ಚಿಂಚೋಳಿ:”ಮುಲ್ಲಾಮಾರಿ’ ಉನ್ನತ ಮಟ್ಟದ ತನಿಖೆಗೆ ಒತ್ತಾಯ
Team Udayavani, Jan 9, 2024, 2:17 PM IST
ಉದಯವಾಣಿ ಸಮಾಚಾರ
ಚಿಂಚೋಳಿ: ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಗೆ ಸರಕಾರ ವಿವಿಧ ಯೋಜನೆ ಅಡಿಯಲ್ಲಿ ಸಾಕಷ್ಟು ಅನುದಾನ ಮಂಜೂರಾಗಿದ್ದು, ಈ ಯೋಜನೆಯಡಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳಲ್ಲಿ ನಡೆದ ಹಗರಣಗಳ ಕುರಿತು ಸರ್ಕಾರ ಉನ್ನತಮಟ್ಟದ ತನಿಖೆ ಕೈಗೊಳ್ಳಬೇಕೆಂದು ರೈತರು ಒತ್ತಾಯಿಸಿದ್ದಾರೆ.
ತಾಲೂಕಿನಲ್ಲಿ 1973-74ನೇ ಸಾಲಿನ ಬರಗಾಲ ಪರಿಹಾರ ಯೋಜನೆ ಅಡಿಯಲ್ಲಿ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಭಿವೃದ್ಧಿ ಮತ್ತು ಮುಖ್ಯ ಕಾಲುವೆ ಆಧುನೀಕರಣ ಹಾಗೂ ಪುನರ್ವಸತಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಸಾಕಷ್ಟು ಅನುದಾನ ಮಂಜೂರುಗೊಳಿಸಲಾಗಿದೆ. ಆದರೆ ಯೋಜನೆ ಅಡಿಯಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳು ಕಳಪೆಮಟ್ಟದ್ದಾಗಿದ್ದಲ್ಲದೇ ಇನ್ನೂವರೆಗೂ ಪೂರ್ಣಗೊಂಡಿಲ್ಲ.
ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯ 80ಕಿ.ಮೀ ಬಲದಂಡೆ ಮುಖ್ಯ ಕಾಲುವೆ ಆಧುನೀಕರಣಕ್ಕಾಗಿ ಕರ್ನಾಟಕ
ನೀರಾವರಿ ಅಭಿವೃದ್ಧಿ ನಿಗಮದಿಂದ 125 ಕೋಟಿ ರೂ. ಅನುದಾನ ನೀಡಲಾಗಿದೆ. ಮುಖ್ಯ ಕಾಲುವೆ ಕಾಮಗಾರಿಯಲ್ಲಿ ನಡೆದ
ಭ್ರಷ್ಟಾಚಾರ, ಕಳಪೆಮಟ್ಟದ ಕೆಲಸದಿಂದಾಗಿ ಕಾಲುವೆ ಇನ್ನೂವರೆಗೆ ಪೂರ್ಣಗೊಂಡಿಲ್ಲ. ರೈತರ ಜಮೀನುಗಳಿಗೆ ನೀರು ಹರಿಯುತ್ತಿಲ್ಲವೆಂದು ತಾಲೂಕು ಭೀಮಾ ಮಿಷನ್ ಅಧ್ಯಕ್ಷ ಭೀಮಶೆಟ್ಟಿ ಮುಕ್ಕಾ ಆರೋಪಿಸಿದ್ದಾರೆ.
ಮುಖ್ಯ ಕಾಲುವೆ ಆಧುನೀಕರಣಕ್ಕಾಗಿ ಅಣೆಕಟ್ಟು ಹತ್ತಿರ “ಡ್ರಿಪ್’ ಯೋಜನೆ ಅಡಿಯಲ್ಲಿ ಸಿಮೆಂಟ್ ಕಾಮಗಾರಿಗೆ 40 ಕೋಟಿ ರೂ.,
ಪುನರ್ವಸತಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳಿಗಾಗಿ ಆಗಿನ ನೀರಾವರಿ ಸಚಿವ ಎಂ.ಬಿ.ಪಾಟೀಲ 18ಕೋಟಿ ರೂ. ಮಂಜೂರುಗೊಳಿಸಿದ್ದರು. ಆದರೆ ನಿರಾಶ್ರಿತರ ಪುನರ್ವಸತಿ ಕೇಂದ್ರಗಳಲ್ಲಿ ಜನರು ಸೌಲಭ್ಯಕ್ಕಾಗಿ ತೊಂದರೆ ಪಡುವಂತಹ ಪರಿಸ್ಥಿತಿಯಿದೆ ಎಂದು ನಿರಾಶ್ರಿತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆ ಅಡಿಯಲ್ಲಿ ನಡೆದ ಅವ್ಯವಹಾರ, ಅಕ್ರಮ ಹಗರಣಗಳ ಬಗ್ಗೆ ತನಿಖೆ ನಡೆಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ|ಶರಣಪ್ರಕಾಶ ಪಾಟೀಲರಿಗೆ ರೈತರು ಒತ್ತಾಯಿಸಿದ್ದಾರೆ.
ತಾಲೂಕಿನ ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯಲ್ಲಿ ನಡೆದ ಕಳಪೆಮಟ್ಟದ ಕಾಮಗಾರಿಗಳಿಂದ ರೈತರ ಜಮೀನಿಗೆ ನೀರು ಹರಿಯುತ್ತಿಲ್ಲ. ಯೋಜನೆ ಕುರಿತು ಸರ್ಕಾರ ಸಮಗ್ರ ತನಿಖೆ ನಡೆಸಬೇಕು.
*ಭೀಮಶೆಟ್ಟಿ ಎಂಪಳ್ಳಿ,
ಅಧ್ಯಕ್ಷ, ಕೃಷಿ ಕೂಲಿಕಾರ್ಮಿಕರ ಸಂಘ
ಕೆಳದಂಡೆ ಮುಲ್ಲಾಮಾರಿ ಯೋಜನೆ ಕಾಮಗಾರಿ ಅನೇಕ ವರ್ಷಗಳಿಂದ ಪೂರ್ಣಗೊಂಡಿಲ್ಲ. ತಾಲೂಕಿನಲ್ಲಿ ಮಧ್ಯಮ ನೀರಾವರಿ ಯೋಜನೆಯಿಂದ ರೈತರಿಗೆ ಯಾವುದೇ ಉಪಯೋಗವಾಗಿಲ್ಲ. ಸರ್ಕಾರ ನೀಡಿದ ಅನುದಾನ ಲೂಟಿಯಾದ ಬಗ್ಗೆ ತನಿಖೆ ಆಗಬೇಕು.
*ಅಂಬರೀಶ ಗೋಣಿ,ರೈತ, ಸುಲೇಪೇಟ
ಕೆಳದಂಡೆ ಮುಲ್ಲಾಮಾರಿ ಯೋಜನೆ ಅಡಿಯಲ್ಲಿ ಕೆರೋಳಿ ಗ್ರಾಮದ ಅನೇಕ ರೈತರ ಹೊಲಗಳು ಯೋಜನೆಗೆ ಒಳಪಟ್ಟಿದ್ದರೂ
ಕಳೆದ 40 ವರ್ಷಗಳಿಂದ ರೈತರ ಜಮೀನುಗಳಿಗೆ ನೀರು ಹರಿಯುತ್ತಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಕುರಿತು ಉನ್ನತಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸುವುದು ಸೂಕ್ತ.
*ಬಸವರಾಜ ಕೆರೋಳಿ,ಕಾಂಗ್ರೆಸ್ ಮುಖಂಡ
ಕೆಳದಂಡೆ ಮುಲ್ಲಾಮಾರಿ ನೀರಾವರಿ ಯೋಜನೆಯಿಂದ ನಮ್ಮ ಗ್ರಾಮದ ರೈತರ ಹೊಲಗಳಿಗೆ ನೀರು ಹರಿಯುತ್ತಿಲ್ಲ. ಯೋಜನೆ ಕೇವಲ ಹೆಸರಿಗಷ್ಟೇ ಎನ್ನುವಂತಾಗಿದೆ. ಹೊಲಗಳಿಗೆ ನೀರು ಹರಿಸಿದರೆ ರೈತರು ನೀರಾವರಿ ಸೌಲಭ್ಯ ಪಡೆಯಬಹುದು.
*ಹಣಮಂತ ಪೂಜಾರಿ,
ತಾಲೂಕು ಜೆಡಿಎಸ್ ಮುಖಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ
Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.