Jan 21ರಿಂದ 26; ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Team Udayavani, Jan 7, 2024, 1:19 AM IST
ಕಾರ್ಕಳ: ಸ್ಥಳೀಯ ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವವು ಜ. 21ರಿಂದ 26ರ ವರೆಗೆ ಜರಗಲಿದೆ.
ಕೇಳಿರಿ ನಿಮಗೆ ಕೊಡಲಾಗುವುದು ಎಂಬ ಮಹೋತ್ಸವದ ವಿಷಯದೊಂದಿಗೆ ನಡೆಯುವ ಈ 6 ದಿನಗಳ ಉತ್ಸವದ ಅವಧಿಯಲ್ಲಿ ಒಟ್ಟು 48 ಬಲಿ ಪೂಜೆಗಳು ನಡೆಯಲಿವೆ. ಜ. 21ರ ಸಾಯಂಕಾಲ 4.30ಕ್ಕೆ (ಕೊಂಕಣಿ) ಮಂಗಳೂರಿನ ನಿವೃತ್ತ ಧರ್ಮಾಧ್ಯಕ್ಷ ರೈ| ರೆ| ಡಾ| ಆಲೋಶಿಯಸ್ ಪಾವ್ಲ್ ಡಿ’ಸೋಜಾ ನೆರವೇರಿಸಲಿರುವರು.
ಜ. 22ರಂದು ಸಾಯಂಕಾಲ 6ಕ್ಕೆ (ಕನ್ನಡ) ಶಿವಮೊಗ್ಗದ ಧರ್ಮಾಧ್ಯಕ್ಷ ರೈ| ರೆ| ಡಾ| ಫ್ರಾನ್ಸಿಸ್ ಸೆರಾವೊ ಇವರು ನಡೆಸುವರು. ಜ. 23ರಂದು ಸಾಯಂಕಾಲ 5.30ಕ್ಕೆ (ಕನ್ನಡ) ಪುತ್ತೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಜೀವರ್ಗಿಸ್ ಮಾರ್ ಮಕಾರಿಯೊಸ್, ಜ. 24ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಉಡುಪಿಯ ಧರ್ಮಾಧ್ಯಕ್ಷ ರೈ| ರೆ| ಡಾ| ಜೆರಾಲ್ಡ್ ಐಸಾಕ್ ಲೋಬೊ, ಜ.25ರಂದು ಬೆಳಗ್ಗೆ 10ಕ್ಕೆ (ಕೊಂಕಣಿ) ಮಂಗಳೂರಿನ ಧರ್ಮಾಧ್ಯಕ್ಷ ರೈ| ರೆ| ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಜ. 26ರಂದು ಬೆಳಗ್ಗೆ 10ಕ್ಕೆ (ಕನ್ನಡ) ಬೆಳ್ತಂಗಡಿ ಧರ್ಮಾಧ್ಯಕ್ಷ ರೈ| ರೆ| ಡಾ| ಲೊರೆನ್ಸ್ ಮುಕ್ಕುಝಿ ಅವರು ಪ್ರಧಾನ ಯಾಜಕರಾಗಿ ಮಹೋತ್ಸವದ ಪ್ರಮುಖ ಸಂಭ್ರಮದ ಬಲಿಪೂಜೆ ನೆರವೇರಿಸಲಿರುವರು ಎಂದು ಕ್ಷೇತ್ರದ ವಂ| ಅಲ್ಬನ್ ಡಿ’ಸೋಜಾ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.