State Govt: ನಾಳೆಯಿಂದ ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮ
Team Udayavani, Jan 2, 2024, 1:49 PM IST
ಬೆಂಗಳೂರು: ಸಾರ್ವಜನಿಕರ ಕುಂದು ಕೊರತೆ ಆಲಿಸುವ ಸಲುವಾಗಿ ಸರ್ಕಾರ ಆರಂಭಿಸಿರುವ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ (ಜ.3) ಚಾಲನೆ ಸಿಗಲಿದೆ.
ನಾಗರಿಕರು ಸರ್ಕಾರಿ ಕಚೇರಿಗಳಿಗೆ ಬರುವ ಬದಲು ಅವರ ಮನೆ ಬಾಗಿಲಲ್ಲೇ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ರೂಪಿಸಲಾಗಿದೆ. ಮೊದಲ ಹಂತದಲ್ಲಿ ಮಹದೇವಪುರ, ಯಲಹಂಕ ಹಾಗೂ ಪೂರ್ವ ವಲಯ ವ್ಯಾಪ್ತಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ. 2ನೇ ಹಂತದಲ್ಲಿ ಹಲವು ಕ್ಷೇತ್ರಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ನಾಗರಿಕರಿಗೆ ಆಸನಗಳ ವ್ಯವಸ್ಥೆ, ಕುಡಿವ ನೀರು, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಮಧ್ಯಾಹ್ನ ಲಘು ಉಪಾಹಾರದ ವ್ಯವಸ್ಥೆ ಮಾಡಲಾಗುವುದು. ವಿದ್ಯುತ್, ಜನರೇಟರ್ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಕಲ್ಪಿಸಲಾಗುವುದು. ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬರುವ ದೂರುಗಳನ್ನು ಸಮಗ್ರ ಸಾರ್ವಜನಿಕ ಕುಂದು ಕೊರತೆ ಪರಿಹಾರ ವ್ಯವಸ್ಥೆ ಸಾಫ್ಟವೇರ್ ದಾಖಲಿಸಲು ಪಾಲಿಕೆ ಸಿಬ್ಬಂದಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಾಫ್ಟವೇರ್ ದಾಖಲಿಸಲು ವೈ-ಫೈ, ಗಣಕ ಯಂತ್ರ, ಪ್ರಿಂಟರ್ ಹಾಗೂ ಸ್ಕ್ಯಾನರ್‌ಗಳ ವ್ಯವಸೆಯೊಂದಿಗೆ 15 ಕೌಂಟರ್‌ಗಳನ್ನು ಸ್ಥಾಪಿಸಲಾಗಿದೆ.
ಒಂದೇ ಸೂರಿನಡಿ ವಿವಿಧ ಇಲಾಖೆಗಳು: ನಾಗರಿಕರ ಸಮಸ್ಯೆಗಳನ್ನು ಒಂದೇ ಸೂರಿನಡಿ ಬಗೆಹರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಮುಖ ಇಲಾಖೆ ಗಳಾದ ಬಿಬಿಎಂಪಿ, ಬೆಂಗಳೂರು ಅಬಿವೃದ್ಧಿ ಪ್ರಾಧಿಕಾರ, ಬೆಸ್ಕಾಂ, ಜಲಮಂಡಳಿ, ಬಿಎಂಆರ್ ಸಿಎಲ್(ಮೆಟ್ರೋ), ಕೊಳೆಗೇರಿ ಅಭಿವೃದ್ಧಿ ಮಂಡಳಿ, ಪೊಲೀಸ್ ಇಲಾಖೆ, ಬಿಎಂಟಿಸಿ, ಕಂದಾಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ಅಧಿಕಾರಿಗಳು ಸ್ಥಳದಲ್ಲೇ ಉಪಸ್ಥಿತರಿರಲಿದ್ದಾರೆ.
ಟೋಕನ್ ವ್ಯವಸ್ಥೆ: ಡಿಸಿಎಂ ಭೇಟಿಗೆ ಒತ್ತು : ಈ ಕಾರ್ಯಕ್ರಮದಲ್ಲಿ ನಾಗರಿಕರು ಅಹವಾಲುಗಳನ್ನು ನೀಡಲು ಸಹಾಯವಾಗಲಿ ಎಂಬ ಉದ್ದೇಶದಿಂದ ಟೋಕನ್‌ಗಳನ್ನು ಪಡೆಯಲು 10 ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ. ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ನೇರವಾಗಿ ಭೇಟಿಯಾಗಲು ವ್ಯವಸ್ಥೆ ಕಲ್ಪಿಸಲಾಗುತ್ತದೆ. ಆಯಾ ಕ್ಷೇತ್ರದ ಶಾಸಕರನ್ನೂ ಆಹ್ವಾನಿಸಲಾಗಿದೆ.
ಎಲ್ಲೆಲ್ಲಿ ಯಾವ ದಿನ ಕಾರ್ಯಕ್ರಮ:
ಜ.3 -ಕೆಆರ್‌ಪುರ ಮತ್ತು ಮಹದೇವಪುರ ವಿಧಾನಸಭಾಕ್ಷೇತ್ರ: – ಸ್ಥಳ: ಐಟಿಐ ಕ್ರೀಡಾಂಗಣ, ದೂರವಾಣಿ ನಗರ, ಕೆ.ಆರ್ ಪುರ
ಜ.5- ಯಲಹಂಕ, ಬ್ಯಾಟರಾಯನಪುರ, ದಾಸರಹಳ್ಳಿ ಕ್ಷೇತ್ರ- ಸ್ಥಳ: ಅಂಬೇಡ್ಕರ್ ಭವನ, ಯಲಹಂಕ ನ್ಯೂ ಟೌನ್
ಜ.6-ಹೆಬ್ಟಾಳ, ಶಿವಾಜಿನಗರ ಮತ್ತು ಪುಲಕೇಶಿನಗರ ಕ್ಷೇತ್ರ- ಸ್ಥಳ: ಆರ್.ಬಿ.ಎ.ಎನ್.ಎಮ್. ಎಸ್ ಹೈಸ್ಕೂಲ್ ಮೈದಾನ, ಸೆಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗಾರ್ಡನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.