![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 3, 2024, 9:30 PM IST
ದಾಂಡೇಲಿ : ನಗರದ ಸಾಹಸಿ ಯುವಕರೊಬ್ಬರು ಜಗತ್ತಿನ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್‌ನ ಬೇಸ್ ಕ್ಯಾಂಪ್ ಏರುವ ಮೂಲಕ ನಗರಕ್ಕೆ ಕೀರ್ತಿಯನ್ನು ತಂದಿದ್ದಾರೆ.
ಈ ಸಾಧನೆಯನ್ನು ಮೆರೆದ ಯುವಕ ಗಾಂಧಿನಗರದ ಮೋಹನ್ ಪರಶುರಾಮ ಚೌವ್ಹಾಣ್ ಎಂಬವರಾಗಿದ್ದಾರೆ. ಹೋಟೆಲ್ ಮ್ಯಾನೇಜ್ಮೆಂಟ್ ಶಿಕ್ಷಣವನ್ನು ಪಡೆದಿರುವ ಮೋಹನ್ ಅವರು ವಿದ್ಯಾರ್ಥಿ ಜೀವನದಲ್ಲಿ ಟ್ರಕ್ಕಿಂಗ್ ಮಾಡುವುದನ್ನು ಹವ್ಯಾಸವಾಗಿಸಿಕೊಂಡವರು.
ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ಏರಬೇಕೆಂದು ಪಣತೊಟ್ಟು, ಬೆಂಗಳೂರಿನಲ್ಲಿ ಖಾಸಗಿ ಕಂಪನಿಗಳಲ್ಲಿ ಉದ್ಯೋಗದಲ್ಲಿರುವ 8 ಜನ ಯುವಕರ ತಂಡದ ಸಾರಥ್ಯವನ್ನು ವಹಿಸಿ ಡಿ.9 ರಂದು ಶಿಖರವೇರುವ ಚಾರಣವನ್ನು ಪ್ರಾರಂಭಿಸಿ ಡಿ.20 ರಂದು 5,364 ಮೀಟರ್ ಎತ್ತರದ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ಅನ್ನು ಏರಿ ಸಾಧನೆಯನ್ನು ಮೆರೆದಿದ್ದಾರೆ.
ಒಟ್ಟು 12 ದಿನಗಳ ಈ ಸಾಹಸ ನಡಿಗೆ ರಣರೋಚಕವಾಗಿದ್ದು, ಮೈನಸ್ 18 ರಿಂದ ಮೈನಸ್ 20 ಡಿಗ್ರಿ ಸೆಲ್ಸಿಯಸ್ ತಾಪಮಾನವನ್ನು ಎದುರಿಸಿ ಎವರೆಸ್ಟ್ ಬೇಸ್ ಕ್ಯಾಂಪನ್ನು ಏರಿದ್ದೇವೆ ಎಂದು ನಗರದಲ್ಲಿ ಮೋಹನ್ ಪರಶುರಾಮ್ ಚೌವ್ಹಾಣ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಪ್ರವಾಸೋದ್ಯಮ ಚಟುವಟಿಕೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಮೋಹನ್ ಪರಶುರಾಮ್ ಚೌವ್ಹಾಣ್ ಅವರು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪನ್ನು ಏರುವ ಮೂಲಕ ದಾಂಡೇಲಿಗೆ ಕೀರ್ತಿಯನ್ನು ತಂದಿದ್ದಾರೆ.
Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ
Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ
ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ
Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ
Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.