Bachelor Party: ಬ್ಯಾಚುಲರ್ ಗೆ ವಾರ್ನಿಂಗ್ ಸಾಂಗ್
Team Udayavani, Jan 2, 2024, 10:48 AM IST
ರಕ್ಷಿತ್ ಶೆಟ್ಟಿ ನಿರ್ಮಾಣದ “ಬ್ಯಾಚುಲರ್ ಪಾರ್ಟಿ’ ಚಿತ್ರ ಜನವರಿ 26ರಂದು ಬಿಡುಗಡೆಯಾಗುತ್ತಿರುವ ವಿಚಾರ ನಿಮಗೆ ಗೊತ್ತೇ ಇದೆ. ಈಗಾಗಲೇ ಚಿತ್ರದ ಫಸ್ಟ್‌ಲುಕ್ ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗ ಚಿತ್ರತಂಡ ಹಾಡೊಂದನ್ನು ಬಿಡುಗಡೆ ಮಾಡಿದೆ. ಅದು ವಾರ್ನಿಂಗ್ ಸಾಂಗ್ ಎಂಬುದು ಹೈಲೈಟ್. ಇದು ಮದುವೆ ಆದವರಿಗೆ, ಆಗ ಬಯಸುವವರಿಗಾಗಿಯೇ ಮಾಡಿರುವ ಥೀಮ್ ಸಾಂಗ್ ಎನ್ನುವುದು ವಿಶೇಷ. “ಬ್ಯಾಡವೋ ಮಗನೇ ನೂರು ಥರದ ಸ್ಕ್ಯಾಮು ಮಾಡುವೆ… ನಾಲ್ಕು ದಿನ ನಗಿಸಿ ಮುಗಿಸೇ ಬಿಡುವ ಸ್ಕೀಮು ಮಾಡುವೆ…’ ಎಂಬ ಹಾಡು ಇದಾಗಿದ್ದು, ಈ ಹಾಡಿಗೆ ವಿಜಯ ಪ್ರಕಾಶ್ ಧ್ವನಿಯಾಗಿದ್ದಾರೆ.
ಅಭಿಜಿತ್ ಮಹೇಶ್ ಹಾಗೂ ವೀರೇಶ್ ಶಿವಮೂರ್ತಿ ಸಾಹಿತ್ಯ ರಚಿಸಿದ್ದು, ಅರ್ಜುನ್ ರಾಮು ಸಂಗೀತ ಸಂಯೋಜಿಸಿದ್ದಾರೆ. ಭೂಷಣ್ ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಜಾಲಿಯಾಗಿ ಕಾಲೆಳೆಯುತ್ತಾ ಈ ಹಾಡು ಸಾಗಿದೆ.
“ಕಿರಿಕ್ ಪಾರ್ಟಿ’ಯ ಬರಹಗಾರ ಅಭಿಜಿತ್ ಮಹೇಶ್ ಈ ಸಿನಿಮಾದ ನಿರ್ದೇಶಕರು. ಈಗಾಗಲೇ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಸೇರಿದಂತೆ ಅನೇಕರ ಸಿನಿಮಾಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ನಿರ್ದೇಶಕರಾಗಿ ಬಡ್ತಿ ಪಡೆದಿದ್ದು, “ಬ್ಯಾಚುಲರ್ ಪಾರ್ಟಿ’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕಚಗುಳಿಯಿಡುವ ಸಂಭಾಷಣೆಗೆ ಖ್ಯಾತರಾಗಿರುವ ಅಭಿ, ತಮ್ಮ ಮೊದಲ ಸಿನಿಮಾದಲ್ಲಿ ಯಾವ ರೀತಿ ಮೋಡಿ ಮಾಡಲಿದ್ದಾರೆ ಎಂಬುದಕ್ಕೆ ಸಿನಿಮಾ ಬಿಡುಗಡೆಯವರೆಗೂ ಕಾಯಬೇಕು.
ಇನ್ನು, ಇತ್ತೀಚೆಗೆ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ದಿಗಂತ್, ಲೂಸ್ ಮಾದ ಯೋಗಿ ಹಾಗೂ ಅಚ್ಯುತ್ ಕುಮಾರ್ ಇದ್ದಾರೆ. ಅದರ ಹಿನ್ನೆಲೆಯಲ್ಲಿ ಬ್ಯಾಂಕಾಕ್‌ನ ಕೆಲವು ಸ್ಥಳಗಳನ್ನೂ ಕಾಣಬಹುದು. ವೀಲ್‌ಚೇ ರ್ ನ ಲ್ಲಿ ಅಚ್ಯುತ್ ಕುಳಿತುಕೊಂಡಿದ್ದರೆ, ಅವರ ಹಿಂದೆ ಯೋಗಿ, ದಿಗಂತ್ ಓಡಿ ಬರುತ್ತಿರುವ ದೃಶ್ಯ ಸದ್ಯ ಗಮನ ಸೆಳೆಯುತ್ತಿದೆ. ವಿಶೇಷವೆಂದರೆ ಈ ಪೋಸ್ಟರ್ ಅನ್ನು ಹ್ಯಾಂಡ್ ಸ್ಕೆಚ್ ಮೂಲಕ ಡಿಸೈನ್ ಮಾಡಲಾಗಿದೆ.
ಪರಂವಃ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ಹಾಗೂ ಅಮಿತ್ ಗುಪ್ತ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಅರವಿಂದ್ ಛಾಯಾಗ್ರಹಣ, ಅರ್ಜುನ್ ರಾಮು ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.