Puttur ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ದೂರು ದಾಖಲು
Team Udayavani, Jan 3, 2024, 9:05 PM IST
ಪುತ್ತೂರು: ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರ ವಿರುದ್ಧ ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ನಗರ ಠಾಣೆಗೆ ದೂರು ನೀಡಿದ್ದಾರೆ.
ಅವಧಿ ಮುಗಿದ ಬಾಡಿಗೆ ಕಟ್ಟಡಕ್ಕೆ ಏಲಂ ಪ್ರಕಟಣೆ ಅಂಟಿಸಿದ ನೋಟೀಸನ್ನು ಕಿತ್ತು ಹಾಕಿ, ಅಂಗಡಿ ಕೋಣೆ ಮೇಲೆ ಅಕ್ರಮ ಹಕ್ಕು ಸಾಧಿಸಿದ್ದಲ್ಲದೆ ತಾಲೂಕು ಪಂಚಾಯತ್ ಕಚೇರಿಗೆ ನುಗ್ಗಿ ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಪುತ್ತೂರು ತಾಲೂಕು ಪಂಚಾಯಿತಿ ವಾಣಿಜ್ಯ ಸಂಕೀರ್ಣ-2 ರ ಕೊಠಡಿ ಸಂಖ್ಯೆ 3 ಅನ್ನು ಬಪ್ಪಳಿಗೆ ನಿವಾಸಿ ಹೇಮಲತಾ ಅವರಿಗೆ ಬಾಡಿಗೆಗೆ ನೀಡಲಾಗಿತ್ತು. ಇವರು ದೀರ್ಘಕಾಲ ಬಾಡಿಗೆ ಬಾಕಿ ಇರಿಸಿಕೊಂಡ ಹಿನ್ನೆಲೆಯಲ್ಲಿ ನಿಯಮಾನುಸಾರ ಕೊಠಡಿಗೆ ಬೀಗ ಮುದ್ರೆ ಹಾಕಿ ಮರು ಏಲಂ ಪ್ರಕಟಣೆಯನ್ನು ಪ್ರಚಾರ ಪಡಿಸಲಾಗಿತ್ತು. ಪ್ರಕಟನೆಯ ಪ್ರತಿಯನ್ನು ಕೊಠಡಿಯ ಬಾಗಿಲಿಗೆ ಅಂಟಿಸಲಾಗಿತ್ತು.
ಕೊಠಡಿಯ ಬಾಡಿಗೆದಾರರಾದ ಹೇಮಲತಾ ಅವರ ಪತಿ ರಾಜ ಅವರು ಮಂಗಳವಾರ ಮಧ್ಯಾಹ್ನ ಕಚೇರಿಯ ಏಲಂ ಪ್ರಕಟನೆಯ ನೋಟಿಸನ್ನು ಕಿತ್ತು ತೆಗೆದು ತಾಲೂಕು ಪಂಚಾಯತ್ ಕಚೇರಿಗೆ ಅಕ್ರಮ ಪ್ರವೇಶಿಸಿ ಉದ್ದಟತನದಿಂದ ವರ್ತಿಸಿದ್ದಾರೆ. ಬಾಡಿಗೆ ಪಡೆದ ಕೊಠಡಿಯು ತನ್ನದೆಂದು ಗದರಿಸಿ, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ನವೀನ್ ಕುಮಾರ್ ಭಂಡಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.