Arrested: 1.10 ಕೋಟಿ ಮೌಲ್ಯದ ಶೂಗಳ ಕಳ್ಳತನ: ಸೆರೆ
Team Udayavani, Jan 4, 2024, 3:10 PM IST
ಆನೇಕಲ್: ಗೋದಾಮಿನಿಂದ ಬ್ರಾಂಡೆಡ್ ನೈಕಿ ಕಂಪನಿಯ ಶೂಗಳನ್ನು ವಾಹನದ ಚಾಲಕನೇ ಕದ್ದು ವಾಹನವನ್ನು ರಸ್ತೆಯಲ್ಲಿ ಬಿಟ್ಟು ಹೋಗಿದ್ದ ಪ್ರಕರಣ ಭೇದಿಸುವಲ್ಲಿ ಅತ್ತಿಬೆಲೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದ ಅವರು, ಅಸ್ಸಾಂ ಮೂಲದ ಸುಭಾನ್ ಪಾಷಾ, ಮನ್ಸರ್ ಅಲಿ, ಶದ್ದುಲ್ ರೆಹಮಾನ್ ಬಂಧಿತರು. ಡಿ.21ರಂದು ಆನೇಕಲ್ ಸಮೀಪದ ಶೆಟ್ಟಿಹಳ್ಳಿ ಬಳಿಯ ನೈಕಿ ಗೋದಾಮಿನಿಂದ ಹೊಸಕೋಟೆ ಬಳಿಯ ಮಿಂತ್ರ ಗೋದಾಮಿಗೆ ಹೊರಟಿದ್ದ ಶೂ ಹೊತ್ತ ಈಚರ್ ವಾಹನ ಕಾಣೆಯಾಗಿತ್ತು. ಸುಮಾರು 1.10 ಕೋಟಿ ರೂ. ಮೌಲ್ಯದ 1,558 ಜತೆ ಶೂ ಸಹಿತ ಈಚರ್ ವಾಹನ ಕಳುವಾಗಿತ್ತು. ಈ ಬಗ್ಗೆ ಅತ್ತಿಬೆಲೆ ಠಾಣೆಯಲ್ಲಿ ದೂರು ದಾಖಲಾಗಿತ್ತು. ತನಿಖೆಗಿಳಿದ ಪೊಲೀಸರು, ಈಚರ್ ವಾಹನ ಚಾಲಕನ ಹಿಸ್ಟರಿ ಚೆಕ್ ಮಾಡಿದ್ದಾರೆ. ಆತ ಈ ಹಿಂದೆ ಬೆಲೆ ಬಾಳುವ ಬ್ರಾಂಡೆಡ್ ಬಟ್ಟೆಗಳನ್ನು ಇದೇ ರೀತಿ ವಾಹನ ಸಮೇತ ಕದ್ದು, ಜೈಲು ಸೇರಿದ್ದ ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದಾಗ ಅಸ್ಸಾಂ ಮೂಲದ ಮೂವರು ಸಿಕ್ಕಿಬಿದ್ದಿದ್ದಾರೆ.
ಅಂದು ಆನೇಕಲ್ ಗೋದಾಮಿನಿಂದ ಶೂ ತುಂಬಿಕೊಂಡು ಹೊರಟ ವಾಹನವನ್ನು ಹೊಸಕೋಟೆ ಬದಲು ನಗರದ ರಜಾಕ್ ಪಾಳ್ಯಕ್ಕೆ ಕದ್ದೊಯ್ದಿದ್ದರು. ಅಲ್ಲಿನ ಮನೆಯೊಂದರಲ್ಲಿ ಅನ್ ಲೋಡ್ ಮಾಡಿ, ಈಚರ್ ವಾಹನವನ್ನು ಚಿಕ್ಕಜಾಲದ ಬಳಿ ಬಿಟ್ಟು ಪರಾರಿಯಾಗಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಡಿಷನಲ್ ಎಸ್.ಪಿ ಎಂ.ಎಲ್ .ಪುರುಷೋತ್ತಮ್, ನಾಗರಾಜ್, ಡಿವೈಎಸ್ಪಿ ಮೋಹನ್, ಸಿಪಿಐ ರಾಘವ್, ಪಿಎಸ್ಐ ಮುರಳಿ, ಸಿಬ್ಬಂದಿಗಳಾದ ನಾಗೇಶ್, ಮಹೇಶ್, ಇರ್ಫಾನ್, ಅರುಣ್ ಕುಮಾರ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.