Mandya: ಎಚ್ಡಿಕೆಗೆ ಕ್ಷೇತ್ರ ಬಿಟ್ಟುಕೊಡುತ್ತಾರಾ ಸುಮಲತಾ?

ಮಂಡ್ಯದಿಂದ ಲೋಕಸಭೆಗೆ ಸ್ಪರ್ಧಿಸುವವರು ಯಾರು? ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ?

Team Udayavani, Jan 7, 2024, 5:00 AM IST

SUMALATHA

ಮಂಡ್ಯ: ಯಾರೇ ಸ್ಪರ್ಧಿಸಲಿ, ಬಿಡಲಿ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಹಾಟ್‌ ಕ್ಷೇತ್ರವಾಗುವುದರಲ್ಲಿ ಅನುಮಾನವೇ ಇಲ್ಲ. ಕಳೆದ ಸಲವೂ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಪುತ್ರ ನಿಖೀಲ್‌ ಹಾಗೂ ಸುಮಲತಾ ಅಂಬರೀಶ್‌ ಮುಖಾ ಮುಖೀಯಿಂದಾಗಿ ಈ ಕ್ಷೇತ್ರದ ಇಡೀ ದೇಶದ ಗಮನಸೆಳೆದ ಕ್ಷೇತ್ರವಾಗಿತ್ತು. ಅದರಲ್ಲೂ ಈ ಬಾರಿ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಾಗಿರುವುದರಿಂದ ಇಲ್ಲಿನ ರಾಜಕೀಯ ದಾಳ ಹೇಗೆ ಉರುಳುತ್ತದೆ ಎಂದು ನಿರೀಕ್ಷಿಸಲೂ ಸಾಧ್ಯವಾಗದು.

ಒಂದು ಕಾಲದಲ್ಲಿ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿದ್ದ ಮಂಡ್ಯ ಕ್ಷೇತ್ರವನ್ನು ತನ್ನದಾಗಿಸಿಕೊಳ್ಳಲು ಜೆಡಿಎಸ್‌ ಹರಸಾಹಸ ಮಾಡ ಬಹುದು. ಆದರೆ ಜೆಡಿಎಸ್‌ನ ಕಡುವೈರಿ ಎಂದೇ ಬಿಂಬಿತ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅವರ ನಡೆ ಇಡೀ ಕ್ಷೇತ್ರದ ಚಿತ್ರಣ ವನ್ನೇ ಬದಲಾಯಿಸಬಹುದು. ಸುಮಲತಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧ ರಾಗಿದ್ದಾರೆ ಎಂದೂ ಹೇಳಲಾಗುತ್ತದೆ.

ಕಳೆದ ವಿಧಾನಸಭಾ ಚುನಾ ವಣೆಯಲ್ಲಿ ಬಿಜೆಪಿಗೆ ಬೆಂಬಲ ಘೋಷಿ ಸಿದ್ದ ಸುಮಲತಾ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್‌ ನಿರೀಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಪರಿಣಾಮವಾಗಿ ಈ ಕ್ಷೇತ್ರ ಜೆಡಿಎಸ್‌ ಪಾಲಾಗುವುದು ಬಹುತೇಕ ಖಚಿತ. ಹೀಗಾಗಿಯೇ ಪಕ್ಷೇತರರಾಗಿ ಸ್ಪರ್ಧಿಸುವ ಸುಳಿವನ್ನು ಸುಮಲತಾ ನೀಡಿದ್ದಾರೆ. ಈ ಮೂಲಕ ಬಿಜೆಪಿಗೆ ಟಕ್ಕರ್‌ ಕೊಡಲು ಮುಂದಾಗಿದ್ದಾರೆ. ಅಲ್ಲದೆ, ಜಿಲ್ಲೆಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮತ್ತೂಂದೆಡೆ ಸುಮಲತಾ ಕಾಂಗ್ರೆಸ್‌ ಸೇರುವ ಮಾತುಗಳೂ ಕೇಳಿಬರುತ್ತಿವೆ. ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಸುಮಲತಾ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಕರೆದೊಯ್ಯುವ ಚಿಂತನೆ ಬಿಜೆಪಿಯಲ್ಲಿದೆ ಎನ್ನಲಾಗಿದೆ.

ಇತ್ತ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲ ಮುಂದುವರಿದಿದೆ. ಬಿಜೆಪಿಯಲ್ಲೂ ಆಕಾಂಕ್ಷಿಗಳಿದ್ದಾರೆ. ಆದರೆ ಜೆಡಿಎಸ್‌ ಪ್ರಾಬಲ್ಯ ಹೆಚ್ಚಿರುವುಣದರಿಂದ ಜೆಡಿಎಸ್‌ ನಾಯಕರ ಹಿಡಿತಕ್ಕೆ ಕ್ಷೇತ್ರ ಸಿಗಲಿದ್ದು, ಇದರಿಂದ ಜೆಡಿಎಸ್‌ನಿಂದಲೇ ಮೈತ್ರಿ ಅಭ್ಯರ್ಥಿ ಯಾಗುವುದು ಖಚಿತವಾಗಿದೆ.

ಈಗಾಗಲೇ ಕುಮಾರಸ್ವಾಮಿ, ನಿಖೀಲ್‌ ಕುಮಾರಸ್ವಾಮಿ, ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹೆಸರು ಮುಂಚೂಣಿಯಲ್ಲಿದೆ. ಸದ್ಯದ ಮೂಲಗಳ ಪ್ರಕಾರ ಎಚ್‌.ಡಿ.
ಕುಮಾರಸ್ವಾಮಿ ಅಭ್ಯರ್ಥಿಯಾಗ ಬಹುದೆಂದು ಹೇಳಲಾಗುತ್ತಿದೆ. ತಮ್ಮ ಪುತ್ರನ ರಾಜಕೀಯ ಭವಿಷ್ಯ ಕ್ಕಾಗಿ ಚನ್ನಪಟ್ಟಣ ಬಿಟ್ಟು ಮಂಡ್ಯ ಲೋಕಸಭೆಗೆ ಬರಬಹುದೆಂಬ ಚರ್ಚೆಗಳೂ ನಡೆಯುತ್ತಿವೆ. ಇದರ ನಡುವೆ ಮಾಜಿ ಸಚಿವರಾದ ಸಿ.ಎಸ್‌. ಪುಟ್ಟರಾಜು, ಡಿ.ಸಿ.ತಮ್ಮಣ್ಣ ಕೂಡ ಟಿಕೆಟ್‌ ರೇಸ್‌ನಲ್ಲಿದ್ದಾರೆ. ಆದರೆ ಪಕ್ಷದಲ್ಲಿ ನಾಯಕರ ಹೊಂದಾಣಿಕೆ ಕೊರತೆ ಇರುವುದರಿಂದ ಕುಮಾರ ಸ್ವಾಮಿ, ದೇವೇಗೌಡ ಅಥವಾ ನಿಖೀಲ್‌ ಬಂದರೆ ಒಗ್ಗಟ್ಟು ಪ್ರದರ್ಶನವಾಗಲಿದೆ ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಿಂದ ಕೇಳಿಬರುತ್ತಿದೆ.

ಇನ್ನು ಕಾಂಗ್ರೆಸ್‌ನಲ್ಲೂ ಅಭ್ಯರ್ಥಿ ಗಳ ಗೊಂದಲ ಮುಂದುವರಿದಿದೆ. ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಯನ್ನು ಸೋಲಿಸಲೇಬೇಕು ಎಂಬ ಹಟಕ್ಕೆ ಬಿದ್ದಿದೆ. ಆದ್ದರಿಂದ ಎಲ್ಲ ರೀತಿಯ ತಯಾರಿ ನಡೆಸುತ್ತಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಪುತ್ರಿ ಶಾಂಭವಿ, ನಟಿ ರಮ್ಯಾ ಅವರನ್ನು ಕರೆತರುವ ಯೋಚನೆಗಳು ನಡೆಯುತ್ತಿವೆ. ಆದರೆ ಇಬ್ಬರೂ ಕ್ಷೇತ್ರದಲ್ಲಿ ಇನ್ನೂ ಆ್ಯಕ್ಟೀವ್‌ ಆಗಿಲ್ಲ. ಇದರ ನಡುವೆ ಸಚಿವ ಎನ್‌.ಚಲುವರಾಯಸ್ವಾಮಿಗೂ ಆಹ್ವಾನ ನೀಡಲಾಗಿದೆ.

ಚಲುವರಾಯ ಸ್ವಾಮಿ ಹಿಂದೇಟು ಹಾಕಿದರೆ ಅವರ ಪತ್ನಿ ಧನಲಕ್ಷ್ಮೀ ಹೆಸರೂ ಕೇಳಿಬರು ತ್ತಿದೆ. ಜಿಲ್ಲೆಯ ಕಾಂಗ್ರೆಸ್‌ ಕಾರ್ಯ ಕರ್ತರು ಶಾಂಭವಿ, ರಮ್ಯಾ, ಚಲುವ ರಾಯಸ್ವಾಮಿ ಅಥವಾ ಧನಲಕ್ಷ್ಮಿ ಅವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡಲು ಒಲವು ತೋರಿದ್ದಾರೆನ್ನಲಾಗಿದೆ.

ಒಂದು ವೇಳೆ ಎಚ್‌. ಡಿ. ಕುಮಾರಸ್ವಾಮಿ ಕಣಕ್ಕಿಳಿದರೆ ಕಾಂಗ್ರೆಸ್‌ನಿಂದ ಚಲುವ ರಾಯ ಸ್ವಾಮಿಯನ್ನು ಕಾಂಗ್ರೆಸ್‌ ಕಣಕ್ಕಿಳಿಸ ಬಹುದು ಎನ್ನಲಾಗು ತ್ತಿದೆ. ಚಲುವರಾಯ ಸ್ವಾಮಿ ಒಪ್ಪದಿದ್ದರೆ ಹಾಲಿ ಸಂಸದೆ ಸುಮಲತಾ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡು ಕಣಕ್ಕಿಳಿಸಬಹುದು. ಆದರೆ ಸುಮಲತಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿರುವುದು ಜಿಲ್ಲಾ ಕಾಂಗ್ರೆಸ್‌ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ. ಇದು ಪಕ್ಷ ಸೇರ್ಪಡೆಗೆ ಹಿನ್ನಡೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

 ಎಚ್‌.ಶಿವರಾಜು

ಟಾಪ್ ನ್ಯೂಸ್

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.