Baagilige Bantu Sarakaara: ಮನೆ ಬಾಗಿಲಿಗೆ ಸರ್ಕಾರ: 4,000 ಅರ್ಜಿ ಸ್ವೀಕಾರ

Team Udayavani, Jan 4, 2024, 12:18 PM IST

Baagilige Bantu Sarakaara: ಮನೆ ಬಾಗಿಲಿಗೆ ಸರ್ಕಾರ: 4,000 ಅರ್ಜಿ ಸ್ವೀಕಾರ

ಬೆಂಗಳೂರು: ನಾಗರಿಕರ ಅಹವಾಲು, ಕುಂದು- ಕೊರತೆಗಳನ್ನು ಆಲಿಸಲು ಕೆ.ಆರ್‌.ಪುರ, ಮಹದೇ ‌ಪುರ ವಿಧಾನಸಭಾ ಕ್ಷೇತ್ರಗಳನ್ನು ಒಟ್ಟುಗೂ ಡಿಸಿ ಹಮ್ಮಿಕೊಂಡಿದ್ದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 4 ಸಾವಿರಕ್ಕೂ ಹೆಚ್ಚಿನ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.

ಕೆ.ಆರ್‌.ಪುರದ ಐಟಿಐ ಕ್ರೀಡಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ ಉದ್ಘಾಟಿಸಿದರು. ನಂತರ ವೇದಿಕೆಯಿಂದ ಇಳಿದು ನೇರವಾಗಿ ಹಿರಿಯ ನಾಗರಿಕರು, ಅಂಗವಿಕಲರ ಬಳಿಗೆ ತೆರಳಿ ಅಹವಾಲು ಸ್ವೀಕರಿಸಿದ್ದು ವಿಶೇಷವಾಗಿತ್ತು. ಬೆಳಗ್ಗೆಯಿಂದ ಸಂಜೆವರೆಗೆ 4 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನು ವಿಲೇವಾರಿ ಮಾಡಿದರು.

ಸಲ್ಲಿಕೆಯಾದ ಪ್ರಮುಖ ಸಮಸ್ಯೆಗಳಿವು: ರಾಜಕಾಲುವೆ ಒತ್ತುವರಿಯಿಂದ ಮಳೆ ನೀರು ಮನೆಗೆ ನುಗ್ಗುತ್ತಿದೆ, ರಸ್ತೆ ಅಗಲೀಕರಣ ಪರಿಹಾ ರದ ಹಣ, ಸೂರು ನೀಡಿ, ಸ್ಮಶಾನಕ್ಕೆ ಜಾಗ ನೀಡಿ, ಅಕ್ರಮ ಕಟ್ಟಡಗಳಿಂದ ತೆರಿಗೆ ಸಂಗ್ರಹಿಸಿ, ಅಂಗನ ವಾಡಿ ಕಟ್ಟಡ, ನಿವೇಶನ ನೀಡಿ, ಪೌರಕಾರ್ಮಿಕರ ಸಮಸ್ಯೆ ಪರಿಹಾರ, ಕಾರ್ಮಿಕರಿಗೆ ಪಿಂಚಣಿ, ಪಿಎಫ್ ಹಣ ಹೀಗೆ ಸಾವಿರಾರು ಸಮಸ್ಯೆಗಳ ಅರ್ಜಿಗಳನ್ನು ಹೊತ್ತು ಬಂದವರಿಗೆ ಪರಿಹಾರ ಸೂಚಿಸಿ ಕಳುಹಿಸಲಾಯಿತು.

1 ಲಕ್ಷ ಪರಿಹಾರ ಪಡೆದುಕೊಳ್ಳಿ: ವಿಜಿನಾಪುರದ ವಾಜಿದ್‌- ಮಸ್ಕಾನ್‌ ದಂಪತಿ ಮಗ ಮುಜಾಯಿಲ್‌ ಡೊಂಕಾದ ಬೆನ್ನಮೂಳೆ ಸಮಸ್ಯೆಯಿಂದ ಬಳಲುತ್ತಿದ್ದು, ಪರಿಹಾರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಕೇವಲ ಅರ್ಜಿ ಕೊಟ್ಟು ಹೋಗುತ್ತಿದ್ದ ವೇಳೆ ಇವರನ್ನು ಮತ್ತೆ ವೇದಿಕೆಗೆ ಕರೆದ ಡಿಸಿಎಂ, ಕಮಿಷನರ್‌ ಕಚೇರಿಯಿಂದ ಕರೆ ಬರುತ್ತದೆ. ಮಗನ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಶಾಲೆಗೆ ಕಾಂಪೌಂಡ್‌ ಇಲ್ಲ: ಸರ್ಕಾರಿ ಶಾಲೆಗೆ ಕಾಂಪೌಂಡ್‌ ಇಲ್ಲ, ಶಾಲೆಗೆ ಕಾಂಪೌಂಡ್‌ ಇಲ್ಲದೆ ತೊಂದರೆಯಾಗುತ್ತಿದೆ ಎಂದ ಗೆದ್ದಲಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಲಕ್ಷ್ಮೀದೇವಿ ಅವರ ಮನವಿಗೆ ಡಿಸಿಎಂ ಸ್ಪಂದಿಸಿದರು. “ಈ ವರ್ಷದಲ್ಲಿ ಇದೇ ನನ್ನ ಮೊದಲ ಕೆಲಸವಾಗಲಿದೆ. ಶೀಘ್ರದಲ್ಲೇ ನಿರ್ಮಾಣ ಮಾಡಲಾಗುವುದು’ ಎಂದು ವಿವರಿಸಿದರು.

ಸ್ವಾಧೀನಪಡಿಸಿಕೊಂಡ ಜಾಗಕ್ಕೆ 5 ವರ್ಷ ಆದ್ರೂ ಪರಿಹಾರ ಸಿಕ್ಕಿಲ್ಲ? : ಕೆ.ಆರ್‌.ಪುರದಲ್ಲಿನ 80 ಅಡಿ ರಸ್ತೆ ಅಗಲೀಕರಣದ ವೇಳೆ ಜಾಗ ಕಳೆದುಕೊಂಡಿದ್ದು, 5 ವರ್ಷದಿಂದ ಪರಿಹಾರಕ್ಕೆ ಅಲೆದಾಡುತ್ತಿರುವೆ ಎಂದು ಭಾಗ್ಯಮ್ಮ ಎಂಬುವರು ಕಣ್ಣೀರಾದರು. ಪಕ್ಕದಲ್ಲೇ ಇದ್ದಂತಹ ಶಾಸಕ ಬೈರತಿ ಬಸವರಾಜು ಅವರಿಗೆ “ಕೂಡಲೇ ಈ ಸಮಸ್ಯೆ ಬಗೆಹರಿಸಿ’ ಎಂದು ಡಿಸಿಎಂ ಸೂಚಿಸಿದರು. ಹೊಸಕೋಟೆಯಲ್ಲಿ ಜೂನಿಯರ್‌ ಲೈನ್‌ಮನ್‌ ಆಗಿ ಕೆಲಸ ನಿರ್ವಹಣೆ ಮಾಡುತ್ತಿದ್ದ ಎಂ.ಜಿ.ಹರೀಶ್‌ ಕಂಬದಿಂದ ಬಿದ್ದು ಸ್ವಾಧೀನ ಕಳೆದುಕೊಂಡಿದ್ದಾರೆ ಎಂದು ಅವರ ಪತ್ನಿ ಮನವಿ ಸಲ್ಲಿಸಿದಾಗ, ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆದೇಶಿಸಿದರು.

ಶಾಸಕರೇ ಇದು ನಿಮ್ಮ ಸಮಸ್ಯೆಬೇಗ ಬಗೆಹರಿಸಿಕೊಳ್ಳಿ: ಡಿಕೆಶಿ : ಕೆ.ಆರ್‌.ಪುರಂ ಶಾಸಕರಾದ ಬೈರತಿ ಬಸವರಾಜು ಅವರ ಸಂಬಂಧಿ ವೇಣು ಎಂಬುವರು ಸಾರ್ವಜನಿಕ ರಸ್ತೆಯನ್ನು ಬಂದ್‌ ಮಾಡಿ ತೊಂದರೆ ಕೊಡುತ್ತಿದ್ದಾರೆ. ಹೆಣ್ಣೂರು ಪೊಲೀಸ್‌ ಠಾಣೆಗೆ 3 ಬಾರಿ ದೂರು ನೀಡಿದರೂ ಕ್ರಮ ತೆಗೆದುಕೊಂಡಿಲ್ಲ ಎಂದು ಬೈರತಿ ಬಸವರಾಜು ಸಮ್ಮುಖದಲ್ಲೇ ಖಾದರ್‌ ಮೊಹಿದ್ದೀನ್‌ ಎಂಬುವರು ಡಿ.ಕೆ.ಶಿವಕುಮಾರ್‌ ಬಳಿ ಆರೋಪಿಸಿದರು. “ಶಾಸಕರೇ ಇದು ನಿಮ್ಮ ಸಮಸ್ಯೆ ಬೇಗ ಬಗೆಹರಿಸಿಕೊಳ್ಳಿ’ ಎಂದು ಬೈರತಿ ಬಸವರಾಜುಗೆ ಡಿಸಿಎಂ ಸೂಚಿಸಿದರು.

ಅಹವಾಲುಗಳ ತ್ವರಿತ ವಿಲೇವಾರಿಗೆ ನೋಡಲ್‌ ಅಧಿಕಾರಿಗಳ ನಿಯೋಜನೆ : ಜನರ ಅಹವಾಲುಗಳನ್ನು ತ್ವರಿತ ವಿಲೇವಾರಿಗೆ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗು ವುದು ಎಂದು ಡಿಸಿಎಂ ಇದೇ ಸಂದರ್ಭದಲ್ಲಿ ತಿಳಿಸಿದರು. ಈ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿ, ಎಲ್ಲ ಅರ್ಜಿಗಳನ್ನು ಒಂದೇ ದಿನ ಪರಿಹಾರ ಮಾಡಲು ಆಗುವುದಿಲ್ಲ. ಕುಡಿಯುವ ನೀರು, ರಸ್ತೆ, ಒಳಚರಂಡಿ, ಸ್ವಚ್ಛತೆ ಕುರಿತ ದೂರು ಗಳನ್ನು ಆದ್ಯತೆ ಮೇರೆಗೆ ಬಗೆಹರಿಸಲಾಗುವುದು. ಬೇರೆ ಮನವಿಗಳನ್ನು ಹಂತವಾಗಿ ಬಗೆಹರಿಸಲಾಗು ವುದು. ಇದರ ಮೇಲ್ವಿಚಾರಣೆಗೆ ನೋಡಲ್‌ ಅಧಿಕಾರಿ ಗಳನ್ನು ನೇಮಿಸಲಾಗುವುದು ಎಂದು ವಿವರಿಸಿದರು. ನಾಳೆ, ನಾಡಿದ್ದು ಕಾರ್ಯಕ್ರಮ ಮುಂದುವರಿಕೆ: ಇಡೀ ತಿಂಗಳು ಈ ಕಾರ್ಯಕ್ರಮವನ್ನು ಬೆಂಗಳೂರು ನಗರದಲ್ಲಿ ಮುಂದುವರಿಸುತ್ತೇವೆ. ಜ.5ರಂದು ಯಲಹಂಕ, ದಾಸರಹಳ್ಳಿ, ಬ್ಯಾಟರಾಯನಪುರದಲ್ಲಿ ಇದೆ. 6ರಂದು ಪುಲಕೇಶಿನಗರ, ಶಿವಾಜಿನಗರ, ಹೆಬ್ಟಾಳದಲ್ಲಿ ಇದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

1 ಲಕ್ಷ ರೂ. ಲಂಚ ಪಡೆದ ಸಿಬ್ಬಂದಿ ಅಮಾನತಿಗೆ ಸ್ಥಳದಲ್ಲೇ ಸೂಚನೆ:

ಬಿಬಿಎಂಪಿಯಲ್ಲಿ ಕೆಲಸ ಮಾಡುವ ವಿನಯ್, ವೆಂಕಟೇಶ್‌ ಎಂಬುವರು ಎ ಖಾತೆ ಮಾಡಿಸಿಕೊಡುತ್ತೇವೆ ಎಂದು 1 ಲಕ್ಷ ರೂ. ಲಂಚ ಪಡೆದು ಮೋಸ ಮಾಡಿದ್ದಾರೆ. ನ್ಯಾಯ ಕೊಡಿಸಿ ಎಂದು ಟಿ.ಸಿ.ಪಾಳ್ಯ ಆನಂದ ನಗರದ ರೀತಮ್ಮ ಎಂಬುವರು ಅಳಲು ತೋಡಿಕೊಂಡರು. ಕೂಡಲೇ ಲಂಚ ಪಡೆದ ನೌಕರರನ್ನು ಅಮಾನತು ಮಾಡಬೇಕು, ಅವರ ವಿರುದ್ಧ ಪೊಲೀಸ್‌ ಕೇಸ್‌ ದಾಖಲಿಸಬೇಕು ಎಂದು ಬಿಬಿಎಂಪಿ ಕಮಿಷನರ್‌ಗೆ ಸೂಚಿಸಿದರು.

ಸ್ಥಳದಲ್ಲೇ ಡಿಸಿಎಂ ಅಮಾನತಿಗೆ ಸೂಚಿಸಿರುವುದನ್ನು ಕಂಡು ನೆರೆದಿದ್ದ ಸಭಿಕರು ಶಿಳ್ಳೆ, ಚಪ್ಪಾಳೆಗಳ ಸುರಿಮಳೆಗೈದರು.

ಅಧಿಕಾರಿಗಳ ದಂಡೇ ಹಾಜರು: ಶಾಸಕರಾದ ಬೈರತಿ ಬಸವರಾಜ್‌, ಮಂಜುಳಾ ಅರವಿಂದ ಲಿಂಬಾ ವಳಿ, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಪ್ರೊ.ರಾಜೀವ್‌ ಗೌಡ, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌, ವಿಶೇಷ ಆಯುಕ್ತ ಮುನೀಶ್‌ ಮೌದ್ಗೀಲ್, ಬಿಎಂಆರ್‌ಡಿಎ ಆಯುಕ್ತ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್‌, ಬಿಡಿಎ ಆಯುಕ್ತ ಜಯರಾಮ್, ಬೆಂಗಳೂರು ಜಿಲ್ಲಾಧಿಕಾರಿ ದಯಾನಂದ್‌, ಬಿಡಬ್ಲ್ಯೂಎಸ್‌ಎಸ್‌ಬಿ ಎಂಡಿ ರಾಮಪ್ರಸಾದ್‌ ಮನೋಹರ್‌, ಬಿಎಂಟಿಸಿ ಎಂಡಿ ಸತ್ಯವತಿ ಮತ್ತಿತರ ಹಿರಿಯ ಅಧಿಕಾರಿಗಳ ದಂಡೇ ಕಾರ್ಯಕ್ರಮಲ್ಲಿ ಹಾಜರಿತ್ತು.

ಟಾಪ್ ನ್ಯೂಸ್

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.