Sena v/s Sena: ನಿಜವಾದ ಶಿವಸೇನೆ ಯಾರದ್ದು- ಸ್ಪೀಕರ್‌ ನೀಡಿದ ತೀರ್ಪಿನಲ್ಲೇನಿದೆ?

ನಿಜವಾದ ಶಿವಸೇನೆ ಯಾರು ಎಂದು ನಿರ್ಧರಿಸುವ ಹಕ್ಕು ನನಗಿದೆ

Team Udayavani, Jan 10, 2024, 6:06 PM IST

Sena v/s Sena: ನಿಜವಾದ ಶಿವಸೇನೆ ಯಾರದ್ದು- ಸ್ಪೀಕರ್‌ ನೀಡಿದ ತೀರ್ಪಿನಲ್ಲೇನಿದೆ?

ಮುಂಬೈ: ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರದ ಶಿವಸೇನೆ v/s ಶಿವಸೇನೆ ಪ್ರಕರಣದ ಕುರಿತು ಸುಪ್ರೀಂಕೋರ್ಟ್‌ ನೀಡಿದ ನಿರ್ದೇಶನದ ಮೇರೆಗೆ ಸ್ಪೀಕರ್‌ ರಾಹುಲ್‌ ನಾರ್ವೇಕರ್‌ ಬುಧವಾರ (ಜನವರಿ 10) ಸಂಜೆ ತೀರ್ಪನ್ನು ಪ್ರಕಟಿಸಿದ್ದಾರೆ.

ನಿಜವಾದ ಶಿವಸೇನೆ ಯಾರದ್ದು-ಸ್ಪೀಕರ್‌ ಹೇಳಿದ್ದೇನು?

ನಾಯಕತ್ವದ ಬಗ್ಗೆ ಎರಡೂ ಬಣಗಳು ವಿಭಿನ್ನ ದೃಷ್ಟಿಕೋನ ಹೊಂದಿದೆ. 2018ರ ತಿದ್ದುಪಡಿ ಕಾಯ್ದೆಯನ್ನು ಎರಡೂ ಬಣಗಳು ಒಪ್ಪಿಕೊಂಡಿವೆ. ವಿವಾದ ಸೃಷ್ಟಿಗೂ ಮೊದಲಿದ್ದ ನಾಯಕತ್ವ ರಚನೆಯನ್ನೂ ಪರಿಗಣಿಸಬೇಕಾಗುತ್ತದೆ. ಶಿವಸೇನೆ ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಘಟನೆಯನ್ನು ಪ್ರಮುಖವಾಗಿ ಪರಿಗಣಿಸಲಾಗುತ್ತಿದೆ.

ಅರ್ಜಿದಾರ ಉದ್ಧವ್‌ ಠಾಕ್ರೆ ಅವರ ಪತ್ರ ಪ್ರಸ್ತುತವಾಗಿಲ್ಲ. ಯಾಕೆಂದರೆ ಉದ್ಧವ್ ಠಾಕ್ರೆ ಅವರ 2018ರ ಸಂವಿಧಾನ ಸ್ವೀಕಾರರ್ಹವಲ್ಲ. ತಿದ್ದುಪಡಿ ಒಪ್ಪಲು ಸಾಧ್ಯವಿಲ್ಲ. 2018ರ ಸಂವಿಧಾನ ಗಣನೆಗೆ ತೆಗೆದುಕೊಳ್ಳಬೇಕೆಂಬುದನ್ನು ಒಪ್ಪಲ್ಲ. ಆಯೋಗದ ದಾಖಲೆ ಪ್ರಕಾರ ಶಿಂಧೆ ಬಣ ನಿಜವಾದ ಶಿವಸೇನೆಯಾಗಿದೆ. ಏಕನಾಥ್‌ ಶಿಂಧೆ ಅವರನ್ನು ಪಕ್ಷದಿಂದ ವಜಾಗೊಳಿಸುವ ಅಧಿಕಾರ ಉದ್ಧವ್‌ ಠಾಕ್ರೆಗಿಲ್ಲ. ನಿಜವಾದ ಶಿವಸೇನೆ ಯಾರು ಎಂದು ನಿರ್ಧರಿಸುವ ಹಕ್ಕು ನನಗಿದೆ ಎಂಬುದು ಸ್ಪೀಕರ್‌ ನಾರ್ವೇಕರ್‌ ಪ್ರತಿಪಾದಿಸುವ ಮೂಲಕ ಶಿಂಧೆ ಬಣ ನಿಜವಾದ ಶಿವಸೇನೆ ಎಂಬ ತೀರ್ಪು ನೀಡಿದ್ದಾರೆ. ಈ ಸಂದರ್ಭದಲ್ಲಿ ಸಿಎಂ ಶಿಂಧೆ ಹಾಗೂ ಉದ್ಧವ್‌ ಬಣದ ಶಾಸಕರು ಉಪಸ್ಥಿತರಿದ್ದರು.

ಏನಿದು ಅನರ್ಹತೆ ಜಟಾಪಟಿ:

ಏಕನಾಥ್‌ ಶಿಂಧೆ ಬಣದ ಶಾಸಕರು ಪಕ್ಷ ತೊರೆದ ನಂತರ ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿದ್ದ ಮಹಾವಿಕಾಸ ಅಘಾಡಿ ನೇತೃತ್ವದ ಮೈತ್ರಿ ಸರ್ಕಾರ ಪತನಗೊಂಡಿತ್ತು. ನಂತರ ಏಕನಾಥ್‌ ಶಿಂಧೆ ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದು, ಶಿಂಧೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ಈ ಹಿನ್ನೆಲೆಯಲ್ಲಿ ಉದ್ಧವ್‌ ಠಾಕ್ರೆ ಮತ್ತು ಶಿಂಧೆ ಬಣ ಪಕ್ಷಾಂತರ ನಿಷೇಧ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದವು. ಈ ಕುರಿತು ಸ್ಪೀಕರ್‌ ನಾರ್ವೇಕರ್‌ ತೀರ್ಪು ಪ್ರಕಟಿಸಿದ್ದಾರೆ. ಶಿವಸೇನೆ ಶಾಸಕರ ಪಕ್ಷಾಂತರ ಪ್ರಕರಣದ ಕುರಿತು ಜನವರಿ 10ರೊಳಗೆ ತೀರ್ಪು ಪ್ರಕಟಿಸುವಂತೆ ಸುಪ್ರೀಂಕೋರ್ಟ್‌ ಗಡುವು ವಿಧಿಸಿತ್ತು. ಇದೀಗ ಸ್ಪೀಕರ್‌ ತೀರ್ಪು ನೀಡಿದ್ದು, ಉದ್ಧವ್‌ ಠಾಕ್ರೆ ಬಣ ಸುಪ್ರೀಂಕೋರ್ಟ್‌ ಮೆಟ್ಟಿಲೇರುವುದಾಗಿ ತಿಳಿಸಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.