BK Hariprasad ರಾಜ್ಯದಿಂದಲೇ ಗಡೀಪಾರು ಮಾಡಿ: ಶ್ರೀರಾಮುಲು
Team Udayavani, Jan 5, 2024, 7:03 PM IST
ಕೊಪ್ಪಳ: ಗೋಧ್ರಾ ಘಟನೆ ಪುನರಾರ್ವತನೆ ಹೇಳಿಕೆ ನೀಡಿರುವ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರನ್ನು ಕೇಂದ್ರ ತನಿಖಾ ಸಂಸ್ಥೆಗಳು ವಶಕ್ಕೆ ಪಡೆದು ತನಿಖೆ ಮಾಡಬೇಕು. ಅವರನ್ನು ರಾಜ್ಯದಿಂದಲೇ ಗಡೀಪಾರು ಮಾಡಬೇಕು ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಆಗ್ರಹಿಸಿದರು.
ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 500 ವರ್ಷಗಳ ಹೋರಾಟದ ಫಲವಾಗಿ ರಾಮಮಂದಿರ ನಿರ್ಮಾಣವಾಗಿದ್ದು, ಜ.22ರಂದು ಉದ್ಘಾಟನೆ ನಡೆಯಲಿದೆ. ರಾಮಮಂದಿರಕ್ಕೆ ಕಳಂಕ ತರುವುದಕ್ಕೆ ಈ ರೀತಿ ಹೇಳಿಕೆ ನೀಡಿದ್ದಾರೆ. ಸತ್ಯಾಸತ್ಯತೆ ತಿಳಿಯಲು ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸಬೇಕು ಎಂದರು.
ಕ್ಷುಲ್ಲಕ ರಾಜಕಾರಣ, ರಾಜಕಾರಣದ ಪ್ರತಿಷ್ಠೆಗಾಗಿ ಈ ರೀತಿಯಾಗಿ ಮಾತನಾಡಿರುವುದು ನಾಚಿಕೆಗೇಡಿತನ. ಹರಿಪ್ರಸಾದ್ ಹೇಳಿಕೆಯ ಕುತಂತ್ರದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಕೂಡಲೇ ಅವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಕಾಲದಲ್ಲಿ ಜಾತಿಗಳನ್ನು ಒಡೆಯಲಾಗಿದ್ದು, ಪ್ರಧಾನಿ ಮೋದಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ನವರಿಗೆ ನೈತಿಕ ಹಕ್ಕಿಲ್ಲ. 31 ವರ್ಷದ ಬಳಿಕ ಕರಸೇವಕರನ್ನು ಬಂಧಿಸುವ ಕೆಲಸ ಮಾಡುತ್ತಿದೆ. ಇದೆಲ್ಲ ದ್ವೇಷ ರಾಜಕಾರಣ. ಇದೊಂದು ಸರ್ಕಾರವಾ? ಎಂದ ಅವರು, ಮೋದಿ ಹಾಗೂ ರಾಹುಲ್ ನಡುವೆ ಆಕಾಶ-ಭೂಮಿಯಷ್ಟು ವ್ಯತ್ಯಾಸವಿದೆ. ರಾಮನನ್ನು, ಹನುಮಂತನನ್ನು ಕಾಲ್ಪನಿಕ ವ್ಯಕ್ತಿಗಳು ಎಂದಿದ್ದು ಕಾಂಗ್ರೆಸ್ ಎಂದರು.
ಸಹೋದರಿ ಶಾಂತಾ ವೈಎಸ್‌ಆರ್ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿದ ಅವರು, ಆಕೆ ನನ್ನ ತಂಗಿ. ಆಂಧ್ರದಲ್ಲಿದ್ದು ಅಲ್ಲಿನ ರಾಜಕಾರಣದ ವಿಷಯ ಅವರಿಗೆ ಬಿಟ್ಟಿದ್ದು. ಜನರ ಆಶೀರ್ವಾದ, ಕಾರ್ಯಕರ್ತರಿದ್ದು ನಾನು ಏಕಾಂಗಿಯಲ್ಲ. ಮೋದಿ ಪ್ರಧಾನಿಯನ್ನಾಗಿ ಮಾಡಲು ಕಾರ್ಯಕರ್ತನಾಗಿ ದುಡಿಯುತ್ತೇನೆ. ರಾಜ್ಯದಲ್ಲಿ ಸರ್ಕಾರ ಉಳಿದಿಲ್ಲ. ಜನರ ಪರಿಸ್ಥಿತಿ ಅಯೋಮಯವಾಗಿದೆ. 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.