Basanagouda ಯತ್ನಾಳ್‌ರನ್ನು ಪಕ್ಷವೇ ಕರೆಸಿ ಮಾತನಾಡಲಿದೆ: ಬಿ.ವೈ. ರಾಘವೇಂದ್ರ
Team Udayavani, Jan 8, 2024, 11:56 PM IST
ಕುಂದಾಪುರ: ಬಸನಗೌಡ ಯತ್ನಾಳ್ ವಿಚಾರದಲ್ಲಿ ಹೈಕಮಾಂಡ್ ಸಮಯ – ಸಂದರ್ಭ ನೋಡಿಕೊಂಡು ಅವರನ್ನು ಕರೆಸಿ ಮಾತ ನಾಡುವ ಕೆಲಸ ಮಾಡುತ್ತದೆ ಅನ್ನುವ ವಿಶ್ವಾಸವಿದೆ. ಅವರು ಮಾಡಿರುವ ಆರೋಪಗಳಿಗೆಲ್ಲ ಪಕ್ಷವೇ ಆದಷ್ಟು ಬೇಗ ಉತ್ತರ ಕೊಡಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
ಅವರು ಹೆಮ್ಮಾಡಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಕುಮಾರ್ ಬಂಗಾರಪ್ಪ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ, ಶಿವಮೊಗ್ಗ ಲೋಕಸಭಾ ಅಭ್ಯರ್ಥಿಯಾಗುತ್ತಾರೆ ಅನ್ನು ವುದು ಸುಳ್ಳು ಸುದ್ದಿ. ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ನಮ್ಮ ಪಕ್ಷದ ಸಂಘಟನೆಯಲ್ಲಿ ತೊಡಗಿಸಿ ಕೊಂಡಿದ್ದಾರೆ. ಕಾಂಗ್ರೆಸ್‌ಗೆ ಅಭ್ಯರ್ಥಿ ಗಳ ಕೊರತೆ ಏನೂ ಇರಲಿಕ್ಕಿಲ್ಲ ಎಂದು ಹೇಳಿದರು.
ಸುಕುಮಾರ್ ಶೆಟ್ಟಿ ಅವರು ಬೈಂದೂರು ಕ್ಷೇತ್ರದಲ್ಲಿ ಪಕ್ಷ, ಸಂಘಟನೆಗೆ ಶಕ್ತಿ ತುಂಬಿದವರು. ಇತ್ತೀಚೆಗೆ ಕಾರ್ಯಕರ್ತರ ಮದುವೆಗೆ ಬಂದಾಗ ಸಿಕ್ಕಿದ್ದು, ಅವರಿಂದ ಆಶೀರ್ವಾದ ಪಡೆದಿದ್ದೇನೆ. ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಅವರನ್ನೇ ಕೇಳಬೇಕು. ಆದರೆ ಅವರು ನಮ್ಮನ್ನು ಬಿಟ್ಟು ಹೋಗಲಾರರು. ಅವರ ಮಾರ್ಗದರ್ಶನ ನಮಗೆ ಇರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾಲ್ಡಿವ್ಸ್‌ನ ಸಚಿವರು ಟೀಕೆ ಮಾಡಿದ್ದಕ್ಕೆ ಅಲ್ಲಿನ ಸರಕಾರವೇ ಅವರನ್ನು ವಜಾ ಮಾಡಿದೆ. ಇದು ನಮ್ಮ ಪ್ರಧಾನಿ ಬಗ್ಗೆ ವಿಶ್ವದೆಲ್ಲೆಡೆ ಇರುವಂತಹ ಅಭಿಮಾನಕ್ಕೆ ಸಾಕ್ಷಿ. ನಾವು ಮಾಡಿರುವ ಕೆಲಸಗಳನ್ನು ಜನರ ಬಳಿಗೆ ತೆಗೆದುಕೊಂಡು ಹೋಗಿ ಆ ಮೂಲಕ ಅವರ ವಿಶ್ವಾಸ ಗಳಿಸುವ ಕೆಲಸ ಮಾಡುತ್ತೇವೆ. ಎಲ್ಲ ಶಾಸಕರ ಸಹಕಾರದಿಂದ ಉತ್ತಮ ಕಾರ್ಯ ಮಾಡುತ್ತಿದ್ದೇವೆ. ಸಂಘಟನೆ ಅವಕಾಶ ಕೊಟ್ಟರೆ ಖಂಡಿತ ಮತ್ತೂಮ್ಮೆ ಸ್ಪರ್ಧಿಸುತ್ತೇನೆ. ಗೆಲ್ಲುವ ವಿಶ್ವಾಸವಿದೆ ಎಂದರು.
ನೇರ ರೈಲಿಗೆ ಪ್ರಯತ್ನ
ಜ. 22ಕ್ಕೆ ದೇಶದ ಕೋಟ್ಯಂತರ ಜನರ ಕನಸು ನನಸಾಗುವ ದಿನ. ಆ ದಿನ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಯೋಧ್ಯೆಗೆ ಈ ಕಡೆಯಿಂದ ನೇರ ರೈಲು ವ್ಯವಸ್ಥೆ ಕಲ್ಪಿಸುವ ಬಗ್ಗೆ ಪ್ರಯತ್ನಿಸಲಾಗುವುದು. ದೇಶದ ಎಲ್ಲ ಕಡೆಯಿಂದಲೂ ರಸ್ತೆ, ವಿಮಾನ, ರೈಲು ಸಂಪರ್ಕ ಕುರಿತಂತೆ ಕೇಂದ್ರ ಸರಕಾರ ಕಾರ್ಯಪ್ರವೃತ್ತವಾಗಲಿದೆ. ಮುಂಬಯಿಗೆ ವಂದೇ ಭಾರತ್ ರೈಲು ಸಂಪರ್ಕಕಕ್ಕೆ ಮುಂದಿನ ಬಾರಿ ಖಂಡಿತ ಪ್ರಯತ್ನಿಸುವೆ. ಸೇನಾಪುರ ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ ಕುರಿತು ಸಂಬಂಧಪಟ್ಟ ಕೇಂದ್ರದ ಅಧಿಕಾರಿಗಳ ಬಳಿಯೂ ಮಾತನಾಡಿದ್ದೇನೆ ಎಂದು ಹೇಳಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಜತೆಗಿದ್ದರು.
ಹೆದ್ದಾರಿ ಸಮಸ್ಯೆ ಇತ್ಯರ್ಥಕ್ಕೆ ವಿಶೇಷ ಅನುದಾನ
ಕುಂದಾಪುರ – ಬೈಂದೂರು ಹೆದ್ದಾರಿ ಕಾಮಗಾರಿಯಲ್ಲಿ ಸಾಕಷ್ಟು ಗೊಂದಲಗಳಿವೆ. ಅಲ್ಲಲ್ಲಿ ಮೇಲ್ಸೇತುವೆ, ಬೈಪಾಸ್, ಅಂಡರ್‌ಪಾಸ್ ಹೀಗೆ ಸುಮಾರು 10 ಕಾಮಗಾರಿಗಳ ಬಗ್ಗೆ ವಿಶೇಷ ಅನುದಾನಕ್ಕಾಗಿ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಭೇಟಿಯಾಗಿ ಕೊಟ್ಟಿದ್ದೇವೆ. ಶಾಸಕರಿಗೂ ಬಂದಂತಹ ಮನವಿಗಳನ್ನು ಇಲಾಖೆಗೆ ಸಲ್ಲಿಸಲಾಗಿದೆ. ಇದಕ್ಕೆ ಪ್ರತ್ಯೇಕ ಅನುದಾನ ನೀಡುವುದಾಗಿ ಸಚಿವರು ಒಪ್ಪಿಕೊಂಡಿದ್ದು, ಆ ಬಗ್ಗೆ ವಿಶ್ವಾಸವಿದೆ ಎಂದ ಸಂಸದ ರಾಘವೇಂದ್ರ, ಹೆದ್ದಾರಿ ಪ್ರಾಧಿಕಾರಕ್ಕೆ 6 ತಿಂಗಳಿಗೊಬ್ಬರು ಯೋಜನಾ ನಿರ್ದೇಶಕರು ಬದಲಾಗುತ್ತಿದ್ದಾರೆ. ಹೀಗೆ ಆದರೆ ಕಾಮಗಾರಿಯನ್ನು ಹೇಗೆ ಕಾರ್ಯ ರೂಪಕ್ಕೆ ತರುವುದು. ಈ ಬಗ್ಗೆ ಸಚಿವ ಗಡ್ಕರಿ ಅವರ ಗಮನಕ್ಕೂ ತರಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.