ವಿಕ್ರಂ ಸಿಂಹ ಪ್ರಕರಣದಲ್ಲಿ ಸಿದ್ದು ಪಾತ್ರದ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ಧ: ಎಚ್‌ಡಿಕೆ
-ಗೃಹ ಸಚಿವ ಪರಮೇಶ್ವರ್, ಹಾಸನ ಉಸ್ತುವಾರಿ ಸಚಿವ ರಾಜಣ್ಣಗೆ ಸವಾಲು
Team Udayavani, Jan 6, 2024, 9:33 PM IST
ಬೆಂಗಳೂರು: ದಾಖಲೆ ಇಟ್ಟುಕೊಂಡೇ ವಿಕ್ರಂ ಸಿಂಹ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಬೇಕಿದ್ದರೆ ದಾಖಲೆಗಳನ್ನು ನಾನೇ ತಂದುಕೊಡುತ್ತೇನೆ. ಅದನ್ನು ತೆಗೆದುಕೊಂಡು ಎಲ್ಲಿಗೆ ಬರಲಿ? ದಾಖಲೆಗಳನ್ನು ಆಧರಿಸಿ ಕ್ರಮ ಜರಗಿಸುವ ಧೈರ್ಯ ತೋರುವಿರಾ ಅಥವಾ ಪಲಾಯನ ಮಾಡುವಿರಾ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಅವರು ಗೃಹ ಸಚಿವ ಪರಮೇಶ್ವರ್ ಮತ್ತು ಹಾಸನದ ಉಸ್ತುವಾರಿ, ಸಹಕಾರ ಸಚಿವ ಕೆ. ಎನ್. ರಾಜಣ್ಣ ಅವರಿಗೆ ಸವಾಲು ಹಾಕಿದ್ದಾರೆ.
ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಸೋದರ ವಿಕ್ರಂ ಸಿಂಹ ಅವರ ಬಂಧನ ಪ್ರಕರಣದಲ್ಲಿ ಸಿಎಂ ಪಾತ್ರವಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಆರೋಪಿಸಿದ್ದರು. ಇದನ್ನು ತಳ್ಳಿಹಾಕಿದ್ದ ಪರಮೇಶ್ವರ್ ಮತ್ತು ರಾಜಣ್ಣ ಅವರು, ಕುಮಾರಸ್ವಾಮಿ ಏನೇನೋ ಹೇಳುತ್ತಾರೆ, ಅದಕ್ಕೆಲ್ಲ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದ್ದರು. ಇದಕ್ಕೆ “ಎಕ್ಸ್’ ಸಾಮಾಜಿಕ ಜಾಲತಾಣದಲ್ಲಿ ತಿರುಗೇಟು ನೀಡಿರುವ ಕುಮಾರಸ್ವಾಮಿ, ನಾನು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆಲ್ಲವೂ ಅಪ್ಪಟ ಸತ್ಯ. ದಾಖಲೆ ಇಟ್ಟುಕೊಂಡೇ ಹೇಳಿದ್ದೇನೆ. ವಿಕ್ರಂ ಸಿಂಹ ಮರ ಕಡಿದಿದ್ದರೆ ಎಫ್ಐಆರ್‌ನಲ್ಲಿ ಅವರ ಹೆಸರು ಯಾಕಿಲ್ಲ ಎಂದು ಎಫ್ಐಆರ್‌ನ ಪ್ರತಿಯನ್ನು ತಮ್ಮ “ಎಕ್ಸ್’ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಪ್ರತಾಪಸಿಂಹ ಅವರನ್ನು ಮುಗಿಸಲು ಹೂಡಿದ ಟರ್ಮಿನೇಟರ್ ಸಿನೆಮಾ ಇದು. ಅದರ ಹಿಂದಿರುವ ಸಿದ್ಧ ಸೂತ್ರಧಾರನ ಕಳ್ಳಹೆಜ್ಜೆಗಳನ್ನು ನಾನು ಕಾಣದವನೇನೂ ಅಲ್ಲ. ಇಡೀ ವಿಕ್ರಂಸಿಂಹ ಅಂಕಣಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಹಿನ್ನೆಲೆ ಸಂಗೀತ, ಎಲ್ಲವೂ ಮುಖ್ಯಮಂತ್ರಿ ಸಿದ್ದರಾಮಣ್ಣ ಅವರದ್ದು ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.
ಅಧಿಕಾರಿಯೊಬ್ಬರಿಂದ 50 ಲಕ್ಷ ರೂ. ಕಿತ್ತ ನಿಮ್ಮ ಪಕ್ಷದ ಶಾಸಕರ ಬಗೆಗಿನ ನಿಮ್ಮ ಮೌನ ಅಸಹ್ಯ. ನಿಮ್ಮ ಲಜ್ಜೆಗೆಟ್ಟ ಸರಕಾರ ಎಸಗಿದ ತಪ್ಪಿಗೆ ದಲಿತ ಅಧಿಕಾರಿಗೆ ಶಿಕ್ಷೆಯೇ? ಇದೆಲ್ಲದರ ಚಿದಂಬರ ರಹಸ್ಯ ಯಶವಂತಪುರ ಫ್ಲಾಟ್‌ನಲ್ಲಿ ಅಡಗಿದೆ. ಯಾವ ತನಿಖೆ ಮಾಡುತ್ತೀರಿ ಎಂದು ಪರಮೇಶ್ವರ್ ಮತ್ತು ರಾಜಣ್ಣರನ್ನು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.