![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 3, 2024, 11:42 PM IST
ಹೊಸದಿಲ್ಲಿ: ಜೆಇಇ-ಮೇನ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಶೌಚಾಲಯಕ್ಕೆ ಹೋಗಿ ಬಂದ ನಂತರವೂ(ಟಾಯ್ಲೆಟ್ ಬ್ರೇಕ್ ಬಳಿಕ) ಬಯೋ ಮೆಟ್ರಿಕ್ ಹಾಜರಾತಿ ಮತ್ತು ತಪಾಸಣೆಗೆ ಒಳಪಡಬೇಕಾಗುತ್ತದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಅಧಿಕಾರಿಗಳು ತಿಳಿಸಿದ್ಧಾರೆ.
ಪರೀಕ್ಷಾ ಕಾರ್ಯದಲ್ಲಿ ನಿರತರಾಗುವ ಅಧಿಕಾರಿಗಳು, ವೀಕ್ಷಕರು, ಸಿಬ್ಬಂದಿ ಹಾಗೂ ಉಪಾಹಾರ ನೀಡುವವರು ಕೂಡ ಇದೇ ರೀತಿ ತಪಾಸಣೆಗೆ ಒಳಪಡಬೇಕಾಗುತ್ತದೆ ಎಂದು ಮಾಹಿತಿ ನೀಡಿದ್ಧಾರೆ. “ನಕಲು ಅಭ್ಯರ್ಥಿಗಳು ಸೇರಿದಂತೆ ಯಾವುದೇ ರೀತಿಯ ಅಕ್ರಮಕ್ಕೂ ಅವಕಾಶ ನೀಡದೇ ಎಚ್ಚರವಹಿಸುವ ಉದ್ದೇಶದಿಂದ ಈ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಎನ್‌ಟಿಎ ನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಹೇಳಿದ್ಧಾರೆ.
ಜೆಇಇ ಮೇನ್-2024ರ ಪರೀಕ್ಷೆಯು ಜ.24ರಿಂದ ಫೆ.1ರವರೆಗೆ ನಡೆಯಲಿದೆ. ಫೆ.12ರಂದು ಫಲಿತಾಂಶ ಪ್ರಕಟವಾಗಲಿದೆ. ಇಂಗ್ಲೀಷ್ ಸೇರಿದಂತೆ ಒಟ್ಟು 13 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಆವೃತ್ತಿಯ ಪರೀಕ್ಷೆಗೆ ದಾಖಲೆಯ ಒಟ್ಟು 12.3 ಲಕ್ಷ ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ಧಾರೆ. ದ್ವೆ„ವಾರ್ಷಿಕ ಪರೀಕ್ಷೆಯ ಎರಡನೇ ಆವೃತ್ತಿಯು ಏಪ್ರಿಲ್‌ನಲ್ಲಿ ನಡೆಯಲಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.