳು ಈ ಮನೆಯಲ್ಲಿ ಮನೆಯಲ್ಲಿ ಆರೈಕೆಯಾಗಲಿದ್ದಾರೆ
Team Udayavani, Jan 1, 2024, 5:30 PM IST
ಬ್ಯಾಡಗಿ: ಬಡತನದ ವಿಷವರ್ತುಲ ಎಂಬ ಸರಪಳಿಯ ಕೊಂಡಿ ಬಿಡಿಸಲು ತಾಯಿ ಮತ್ತು ಮಕ್ಕಳ ಆರೈಕೆ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಕೂಸಿನ ಮನೆ’ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಮಲ್ಲಿಕಾರ್ಜುನ ಅಭಿಪ್ರಾಯ ವ್ಯಕ್ತಪಡಿಸಿದರು.
ಹಾವೇರಿ ಜಿಪಂ, ಬ್ಯಾಡಗಿ ತಾಪಂ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹ ಯೋಗದಲ್ಲಿ ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ “ಕೂಸಿನ ಮನೆ’ ಕೇರ್ ಟೇಕರ್ಸ್ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ನರೇಗಾ ಕೂಲಿಕಾರ್ಮಿಕರು ಕೆಲಸದ ಸ್ಥಳಕ್ಕೆ ಮಕ್ಕಳನ್ನು ಕರೆದುಕೊಂಡು ಬರುವುದು ಮತ್ತು ಬಡ ಕಾರ್ಮಿಕರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ಹೋಗುವುದರಿಂದ ಮಕ್ಕಳ ಪಾಲನೆ, ಪೋಷಣೆ ಅಸಾಧ್ಯ ಎಂಬ ನಿರ್ಧಾರಕ್ಕೆ ಬಂದ ಹಿರಿಯ ಅಧಿ ಕಾರಿಗಳು, ಇದಕ್ಕೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ ಅಪೌಷ್ಟಿಕತೆ ಹೋಗಲಾಡಿಸಲು ಪ್ರತಿ ಗ್ರಾಮದಲ್ಲಿ “ಕೂಸಿನ ಮನೆ’ ಪ್ರಾರಂಭಿಸುತ್ತಿದ್ದಾರೆ. ಹೀಗಾಗಿ, 3 ವರ್ಷದೊಳಗಿನ ಮಕ್ಕಳು ಈ ಮನೆಯಲ್ಲಿ ಮನೆಯಲ್ಲಿ ಆರೈಕೆಯಾಗಲಿದ್ದಾರೆ ಎಂದರು.
ತರಬೇತಿ ಪಡೆದ ತಾವೆಲ್ಲರೂ ಇಲಾಖೆ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸಬೇಕು. ಶಿಶುಗಳನ್ನು ಉತ್ತಮ ರೀತಿಯಲ್ಲಿ ಆರೈಕೆ
ಮಾಡಬೇಕು. ಮಕ್ಕಳ ಆಹಾರ, ಸ್ವಚ್ಛತೆ ಮತ್ತು ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಿ ತಾಲೂಕಿನ ಕೂಸಿನ ಮನೆಗಳು ರಾಜ್ಯದಲ್ಲಿಯೇ ಮಾದರಿಯಾಗುವಂತೆ ಶ್ರಮಿಸಬೇಕೆಂದು ಕರೆ ನೀಡಿದರು.
ಮೊದಲ ಹಂತದಲ್ಲಿ ಬುಡಪನಹಳ್ಳಿ, ಗುಂಡೇನಹಳ್ಳಿ ಹಾಗೂ ಕುಮ್ಮೂರು ಗ್ರಾಪಂ ವ್ಯಾಪ್ತಿಯ 30 ಜನ ಕೇರ್ ಟೇಕರ್‌ಗಳಿಗೆ ತರಬೇತಿ ನೀಡಲಾಗಿದ್ದು, ಎರಡನೇ ಹಂತದಲ್ಲಿ 18 ಗ್ರಾಮ ಪಂಚಾಯಿತಿ ವ್ಯಾಪ್ತಿಯ 180 ಕೇರ್ ಟೇಕರ್‌ಗಳಿಗೆ 3 ವಿಭಾಗಗಳಲ್ಲಿ ತರಬೇತಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ತಾಲೂಕು ಐಇಸಿ ಸಂಯೋಜಕ ಮತ್ತು ತರಬೇತುದಾರ ಕುಮಾರಯ್ಯ ಚಿಕ್ಕಮಠ ಮಾತನಾಡಿ, ಕೂಸಿನ ಮನೆ ಸ್ಥಾಪನೆಯ ಉದ್ದೇಶ
ಮತ್ತು ಮಹತ್ವ ತಿಳಿಸಿದರು. ಕೂಸಿನ ಮನೆಗೆ ದಾಖಲಾಗುವ 3 ವರ್ಷದೊಳಗಿನ ಮಕ್ಕಳ ಲಾಲನೆ, ಪಾಲನೆ ಹಾಗೂ ಅಪೌಷ್ಟಿಕತೆ ನಿವಾರಣೆಗೆ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಕೇರ್ ಟೇಕರ್ ಗಳ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ತಾಪಂ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ತಾಂತ್ರಿಕ ಸಂಯೋಜಕ ಸಂತೋಷ ನಾಯಕ್, ತಾಲೂಕು ಐಇಸಿ ಸಂಯೋಜಕ ಶಾನವಾಜ್ ಜಿಣಗಿ, ಸ್ನೇಹ ಸದನ ಸದಸ್ಯೆ ಗ್ಲೋರಿಯಾ ತೆರೆಸಿಟಾ, ಗ್ರಾಮ ಕಾಯಕ ಮಿತ್ರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.