Arvind Kejriwal: ಬಂಧನ ಭೀತಿಯಲ್ಲಿ ದೆಹಲಿ ಸಿಎಂ… ನಿವಾಸದ ಬಳಿ ಪೊಲೀಸ್ ಬಿಗಿ ಭದ್ರತೆ
Team Udayavani, Jan 4, 2024, 8:57 AM IST
ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗಿಲ್ಲ. ಹೀಗಿರುವಾಗ ಕೇಜ್ರಿವಾಲ್ ಅವರನ್ನು ಬಂಧಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಆಮ್ ಆದ್ಮಿ ಪಕ್ಷವೂ (ಎಎಪಿ) ಕೇಜ್ರಿವಾಲ್ ಬಂಧನದ ಭೀತಿಯನ್ನು ವ್ಯಕ್ತಪಡಿಸಿದೆ. ಏತನ್ಮಧ್ಯೆ, ದೆಹಲಿ ಪೊಲೀಸರು ಕೇಜ್ರಿವಾಲ್ ಮನೆಗೆ ಹೋಗುವ ಎರಡೂ ರಸ್ತೆಗಳನ್ನು ಮುಚ್ಚಿದ್ದಾರೆ. ಮೂಲಗಳ ಪ್ರಕಾರ ಮುಖ್ಯಮಂತ್ರಿ ನಿವಾಸದ ಸಿಬ್ಬಂದಿಯನ್ನೂ ಒಳಗೆ ಹೋಗದಂತೆ ತಡೆಹಿಡಿಯಲಾಗಿದೆ ಎನ್ನಲಾಗಿದೆ.
ಇಡಿ ಕೇಜ್ರಿವಾಲ್ ನಿವಾಸಕ್ಕೆ ಬಂದರೆ ಪ್ರತಿಭಟನೆ ನಡೆಸಲಾಗುವುದು ಎಂದು ಆಪ್ ನಾಯಕರು ಸ್ಪಷ್ಟಪಡಿಸಿದ್ದಾರೆ. ಆಪ್ ನಾಯಕರು ಕೂಡ ಪಕ್ಷದ ಕಚೇರಿ ತಲುಪಲು ಆರಂಭಿಸಿದ್ದಾರೆ. ಇಡಿ ಸೂಚನೆ ಮೇರೆಗೆ ಅವರು ತನಿಖಾ ಸಂಸ್ಥೆಯ ಮುಂದೆ ಹಾಜರಾಗದಿರುವ ಬಗ್ಗೆ ಬಿಜೆಪಿ ಪ್ರಶ್ನೆಗಳನ್ನು ಎತ್ತಿದೆ. ಇಡಿ ಮುಂದೆ ಹಾಜರಾಗದಿರುವ ಮೂಲಕ ಕೇಜ್ರಿವಾಲ್ ಅವರಿಗೆ ದೇಶದ ಆಡಳಿತ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇಲ್ಲ ಎಂಬುದನ್ನು ತೋರಿಸುತ್ತಿದ್ದಾರೆ ಎಂದು ಬಿಜೆಪಿಯ ದೆಹಲಿ ಘಟಕದ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.
ನೋಟಿಸ್ ಗೆ ಕ್ಯಾರೇ ಎನ್ನದ ಕೇಜ್ರಿವಾಲ್
ವಾಸ್ತವವಾಗಿ, ಇಡಿ ಅರವಿಂದ್ ಕೇಜ್ರಿವಾಲ್‌ಗೆ ಒಟ್ಟು ಮೂರು ಬಾರಿ ನೋಟಿಸ್ ಕಳುಹಿಸಿದೆ. ಮೊದಲ ನೋಟೀಸ್ ಅನ್ನು ನವೆಂಬರ್ 2 ರಂದು ಕಳುಹಿಸಲಾಯಿತು, ನಂತರ ಎರಡನೇ ನೋಟಿಸ್ ಡಿಸೆಂಬರ್ 21 ರಂದು ಬಂದಿತು. ಆದರೆ, ಎರಡೂ ಬಾರಿ ಇಡಿ ಮುಂದೆ ಕೇಜ್ರಿವಾಲ್ ಹಾಜರಾಗಿರಲಿಲ್ಲ. ಇದಾದ ಬಳಿಕ ಜನವರಿ 3ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ದೆಹಲಿ ಸಿಎಂಗೆ ನೋಟಿಸ್ ಕಳುಹಿಸಲಾಗಿತ್ತು. ಈ ಬಾರಿಯೂ ಕೇಜ್ರಿವಾಲ್ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಹಾಜರಾಗಲು ನಿರಾಕರಿಸಿದ್ದಾರೆ.
ಆದರೆ, ಬುಧವಾರ (ಜನವರಿ 3) ಇಡಿ ಮುಂದೆ ಕೇಜ್ರಿವಾಲ್ ಹಾಜರಾಗದಿದ್ದರೂ, ಅವರು ತನಿಖಾ ಸಂಸ್ಥೆಗೆ ಲಿಖಿತ ಉತ್ತರವನ್ನು ಕಳುಹಿಸಿದ್ದಾರೆ. ಇದರಲ್ಲಿ ಅವರು ನೋಟಿಸ್ ಕಾನೂನುಬಾಹಿರ ಎಂದು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಕೇಜ್ರಿವಾಲ್‌ಗೆ ಪದೇ ಪದೇ ನೋಟಿಸ್‌ಗಳನ್ನು ಕಳುಹಿಸಲಾಗುತ್ತಿದ್ದು, ಲೋಕಸಭೆ ಚುನಾವಣೆಯ ಪ್ರಚಾರದಿಂದ ಅವರನ್ನು ಕೇಜ್ರಿವಾಲ್ ಅವರನ್ನು ದೂರವಿಡಲು ಸಂಚು ರೂಪಿಸಲಾಗುತ್ತಿದೆ ಎಂದು ಪಕ್ಷ ಹೇಳಿದೆ.
ಸೇಡಿನ ರಾಜಕಾರಣ
ಇಡಿ ಮೂಲಕ ಪದೇ ಪದೇ ನೋಟಿಸ್‌ಗಳನ್ನು ಕಳುಹಿಸುತ್ತಿರುವುದು ಸೇಡಿನ ರಾಜಕಾರಣದಿಂದ ಪ್ರೇರಿತವಾಗಿದೆ ಎಂದು ಆಪ್ ನಾಯಕ ಅತಿಶಿ ಹೇಳಿದ್ದಾರೆ. ಪದೇ ಪದೇ ವಿಚಾರಣೆಗೆ ಏಕೆ ಕರೆಯಲಾಗುತ್ತಿದೆ ಎಂದು ಇಡಿಗೆ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ತನಿಖಾ ಸಂಸ್ಥೆಯಿಂದ ಯಾವುದೇ ಉತ್ತರ ಸಿಕ್ಕಿಲ್ಲ.
ಇದನ್ನೂ ಓದಿ: Daily Horoscope: ಈ ರಾಶಿಯವರಿಗಿಂದು ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ವೃದ್ಧಿ ಆಗಲಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.