Forest Department ಕರ್ಮಕಾಂಡ; ತನಿಖೆ ಮಾಡುವ ದಮ್ಮು, ತಾಕತ್ತು ಇದೆಯೇ?
ಅರಣ್ಯ ಸಚಿವ ಈಶ್ವರ ಖಂಡ್ರೆಗೆ ಎಚ್.ಡಿ.ಕುಮಾರಸ್ವಾಮಿ ಸವಾಲು
Team Udayavani, Jan 9, 2024, 12:23 AM IST
ಬೆಂಗಳೂರು: ರಾಜ್ಯದಲ್ಲಿ ಅರಣ್ಯ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಮಾಹಿತಿ ಹಾಗೂ ದಾಖಲೆ ಕೊಡುತ್ತೇನೆ. ತನಿಖೆ ಮಾಡುವ ದಮ್ಮು, ತಾಕತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಇದೆಯಾ ಎಂದು ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು.
ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ತರೀಕೆರೆಯಲ್ಲಿ ಅರಣ್ಯದಲ್ಲಿ ಮರಗಳನ್ನು ಕಡಿದ ಪ್ರಕರಣದಲ್ಲಿ ನಿಮ್ಮ ಸರಕಾರದ ಅಧಿಕಾರಿಗಳೇ ಎಷ್ಟು ಜನ ಶಾಮೀಲಾಗಿದ್ದಾರೆ? ಕಡಿದ ಆ ಮರಗಳಲ್ಲಿ ಅರ್ಧ ಭಾಗದಷ್ಟು ಮರಗಳು ಯಾವ ಶಾಸಕನ ಮನೆಗೆ ಹೋಯಿತು? ಮನೆ ಕಟ್ಟುತ್ತಿದ್ದ ಶಾಸಕನ ಮನೆಗೆ ಮರಗಳು ಹೋಗಿವೆ. ಈ ಬಗ್ಗೆ ನಿಮಗೆ ಗೊತ್ತಿಲ್ಲವೇ ಖಂಡ್ರೆ ಅವರೇ ಎಂದು ಪ್ರಶ್ನಿಸಿದರು.
ನಾನು ದಾಖಲೆ ಇಲ್ಲದೆ ಮಾತಾಡಲ್ಲ. ಆ ಶಾಸಕ ಯಾರು ಎಂದು ಈಶ್ವರ್ ಖಂಡ್ರೆ ಅವರನ್ನೆ ಕೇಳಿ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಕುಮಾರಸ್ವಾಮಿ ಉತ್ತರ ನೀಡಿದರು.
ವಿರಾಜಪೇಟೆಯಲ್ಲಿ ರೋಸ್ ವುಡ್, ಟೀಕ್ ವುಡ್ ಕದ್ದು 2 ವರ್ಷಗಳಿಂದ ಸಾಗಿಸಲಾಗು ತ್ತಿದೆ. ಕಳೆದ ಆಗಸ್ಟ್‌ನಲ್ಲಿ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ಕೊಟ್ಟಿದ್ದರು. ಆ ಪ್ರಕರಣದಲ್ಲಿ ಇದ್ದ ಎಲ್ಲ ದಾಖಲೆಗಳು ಕಾಣೆಯಾಗಿವೆ. ಇದರ ಬಗ್ಗೆ ಸರಕಾರ ಗಂಭೀರವಾಗಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದರು. ಈಶ್ವರ್ ಖಂಡ್ರೆ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಕೋಟ್ಯಂತರ ರೂ.ಮೌಲ್ಯದ ಮರಗಳು ಅವು. ಏನೂ ಕ್ರಮ ಆಗಿಲ್ಲ ಎಂದು ಕಿಡಿಕಾರಿದರು. ವಿಕ್ರಮ್ ಸಿಂಹ ಪ್ರಕರಣದಲ್ಲಿ 12 ದಿನಗಳಲ್ಲಿ ಕ್ರಮ ಆಗಿದೆ.
ವಿರಾಜಪೇಟೆ ಪ್ರಕರಣದ ಬಗ್ಗೆ ಮೌನ ಯಾಕೆ? ಆಗಸ್ಟ್‌ನಲ್ಲಿ ನಿಮ್ಮ ಮುಂದೆ ಮಾಹಿತಿ ಬಂದಿದೆ. ಎಷ್ಟು ಮರ ಕದಿಯುತ್ತಿದ್ದಾರೆ ಅಂತ ನಿಮಗೆ ಮಾಹಿತಿ ಇದೆ. ಯಾಕೆ ಇದುವರೆಗೂ ಕ್ರಮ ಆಗಿಲ್ಲ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.