Congress; 40 ನಿಗಮ, ಮಂಡಳಿಗೆ ಒಂದೆರಡು ದಿನದಲ್ಲೇ ನೇಮಕ?
Team Udayavani, Jan 10, 2024, 6:10 AM IST
ಬೆಂಗಳೂರು: ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಆಗಮನದ ಬೆನ್ನಲ್ಲೇ ಹಲವು ತಿಂಗಳುಗಳಿಂದ ನನೆಗುದಿಗೆ ಬಿದ್ದಿರುವ ನಿಗಮ-ಮಂಡಳಿ ಅಧ್ಯಕ್ಷರ ನೇಮಕಾತಿ ಪಟ್ಟಿಗೆ ಮರುಜೀವ ಬಂದಿದೆ. ಈ ಬಾರಿಯ ಭೇಟಿಯಲ್ಲಿ ಉದ್ದೇಶಿತ ಪಟ್ಟಿಗೆ ಅಧಿಕೃತ ಮುದ್ರೆ ಬೀಳುವ ಸ್ಪಷ್ಟ ಸೂಚನೆಗಳು ಗೋಚರಿಸುತ್ತಿವೆ.
ಈಗಾಗಲೇ ನಿಗಮ- ಮಂಡಳಿ ಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಸಿದ್ಧಗೊಂಡಿದೆ. ಮೊದಲ ಹಂತದಲ್ಲಿ ಶಾಸಕರು ಮತ್ತು ಕಾರ್ಯಕರ್ತರಿಗೆ ಮಾತ್ರ ಈ “ಅಧಿಕಾರ ಭಾಗ್ಯ’ ಸಿಗಲಿದ್ದು, ವಿಧಾನಪರಿಷತ್ತಿನ ಸದಸ್ಯರಿಗೆ ಅಧಿಕಾರ ಸಿಗುವುದು ಬಹುತೇಕ ಅನುಮಾನ. ಅಂತಿಮ ಪಟ್ಟಿ ಒಂದೆರಡು ದಿನಗಳಲ್ಲಿ ಪ್ರಕಟ ಗೊಳ್ಳುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಕಾಂಗ್ರೆಸ್‌ನ ಉನ್ನತ ಮೂಲಗಳು ತಿಳಿಸಿವೆ.
ಮೂರು ಮತ್ತು ನಾಲ್ಕು ಬಾರಿ ಶಾಸಕರಾದವರಿಗೆ ಪಟ್ಟಿಯಲ್ಲಿ ಮೊದಲ ಆದ್ಯತೆ ನೀಡಲಾಗಿದ್ದು, ಅನಂತರದ ಆದ್ಯತೆಯಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾದವರು ಇರಲಿದ್ದಾರೆ. ಉಳಿದಂತೆ 10ರಿಂದ 15 ಜನ ನಿಷ್ಠಾವಂತ ಹಿರಿಯ ಕಾರ್ಯಕರ್ತರಿಗೆ ನೀಡಲು ಉದ್ದೇಶಿಸಲಾಗಿದೆ. ಅಂದರೆ ಶಾಸಕರಿಗೆ ನೀಡುವ ಹುದ್ದೆಗಳ ಸುಮಾರು ಅರ್ಧದಷ್ಟು ಸ್ಥಾನಗಳಿಗೆ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸಲಾಗುತ್ತಿದೆ. ಮೊದಲ ಹಂತದಲ್ಲೇ ಕಾರ್ಯಕರ್ತರನ್ನು ಪರಿಗಣಿಸುವ ಮೂಲಕ ಪಕ್ಷದಲ್ಲಿ ಎಲ್ಲರಿಗೂ ಸಮಾನ ಅವಕಾಶ ನೀಡಲಾಗುತ್ತದೆ ಎಂಬ ಸಂದೇಶ ರವಾನಿಸುವ ಲೆಕ್ಕಾಚಾರ ಇದಾಗಿದೆ. ಚುನಾವಣೆಯ ಹೊಸ್ತಿಲಲ್ಲಿ ಹೈಕಮಾಂಡ್‌ನ ಈ ನಡೆ ತಳಮಟ್ಟದಲ್ಲಿ ಹೊಸ ಹುರುಪು ತುಂಬಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿಎಂ, ಡಿಸಿಎಂ ನಡುವೆ ಹಗ್ಗಜಗ್ಗಾಟ
ಈ ಸಂಬಂಧವಾಗಿಯೇ ರಣದೀಪ್‌ಸಿಂಗ್ ಸುಜೇìವಾಲ ಮಂಗಳವಾರ ಖಾಸಗಿ ಹೊಟೇಲ್‌ನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯೊಂದಿಗೆ ಸುದೀರ್ಘ ಸಭೆ ನಡೆಸಿದರು. ಮೊದಲ ಹಂತದಲ್ಲಿ ಶಾಸಕರಿಗೆ ಮಾತ್ರ ನೇಮಕಾತಿ ಮಾಡೋಣ, ಅನಂತರದ ದಿನಗಳಲ್ಲಿ ಕಾರ್ಯಕರ್ತರು, ಪಕ್ಷದ ಮುಖಂಡರಿಗೆ ಅವಕಾಶ ಕೊಡೋಣ ಎಂದು ಸಿಎಂ ಪ್ರತಿಪಾದಿಸಿದ್ದಾರೆ.
ಅದರೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಸಕರ ಜತೆಗೆ ಕಾರ್ಯಕರ್ತರಿಗೆ ಅವಕಾಶ ಕಲ್ಪಿಸುವುದರಿಂದ ಪಕ್ಷದೊಳಗೆ ಒಳ್ಳೆಯ ಸಂದೇಶ ರವಾನೆ ಆಗುತ್ತದೆ. ಕೇವಲ ಶಾಸಕರನ್ನು ನೇಮಿಸುವುದು ಸೂಕ್ತವಲ್ಲ, ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಕಾರ್ಯಕರ್ತರನ್ನು ಪರಿಗಣಿಸಬೇಕಾಗುತ್ತದೆ ಎಂದು ಮನವರಿಕೆ ಮಾಡಿದ್ದಾರೆ. ಜತೆಗೆ ಸಂಭವನೀಯರ ಪಟ್ಟಿ ಸಲ್ಲಿಸಿದ್ದಾರೆಂದು ಹೇಳಲಾಗುತ್ತಿದೆ. ಈ ವಿಷಯದಲ್ಲಿ ಹಗ್ಗಜಗ್ಗಾಟ ನಡೆದಿದೆ.
ಕಾರ್ಯಕರ್ತರಿಗೆ ಅಧಿಕಾರ ಭಾಗ್ಯ ಕಲ್ಪಿಸುವ ವಿಷಯದಲ್ಲಿ ಸಿಎಂ, ಡಿಸಿಎಂ ನಡುವೆ ಒಮ್ಮತ ಮೂಡದೆ ಇದ್ದರೆ ಈ ವಿಷಯ ಮತ್ತೊಮ್ಮೆ ದಿಲ್ಲಿಗೆ ಸ್ಥಳಾಂತರ ಆಗುವ ಸಾಧ್ಯತೆಗಳಿವೆ. ಈ ಮಧ್ಯೆ ಸುಜೇìವಾಲ ಸಿಎಂ ಜತೆಗಿನ ಸಭೆ ಬಳಿಕ ಡಿಸಿಎಂ ಶಿವಕುಮಾರ್ ಪ್ರತ್ಯೇಕವಾಗಿ ಸುರ್ಜೇವಾಲ ಅವರೊಂದಿಗೆ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ.
ಶೀಘ್ರ ನೇಮಕಕ್ಕೆ ಹೆಚ್ಚಿದ ಒತ್ತಡ
ಮತ್ತೊಂದೆಡೆ ಸುರ್ಜೇವಾಲ ಆಗಮನದ ಬೆನ್ನಲ್ಲೇ ಆಕಾಂಕ್ಷಿಗಳು ನೇರವಾಗಿ ಮತ್ತು ಪರೋಕ್ಷವಾಗಿ ಆದಷ್ಟು ಬೇಗ ಪಟ್ಟಿ ಬಿಡುಗಡೆಗೆ ಒತ್ತಡ ಹಾಕುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಮುಂದೂಡಲಾಗಿದೆ. ನವೆಂಬರ್ ಅಂತ್ಯದಲ್ಲೇ ಪಟ್ಟಿ ಪ್ರಕಟಿಸಲಾಗುವುದು ಎಂದು ಭರವಸೆ ನೀಡಲಾಗಿತ್ತು. ಒಂದೂವರೆ ತಿಂಗಳಾದರೂ ಆ ಬಗ್ಗೆ ಚಕಾರ ಎತ್ತುತ್ತಿಲ್ಲ ಎಂದು ತಮ್ಮ ನಾಯಕರ ಮುಂದೆ ಬೇಸರವನ್ನೂ ಹೊರಹಾಕಿದ್ದಾರೆ ಎನ್ನಲಾಗಿದೆ.
ಈ ಮಧ್ಯೆ ಕೆಲವು ಶಾಸಕರು ತಮಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡ. ಈಗ ಇದನ್ನು ಸ್ವೀಕರಿಸಿದರೆ ಮುಂದಿನ ದಿನಗಳಲ್ಲಿ ಆಗಬಹುದಾದ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವೇಳೆ ಸಚಿವ ಸ್ಥಾನ ಕೈತಪ್ಪುತ್ತದೆ ಎಂದು ಅಪಸ್ವರ ಎತ್ತಿದ್ದು, ಅಂತಹವರನ್ನೂ ಕರೆದು ಮನವೊಲಿಸುವ ಕೆಲಸ ಮಾಡಲಾಗಿದೆ ಎಂದೂ ಮೂಲಗಳು ತಿಳಿಸಿವೆ.
ಬೆಂಗಳೂರು ಮತ್ತು ದಿಲ್ಲಿಯಲ್ಲಿ ಬುಧವಾರ ಹಾಗೂ ಗುರುವಾರ ಮ್ಯಾರಥಾನ್ ಸಭೆಗಳು ಏರ್ಪಾಡಾಗಿವೆ. ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಹೈಕಮಾಂಡ್‌ಗೆ ಪ್ರಮುಖ ಆದ್ಯತೆಯಾಗಿದೆ. ಈ ಎಲ್ಲ ಗೊಂದಲಗಳ ನಡುವೆ ಪಟ್ಟಿ ಪ್ರಕಟಗೊಳ್ಳುವುದು ಅನುಮಾನ ಎಂದೂ ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.
ಖರ್ಗೆ ಭೇಟಿಯ ಗುಟ್ಟೇನು?
ಸೋಮವಾರ ತಡರಾತ್ರಿ ಎಐಸಿಸಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ನಿವಾಸದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿಯಾಗಿ ಮಾತುಕತೆ ನಡೆಸಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ. ಡಿಸಿಎಂ ಹುದ್ದೆಗಳ ಸೃಷ್ಟಿಗೆ ಐದಾರು ಸಚಿವರಿಂದ ಪದೇಪದೆ ಒತ್ತಡ, ನಿಗಮ ಮಂಡಳಿಗಳ ನೇಮಕಾತಿ ವಿಷಯ ಕುರಿತು ಚರ್ಚಿಸಿದರೆಂದು ಹೇಳಲಾಗುತ್ತಿದೆ. ಖರ್ಗೆ ಸುರ್ಜೇವಾಲ ನಡುವಿನ ಮಾತುಕತೆಯ ಪರಿಣಾಮ ಅನ್ನುವಂತೆ ಖರ್ಗೆಯವರು ಡಿಸಿಎಂ ಹುದ್ದೆ ಸೃಷ್ಟಿಯ ಪ್ರಸ್ತಾವನೆಯೇ ಹೈಕಮಾಂಡ್ ಮುಂದೆ ಇಲ್ಲವೆಂದು ಸಾರಾಸಗಟು ತಿರಸ್ಕರಿಸಿದ್ದಾರೆ.
ನೇಮಕಾತಿಯ
ಲೆಕ್ಕಾಚಾರಗಳು
1.ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮನದ ಬೆನ್ನಲ್ಲೇ ನಿಗಮ-ಮಂಡಳಿ ಆಯ್ಕೆ ಚರ್ಚೆಗೆ ಜೀವ.
2.ಮೊದಲ ಹಂತದಲ್ಲಿ ಶಾಸಕರು, ಕಾರ್ಯಕರ್ತ ರಿಗೆ ಮಾತ್ರ ಸ್ಥಾನ, ಪರಿಷತ್ ಸದಸ್ಯರಿಗೆ ಅವಕಾಶವಿಲ್ಲ?
3.3- 4 ಬಾರಿ ಶಾಸಕರಾದ ವರಿಗೆ ಪಟ್ಟಿಯಲ್ಲಿ ಮೊದಲ ಆದ್ಯತೆ, 2 ಬಾರಿ ಆದವರಿಗೆ 2ನೇ ಆದ್ಯತೆ!
4.ಮೊದಲ ಹಂತದಲ್ಲೇ ಕಾರ್ಯಕರ್ತರಿಗೆ ಸ್ಥಾನ ಬೇಡ ಎಂದ ಸಿಎಂ? ಕೊಡುವುದೇ ಸೂಕ್ತ
ಎಂದ ಡಿಕೆಶಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.