Electionಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಸುಮಲತಾ ಪಕ್ಷೇತರ ಸ್ಪರ್ಧೆ: ಹನಕೆರೆ ಶಶಿಕುಮಾರ್
Team Udayavani, Jan 10, 2024, 6:46 AM IST
ಮಂಡ್ಯ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸಂಸದೆ ಸುಮಲತಾ ಅಂಬರೀಷ್ ಅವರ ಸ್ಪರ್ಧೆ ಖಚಿತವಾಗಿದ್ದು, ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿರುತ್ತಾರೆ ಎಂದು ಸುಮಲತಾ ಆಪ್ತ ಹನಕೆರೆ ಎಚ್.ಪಿ.ಶಶಿಕುಮಾರ್ ಹೇಳಿದರು.
ಪ್ರಸ್ತುತ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಂಡಿವೆ. ಇಂಥ ಸಂದರ್ಭದಲ್ಲಿ ಹಲವು ಊಹಾಪೋಹಗಳೂ ಕೇಳಿ ಬರುತ್ತಿದೆ. ಆದರೆ ನಾವು ಇದುವರೆಗೂ ಯಾವುದೇ ಪಕ್ಷದಲ್ಲಿ ಗುರುತಿಸಿಕೊಂಡಿಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿದ್ದರು. ಆದರೆ ಯಾವುದೇ ರೀತಿಯ ಪ್ರಾಥಮಿಕ ಸದಸ್ಯತ್ವವನ್ನಾಗಲೀ ಅಥವಾ ಪಕ್ಷ ಸೇರ್ಪಡೆಯನ್ನಾಗಲಿ ಮಾಡಿಲ್ಲ. ಆದ್ದರಿಂದ ಸುಮಲತಾ ಅವರು ಜಿಲ್ಲೆಯ ಜನತೆ ಪರವಾಗಿ ಕಣಕ್ಕಿಳಿಯಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬಿಜೆಪಿ ಮುಖಂಡ ಇಂಡುವಾಳು ಎಸ್.ಸಚ್ಚಿದಾನಂದ ಕಳೆದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಬಿಜೆಪಿ ಜತೆಗೆ ಜೆಡಿಎಸ್ ಮೈತ್ರಿಯಾಗಿರುವುದರಿಂದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಆದರೆ ಅವರೂ ನಮ್ಮ ಸಂಸದರ ಪರವಾಗಿ ನಿಲ್ಲಲಿದ್ದಾರೆಂಬ ಭರವಸೆ ಇದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.