Smart city; ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಿ: ಡಿಸಿ
ಸ್ಮಾರ್ಟ್ ಸಿಟಿ ಜಲಮುಖಿ ಯೋಜನೆ ಬಿಕ್ಕಟ್ಟು ಪರಿಹಾರಕ್ಕೆ ಸೂಚನೆ
Team Udayavani, Jan 10, 2024, 12:56 AM IST
ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆ, ಕಾಮಗಾರಿಗಳ ಪ್ರಗತಿ ಪರಿಶೀಲನೆ ಮಂಗಳವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿವಿಧ ಯೋಜನೆಗಳನ್ನು ತ್ವರಿತಗೊಳಿಸಿ ಪೂರ್ಣಗೊಳಿಸಲು ಅವರು ಸಲಹೆ ನೀಡಿದರು .
ಕದ್ರಿ ಪಾರ್ಕ್ ಅಭಿವೃದ್ಧಿಯ ಕುರಿತು ಚರ್ಚಿಸಲಾಗಿದ್ದು ಅಲ್ಲಿ ನಿರ್ಮಿಸಲಾದ ವೈಯಕ್ತಿಕ ಅಂಗಡಿಗಳ ಹರಾಜು ಪ್ರಕ್ರಿಯೆ ನಡೆಯುತ್ತಿದೆ, ಫುಡ್ ಕೋರ್ಟ್‌ಗಳಿಗೆ ಪ್ರತ್ಯೇಕ ಘಟಕವನ್ನು ರೂಪಿಸುವ ಬಗ್ಗೆ ಚರ್ಚೆ ನಡೆಯಿತು. ಕದ್ರಿ ಉದ್ಯಾನವನ, ಜಿಂಕೆವನ, ಪಾರ್ಕ್ ರಸ್ತೆ ಗಳನ್ನು ಏಕೀಕೃತವಾಗಿ ನಿರ್ವಹಣೆ ಮಾಡಲು ಗುತ್ತಿಗೆ ನೀಡುವ ಬಗ್ಗೆ ಪರಿಶೀಲಿಸಲು ಡಿಸಿ ಸೂಚಿಸಿದರು.
ಮೀನುಗಾರಿಕಾ ಕಾಲೇಜಿನಲ್ಲಿ ನಿರ್ಮಿಸಲಾದ ಕೌಶಲ ತರಬೇತಿ ಕೇಂದ್ರದಲ್ಲಿ ಕೌಶಲ ಅಭಿವೃದ್ಧಿ ತರಬೇತಿಗಳನ್ನು ಫೆಬ್ರವರಿಯಿಂದ ಆರಂಭಿಸಲು ಈಗಾಗಲೇ ವೇಳಾಪಟ್ಟಿ ತಯಾರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.
ಜಲಾಭಿಮುಖ ರಸ್ತೆ ನಿರ್ಮಾಣದಲ್ಲಿ ಜಮೀನು ಸಮಸ್ಯೆಗಳನ್ನು ಕಾನೂನಾತ್ಮಕವಾಗಿ ಪರಿಹರಿಸಿಕೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಬಂದರು ಇಲಾಖೆಯ ಭೂಮಿಯನ್ನು ಹಸ್ತಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದರು.
ಎಮ್ಮೆಕೆರೆ ಈಜುಕೊಳವನ್ನು ಈಜು ಫೆಡರೇಶನ್, ಅಕಾಡೆಮಿ ಗಳಿಗೆ ಕಾರ್ಯಕ್ರಮಗಳನ್ನು ಆಯೋಜಿಸುವ ಜವಾಬ್ದಾರಿ ನೀಡಿ ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ರಾಷ್ಟ್ರ ಧ್ವಜಸ್ತಂಭ ನಿರ್ಮಾಣ ಸಂಬಂಧ ಸೂಕ್ತ ಸ್ಥಳ ಅಂತಿಮಗೊಳಿಸಿ ಸರಿಯಾದ ಯೋಜನೆಯನ್ನು ರೂಪಿಸಿ ಮುಂದುವರಿಯಬೇಕು, ಈಗಾಗಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಕೈಗೊಂಡು ಐದು ವರ್ಷಗಳು ಕಳೆದಿವೆ. ಕೆಲಸಗಳು ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳಬೇಕು ಎಂದು ಅವರು ಸೂಚಿಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ಸದಸ್ಯ ಪ್ರೇಮಾನಂದ ಶೆಟ್ಟಿ, ಆಯುಕ್ತ ಆನಂದ್, ಸ್ಮಾರ್ಟ್ ಸಿಟಿ ಜನರಲ್ ಮ್ಯಾನೇಜರ್ ಅರುಣ ಪ್ರಭ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ವೆನ್ಲಾಕ್ ಆಸ್ಪತ್ರೆ ಹೊರರೋಗಿ ವಿಭಾಗ ವಿಸ್ತರಣೆ
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Fraud Case: ಹೂಡಿಕೆ ನೆಪ: ಮಹಿಳೆಯಿಂದ 56.64 ಲಕ್ಷ ರೂ. ವಂಚನೆ
Kulai ಜೆಟ್ಟಿ ಕಾಮಗಾರಿ: ಚೆನ್ನೈ ಐಐಟಿಯಿಂದ ವರದಿ ಪಡೆಯಲು ಮೀನುಗಾರಿಕೆ ಸಚಿವರ ನಿರ್ಧಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.