![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 10, 2024, 6:26 AM IST
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿ 16 ಸಾವಿರಕ್ಕೂ ಅಧಿಕ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಸಂಬಂಧ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಈ ವಿಚಾರವಾಗಿ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
ಅರ್ಜಿ ಆಲಿಸಿದ ನ್ಯಾಯಪೀಠ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನೋಟಿಸ್ ಜಾರಿಗೊಳಿಸಿ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶನ ನೀಡಿ ವಿಚಾರಣೆಯನ್ನು ಫೆ. 8ಕ್ಕೆ ಮುಂದೂಡಿತು.
ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ವೈದ್ಯರು ಸೇರಿದ 16 ಸಾವಿರಕ್ಕೂ ಹೆಚ್ಚು ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ ಡಿ ಗ್ರೂಪ್ ಸಿಬ್ಬಂದಿಯ ಕೊರತೆ ಬಗ್ಗೆ “ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ’ (ಎಫ್ಐಸಿಸಿಐ) ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಇದಲ್ಲದೆ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್, 1512 ಫಾರ್ಮಾಸಿಸ್ಟ್, 1752 ಸಹಾಯಕರು 3253 ಗ್ರೂಪ್ ಡಿ ನೌಕರರು ಸೇರಿ 16,500ಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ, ತಾಂತ್ರಿಕ ಹಾಗೂ ಡಿ. ಗ್ರೂಪ್ ನೌಕರರ ಕೊರತೆ ಇದೆ. ಅಲ್ಲದೆ ರಾಜ್ಯದ ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ವರದಿ ಹೇಳಿತ್ತು.
ಈ ವರದಿಯನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿತ್ತು. ಇದೊಂದು ಸಾರ್ವಜನಿಕ ಗಂಭೀರ ಹಾಗೂ ಮಹತ್ವದ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್, ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಅಗತ್ಯ ನಿರ್ದೇಶನಗಳನ್ನು ನೀಡಲು ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.