Facebook account: ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರ ಫೇಸ್ಬುಕ್ ಖಾತೆ ಹ್ಯಾಕ್: ದೂರು
Team Udayavani, Jan 6, 2024, 11:05 AM IST
ಬೆಂಗಳೂರು: ಸೈಬರ್ ಕಳ್ಳರು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರ ಫೇಸ್ಬುಕ್ ಖಾತೆ ಹ್ಯಾಕ್ ಮಾಡಿದ್ದಾರೆ. ಮಹಿಳಾ ಪೊಲೀಸ್ ಅಧಿಕಾರಿ ಕೆ.ಮೋಹಿನಿ ಕೇಂದ್ರ ವಿಭಾಗದ ಸಿಇಎನ್ ಠಾಣೆಗೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದೆ.
8 ವರ್ಷ ಹಿಂದೆ ಪೇಸ್ಬುಕ್ ಖಾತೆ ರಚಿಸಿದ್ದ ಮೋಹಿನಿ, ಅದನ್ನು ಆಗಾಗ ಬಳಸುತ್ತಿದ್ದರು. ಜ.2ರಂದು ಫೇಸ್ಬುಕ್ ಬಳಸುತ್ತಿರಬೇಕಾದರೆ, ಅಪರಿಚಿತ ವ್ಯಕ್ತಿಗಳು ಮೋಹಿನಿ ಅವರ ಫೇಸ್ಬುಕ್ ಖಾತೆಯನ್ನು ಹ್ಯಾಕ್ ಮಾಡಿ, ಪಾಸ್ವರ್ಡ್ಅನ್ನು ಬದಲಿಸಿದ್ದಾರೆ. ಅಲ್ಲದೆ ಮೋಹಿನಿ ಅವರ ಫೋಟೋಗಳನ್ನು ಹ್ಯಾಕ್ ಮಾಡಿರುವ ಅಪರಿಚಿತ ವ್ಯಕ್ತಿಗಳು ದುರ್ಬಳಕೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಪೇಸ್ಬುಕ್ ಖಾತೆಯನ್ನು ಡಿಲಿಟ್ ಮಾಡುವಂತೆ ಹಾಗೂ ಹ್ಯಾಕ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮೋಹಿನಿ ಉಲ್ಲೇಖೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.