ಧಾರ್ಮಿಕ ಭಾವನೆಕ್ಕೆ ಧಕ್ಕೆ ಆರೋಪ: ‌ʼಅನ್ನಪೂರ್ಣಿʼ ಸ್ಟ್ರೀಮಿಂಗ್‌ ನಿಲ್ಲಿಸಿದ Netflix

Team Udayavani, Jan 11, 2024, 1:35 PM IST

ಧಾರ್ಮಿಕ ಭಾವನೆಕ್ಕೆ ಧಕ್ಕೆ ಆರೋಪ: ‌ʼಅನ್ನಪೂರ್ಣಿʼ ಸ್ಟ್ರೀಮಿಂಗ್‌ ನಿಲ್ಲಿಸಿದ Netflix

ಚೆನ್ನೈ: ಲೇಡಿ ಸೂಪರ್‌ ಸ್ಟಾರ್ ನಯನತಾರಾ ಅಭಿನಯಿಸಿರುವ ʼಅನ್ನಪೂರ್ಣಿʼ ಸಿನಿಮಾದ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ತಂದಿರುವ ಆರೋಪ ಕೇಳಿಬಂದಿದ್ದು, ಬಾಯ್ಕಟ್‌ ಕೂಗು ಹಾಗೂ ಪ್ರತಿಭಟನೆ ಶುರುವಾಗಿದೆ.

ಆರೋಪವೇನು?:  ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ನಯನತಾರಾ ಅವರ ಇತ್ತೀಚಿನ ಚಿತ್ರ ʼಅನ್ನಪೂರ್ಣಿʼ ಸಿನಿಮಾದ ನಿರ್ಮಾಪಕರ ವಿರುದ್ಧ ಶಿವಸೇನೆಯ ಮಾಜಿ ನಾಯಕ ರಮೇಶ್ ಸೋಲಂಕಿ ಪೊಲೀಸ್ ದೂರು ದಾಖಲಿಸಿದ್ದಾರೆ. ನಿರ್ಮಾಪಕರು ರಾಮನನ್ನು ಅವಮಾನಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

“ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ಜಗತ್ತು ಸಂಭ್ರಮಿಸುತ್ತಿರುವ ಈ ಸಮಯದಲ್ಲಿ, ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಚಲನಚಿತ್ರ ʼಅನ್ನಪೂರ್ಣಿʼ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡುವ ವೇಳೆ ನಮಾಜ್ ಮಾಡುತ್ತಾಳೆ.ಈ ಚಿತ್ರದಲ್ಲಿ ಲವ್ ಜಿಹಾದ್ ನ್ನು ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸ ತಿನ್ನುವವರಾಗಿದ್ದರು ಎಂದು ಹೇಳಿ ಮಾಂಸ ತಿನ್ನಲು ನಟಿಯನ್ನು ಮನವೊಲಿಸುವ ದೃಶ್ಯಗಳಿವೆ” ಎಂದು ಸೋಲಂಕಿ ಬರೆದಿದ್ದಾರೆ.

ಇದನ್ನೂ ಓದಿ: Thug Life: ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಚಿತ್ರಕ್ಕೆ ಇಬ್ಬರು ಸ್ಟಾರ್‌ ನಟರ ಎಂಟ್ರಿ

ಪ್ರಕರಣ ದಾಖಲಾದ ಬಳಿಕ  ಚಿತ್ರತಂಡದ ವಿರುದ್ಧ ʼಬಾಯ್ಕಟ್‌ ಹಾಗೂ ಪ್ರತಿಭಟನೆ ನಡೆದಿದೆ. ಈ ನಡುವೆ ಸ್ಟ್ರೀಮಿಂಗ್‌ ಫ್ಲಾಟ್‌ ಫಾರ್ಮ್‌ ನೆಟ್‌ ಫ್ಲಿಕ್ಸ್‌  ಸಿನಿಮಾದ ಸ್ಟ್ರೀಮಿಂಗ್ ನ್ನು ನಿಲ್ಲಿಸಿದೆ. ಬುಧವಾರ(ಜ.10) ದವರೆಗೆ ನೆಟ್‌ ಫ್ಲಿಕ್ಸ್‌ ನಲ್ಲಿ ಸಿನಿಮಾ ಸ್ಟ್ರೀಮ್‌ ಆಗುತ್ತಿತ್ತು. ಆದರೆ ಗುರುವಾರದಿಂದ ಸಿನಿಮಾ ನೆಟ್‌ ಫ್ಲಿಕ್ಸ್‌ ನಲ್ಲಿ ಕಾಣಿಸುತ್ತಿಲ್ಲ.‌ ಸಿನಿಮಾದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯೇ ಇದಕ್ಕೆ ಕಾರಣವೆಂದು ಹೇಳಲಾಗುತ್ತಿದೆ.

ಮತ್ತೆ ಯಾವಾಗದಿಂದ ಸ್ಟ್ರೀಮ್‌ ಆಗುತ್ತದೆ ಎನ್ನುವುದರ ಮಾಹಿತಿಯಿಲ್ಲ. ಸಿನಿಮಾಕ್ಕೆ ಕೇಳಿ ಬರುತ್ತಿರುವ ವಿರೋಧದ ಬಗ್ಗೆ ಚಿತ್ರತಂಡ ಇದುವರೆಗೆ ಯಾವುದೇ ಸ್ಪಷ್ಟೀಕರಣ ನೀಡಿಲ್ಲ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.