Belagavi: ಪ್ರೇಮ ವಿಚಾರಕ್ಕೆ ಕಲ್ಲು ತೂರಾಟ… ಮನೆ, ವಾಹನಗಳು ಧ್ವಂಸ, ಬಿಗುವಿನ ವಾತಾವರಣ
Team Udayavani, Jan 2, 2024, 8:24 AM IST
ಬೆಳಗಾವಿ: ಯುವಕ ಹಾಗೂ ಅಪ್ರಾಪ್ತ ಬಾಲಕಿಯ ನಡುವಿನ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸಿದ್ದ ವ್ಯಕ್ತಿಯ ಮನೆಯ ಮೇಲೆ 25 ರಿಂದ 30 ಜನರ ಗುಂಪೊಂದು ಸೋಮವಾರ ರಾತ್ರಿ ಏಕಾಏಕಿ ದಾಳಿ ನಡೆಸಿ ಮನೆ ಧ್ವಂಸಗೊಳಿಸಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಬೆಳಕಿಗೆ ಬಂದಿದ್ದು, ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ತಾಲೂಕಿನ ಕರ್ಲೆ ಗ್ರಾಮದ ಹೈಸ್ಕೂಲ್ ವಿದ್ಯಾರ್ಥಿನಿ ಹಾಗೂ ನಾವಗೆ ಗ್ರಾಮದ ಕಾಲೇಜು ಯುವಕನ ಮಧ್ಯೆ ಪ್ರೇಮಾಂಕುರವಾಗಿತ್ತು. ಈ ಇಬ್ಬರ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ನಾವಗೆ ಗ್ರಾಮದ ಮಾರುತಿ ಹುರಕಡ್ಲಿ ಎಂಬವರು ಪಂಚರಾಗಿ ಮಧ್ಯಸ್ಥಿಕೆ ವಹಿಸಿದ್ದರು. ಇದರಿಂದ ಕುಪಿತಗೊಂಡ ಕೆಲ ಯುವಕರ ಗುಂಪು ಹುರಕಡ್ಲಿ ಅವರ ಮನೆ ಮೇಲೆ ದಾಳಿ ನಡೆಸಿ, ವಾಹನಗಳು ಹಾಗೂ ಮನೆ ಧ್ವಂಸಗೊಳಿಸಿದೆ.
ಕಾರು ದ್ವಿಚಕ್ರ ವಾಹನ ಜಖಂಗೊಂಡಿದ್ದು, ಮನೆಯ ಕಿಟಕಿ, ಬಾಗಿಲುಗಳು ಧ್ವಂಸಗೊಂಡಿವೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದ್ದು ಹೆಚ್ಚಿನ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್, ಗ್ರಾಮೀಣ ಎಸಿಪಿ ಗಿರೀಶ್ ಎಚ್.ವಿ. ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.