Vishwakarma; “ದೇಶದ ಅಭಿವೃದ್ಧಿಗೆ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ’

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅಮರ ಶಿಲ್ಪಿ ಜನ್ಮದಿನಾಚರಣೆ

Team Udayavani, Jan 2, 2024, 12:28 AM IST

“ದೇಶದ ಅಭಿವೃದ್ಧಿಗೆ ವಿಶ್ವಕರ್ಮ ಸಮಾಜದವರ ಕೊಡುಗೆ ಅಪಾರ’

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಶ್ರೀ ಅಮರ ಶಿಲ್ಪಿ ಜಕಣಾಚಾರಿ ಜನ್ಮದಿನೋತ್ಸವವನ್ನು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಆಚರಿಸಲಾಯಿತು.

ಅಮರ ಶಿಲ್ಪಿ ಜಕಣಾಚಾರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಮಾತನಾಡಿ, ನೂರಾರು ವರ್ಷಗಳ ಹಿಂದೆಯೇ ಶಿಲ್ಪಕಲೆಗೆ ಅತ್ಯುನ್ನತ ಮೆರುಗು ತಂದು ಇತಿಹಾಸದ ಭವ್ಯ ಸಾಕ್ಷÂ ನೀಡಿದ ಮೇರು ವ್ಯಕ್ತಿ ಅಮರಶಿಲ್ಪಿ ಜಕಣಾಚಾರಿ. ಅವರ ಕಲೆಗಾರಿಕೆ ಅಮರ. ದೇಶವು ಕಲೆ, ಸಂಸ್ಕೃತಿಗೆ ಪ್ರಸಿದ್ಧವಾದುದು. ವಿಶೇಷ ವಾಗಿ ಕರ್ನಾಟಕದ ಬೇಲೂರಿನಲ್ಲಿ ಅದನ್ನು ಕಣ್ಣಾರೆ ನೋಡಲು ಒಂದು ದಿನವೇ ಸಾಲದು. ಇತಿಹಾಸವನ್ನು ಕಲ್ಲಿ ನಲ್ಲಿ ಕೆತ್ತಿ ಈಗಲೂ ಕಣ್ಮನ ಸೆಳೆಯಲು ಕಾರಣರಾಗಿರುವವರು. ಅಂತೆಯೇ ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದರು.

ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಮಂಗಳೂರಿನ ನಿಕಟ ಪೂರ್ವ 2ನೇ ಮೊಕ್ತೇಸರ ಸುಂದರ ಆಚಾರ್ಯ ಬೆಳುವಾಯಿ ಮಾತನಾಡಿ, ಕಲೆ, ಸಂಸ್ಕೃತಿ ಶಿಲ್ಪ ಕಲೆಗಳ ತವರೂರು ಬೇಲೂರು, ಹಳೆಬೀಡು. ಇಲ್ಲಿ ಅಮರ ಶಿಲ್ಪಿಯ ಉತ್ಕೃಷ್ಟ ಕಲೆಯನ್ನು ನಾಡಿನ ಬೇರೆ ಬೇರೆ ಕವಿಗಳು ಶ್ರೇಷ್ಠವಾದುದು ಎಂದು ಬಣ್ಣಿಸಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ| ಸಂತೋಷ್‌ ಕುಮಾರ್‌, ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್‌, 3ನೇ ನಿಕಟ ಪೂರ್ವ ಮೊಕ್ತೇಸರ ಎ. ಲೋಕೇಶ್‌ ಆಚಾರ್ಯ, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮಂಡಳಿಯ ನಿಕಟ ಪೂರ್ವ ಸದಸ್ಯ ಟಿ. ಜಯಕರ್‌ ತಲೆಬೈಲ್‌, ಕೆ.ಕೆ. ವಿಟuಲ ಆಚಾರ್ಯ, ದಾಮೋದರ್‌ ಆಚಾರ್ಯ ಕಲ್ಪನೆ, ಕ್ಷೇತ್ರದ ಆಡಳಿತ ಮಂಡಳಿಯ ನಿಕಟ ಪೂರ್ವ ವಿಶೇಷ ಆಹ್ವಾನಿತ ಸುಜೀರ್‌ ವಿನೋದ್‌ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್‌ ಕಾರ್ಯಕ್ರಮ ನಿರೂಪಿಸಿದರು.

ಮಣಿಪಾಲ: ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಎಂದು ಶಾಸಕ ಯಶ್‌ಪಾಲ್‌ ಎ. ಸುವರ್ಣ ಹೇಳಿದರು.

ಜಿಲ್ಲಾಡಳಿತ, ಜಿ.ಪಂ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಜಿ.ಪಂ.ನಲ್ಲಿ ಸೋಮ ವಾರ ನಡೆದ ವಿಶ್ವಕರ್ಮ ಅಮರ ಜಕಣಾಚಾರಿ ಸಂಸ್ಮರಣ ದಿನಾಚರಣೆ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕೇಂದ್ರ ಸರಕಾರ ವಿಶ್ವಕರ್ಮ ಸಮುದಾಯವನ್ನು ಅಭಿವೃದ್ಧಿಗೊಳಿ ಸುವ ಉದ್ದೇಶದಿಂದ 14 ಸಾವಿರ ಕೋ.ರೂ. ಮೀಸಲಿಟ್ಟು, ಸಮುದಾಯಕ್ಕೆ ಉತ್ತೇಜನ ನೀಡುತ್ತಿದೆ ಎಂದರು.

ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿ, ಶಿಲ್ಪಗಳಲ್ಲಿ ಶಿಲ್ಪಿಯ ಹೆಸರನ್ನು ನಮೂದಿಸುವುದರಿಂದ ಮುಂದಿನ ಜನಾಂಗದವರು ಆತನನ್ನು ಸುಲಭವಾಗಿ ಗುರುತಿಸಲು ಸಾಧ್ಯ. ಈ ಕುರಿತು ಸರಕಾರದ ಗಮನಕ್ಕೆ ತರಲಾಗುವುದು ಎಂದರು.

ವಿಶ್ವಕರ್ಮ ಎಜುಕೇಶನಲ್‌ ಟ್ರಸ್ಟ್‌ ಅಧ್ಯಕ್ಷ ಪ್ರೊ| ಬಿ.ಎ. ಆಚಾರ್ಯ ಅವರು ಜಕಣಾಚಾರಿ ಅವರ ಜೀವನ ಹಾಗೂ ಸಾಧನೆ ಕುರಿತು ಉಪನ್ಯಾಸ ನೀಡಿದರು. ಶಿಲಾಶಿಲ್ಪಿ ರಾಮಚಂದ್ರ ಆಚಾರ್ಯ ಅವರನ್ನು ಸಮ್ಮಾನಿಸಲಾಯಿತು.

ಜಿ.ಪಂ. ಸಿಇಒ ಪ್ರಸನ್ನ ಎಚ್‌., ಉಪ ಕಾರ್ಯದರ್ಶಿ ರಾಜು ಮೊಗವೀರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ., ವಿಶ್ವಕರ್ಮ ಒಕ್ಕೂಟದ ಉಡುಪಿ ಹಾಗೂ ದ.ಕ. ಜಿಲ್ಲಾಧ್ಯಕ್ಷ ಮಧು ಆಚಾರ್ಯ ಮೂಲ್ಕಿ, ರಾಷ್ಟ್ರೀಯ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕುಂಜಿಬೆಟ್ಟು ಅಧ್ಯಕ್ಷ ಕೆ. ವೆಂಕಟೇಶ್‌ ಆಚಾರ್ಯ, ಅ.ಭಾ. ವಿಶ್ವಕರ್ಮ ಮಹಾ ಸಭಾ ಜಿಲ್ಲಾಧ್ಯಕ್ಷ ರಮೇಶ್‌ ಆಚಾರ್ಯ ನೇರಂಬಳ್ಳಿ ಉಪಸ್ಥಿತರಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕಿ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಹರೀಶ್‌ ವಂದಿಸಿದರು. ಮಹೇಶ್‌ ಮಲ್ಪೆ ನಿರೂಪಿಸಿದರು.

 

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.