Nyaya Yatra : ಸಂಸತ್ನಲ್ಲಿ ಮಾತಾಡಲು ಅವಕಾಶ ಸಿಗದ್ದಕ್ಕೆ ನ್ಯಾಯ ಯಾತ್ರೆ: ಖರ್ಗೆ
ಸಾಮಾಜಿಕ ಅಂಶಗಳ ಪ್ರಸ್ತಾಪ ಎಂದ ಎಐಸಿಸಿ ಅಧ್ಯಕ್ಷ
Team Udayavani, Jan 7, 2024, 12:38 AM IST
ಹೊಸದಿಲ್ಲಿ/ಪಟ್ನಾ: ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ನ ಅಧಿವೇಶನದಲ್ಲಿ ಕಾಂಗ್ರೆಸ್ಗೆ ಜನರ ಹಿತ ಕಾಯುವ ವಿಚಾರಗಳನ್ನು ಪ್ರಸ್ತಾವಿಸಲು ಅವಕಾಶ ಸಿಗಲಿಲ್ಲ. ಹೀಗಾಗಿ, ಜ.14ರಿಂದ ಶುರುವಾಗಲಿರುವ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಪಕ್ಷದ ನಿಲುವುಗಳನ್ನು ಜನರ ಮುಂದೆ ಇರಿಸಲಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಯಾತ್ರೆಯಲ್ಲಿ ಸಾಮಾಜಿಕ, ಆರ್ಥಿಕ ವಿಚಾರಗಳನ್ನು ಪ್ರಮುಖವಾಗಿ ಜನರ ಮುಂದಿಡಲಾಗುತ್ತದೆ ಎಂದರು. ಇದೇ ಸಂದರ್ಭದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಯ ಹೊಸ ಲಾಂಛನವನ್ನೂ ಬಿಡುಗಡೆ ಮಾಡಲಾಯಿತು.
2 ಸಮಿತಿಗಳ ರಚನೆ: ಮತ್ತೂಂದೆಡೆ, ಚುನಾವಣೆ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕ ಅಜಯ ಮಕೇನ್ ನೇತೃತ್ವದಲ್ಲಿ ಪ್ರಚಾರ ಸಮಿತಿಯನ್ನು ರಚಿಸಲಾಗಿದೆ. ಇದಲ್ಲದೆ, ಚುನಾವಣ ವಾರ್ ರೂಮ್ ಅನ್ನು ರಚಿಸಲಾಗಿದ್ದು, ಹಿರಿಯ ನಾಯಕ ವೈಭವ್ ವಾಲಿಯಾ ಅವರನ್ನು ಅದಕ್ಕೆ ನೇಮಿಸಲಾಗಿದೆ.
ಕ್ಲಸ್ಟರ್ ಸಮಿತಿಗೆ ಐವನ್ ಡಿ’ಸೋಜ ನೇಮಕ
ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಬಿರುಸಿನ ಸಿದ§ತೆಗಳನ್ನು ನಡೆಸಿದೆ. ಅದಕ್ಕೆ ಪೂರಕವಾಗಿ ಅಭ್ಯರ್ಥಿಗಳ ಆಯ್ಕೆಗೆ ಕರ್ನಾಟಕ ಸೇರಿಂತೆ ವಿವಿಧ ರಾಜ್ಯಗಳನ್ನು ಸೇರಿಸಿ ಕ್ಲಸ್ಟರ್ಗಳನ್ನು ರಚಿಸಲಾಗಿದೆ. ಕರ್ನಾಟಕ, ತಮಿಳುನಾಡು, ಕೇರಳ, ಲಕ್ಷದ್ವೀಪ ಮತ್ತು ಪುದುಚೇರಿಗಳನ್ನು ಒಳಗೊಂಡ ಕ್ಲಸ್ಟರ್ಗೆ ದ.ಕ. ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕ ಐವಾನ್ ಡಿ’ ಸೋಜಾ ಅವರನ್ನು ನೇಮಿಸಲಾಗಿದೆ. ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಸೇರಿಸಿಕೊಂಡು ಒಟ್ಟು ಐದು ಕ್ಲಸ್ಟರ್ಗಳನ್ನು ಎಐಸಿಸಿ ಅಧ್ಯಕ್ಷ ಖರ್ಗೆ ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.