KRPP ಧ್ವನಿ ದಿಲ್ಲಿಯಲ್ಲಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ: ಗಾಲಿ ಜನಾರ್ದನ ರೆಡ್ಡಿ


Team Udayavani, Jan 11, 2024, 5:31 PM IST

KRPP ಧ್ವನಿ ದಿಲ್ಲಿಯಲ್ಲಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ: ಗಾಲಿ ಜನಾರ್ದನ ರೆಡ್ಡಿ

ಕೊಪ್ಪಳ: ದಿಲ್ಲಿಯಲ್ಲಿ ಕೆಆರ್ ಪಿಪಿ ಧ್ವನಿ ಕೇಳಿಸುವವರೆಗೂ ನಿದ್ದೆ ಮಾಡುವುದಿಲ್ಲ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಘೋಷಣೆ ಮಾಡಿದಾಗ ಚುನಾವಣೆ ಮೂರು ತಿಂಗಳಿತ್ತು, ಆಗ ನಾನು ಎಲ್ಲಿ ಸ್ಪರ್ಧೆ ಮಾಡುತ್ತೇನೆಂಬ ಚಿಂತೆಯಿತ್ತು. ನಾನು ಎಲ್ಲಿ ಸ್ಪರ್ಧೆ ಮಾಡಿದರೆ ಅಲ್ಲಿ ಯಾರು ಹೆದರುತ್ತಾರೆ ಎನ್ನುವ ಟೆನ್ಶನ್ ಇತ್ತು. ಆಗ ಪಕ್ಷ ಘೋಷಣೆ ಮಾಡಿದಾಗಲೇ ಗಂಗಾವತಿಗೆ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದೆ. ನನ್ನ ವ್ಯಾಪಾರದ ದಿನದಿಂದಲೂ ಈ ಭಾಗದ ಜನರೊಂದಿಗೆ ಒಳ್ಳೆಯ ಬಾಂಧವ್ಯ ಇದೆ ಎಂದರು.

ಜಿಲ್ಲಾ ಕೇಂದ್ರ ಆರಂಭದ ದಿನದಿಂದಲೂ ಕೊಪ್ಪಳದಲ್ಲಿ ಅಭಿವೃದ್ಧಿಯಾಗಿಲ್ಲ ಈ ಭಾಗದ ಯುವಕರಿಗೆ ಕೆಲಸವಿಲ್ಲ. ಸ್ಥಳೀಯ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗಬೇಕು. ಇಲ್ಲವೆಂದರೆ ನಾನು ಫ್ಯಾಕ್ಟರಿ ನಡೆಸಲು ಬಿಡುವುದಿಲ್ಲ. ಸಂಸದ ಕರಡಿ ಸಂಗಣ್ಣ ಆತ್ಮೀಯ ಸಹೋದರರು. ಅವರು ಎಂಪಿ ಆಗಿ 10 ವರ್ಷ ಆಗಿದೆ. ಆದರೂ ಅವರು ಏನೂ ಮಾಡಲು ಆಗಲಿಲ್ಲ. ಅವರು ಅಂಜನಾದ್ರಿ ಅಭಿವೃದ್ಧಿಗಾಗಿ ಏನು ಮಾಡಿದ್ದಾರೆ? ಅವರು ಧ್ವನಿಯತ್ತುವ ಪರಿಸ್ಥಿತಿಯಲ್ಲಿ ಇಲ್ಲ ಎಂದರು.

ಜನಾರ್ದನ ರೆಡ್ಡಿಗೆ ಇರುವ ಧೈರ್ಯ ನಮಗೆ ಇಲ್ಲ‌ ಎಂದು ಶ್ರೀರಾಮುಲು ಹೇಳಿದ್ದಾರೆ ಧೈರ್ಯದಿಂದ ಮಾತನಾಡಿದರೆ ಟಿಕೆಟ್ ಕೊಡುವುದಿಲ್ಲ‌ ಎನ್ನುವ ಭಯ ಅವರಲ್ಲಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಧ್ವನಿ ಎತ್ತಲು ಸಾಧ್ಯವಾ? ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ಹೇಳಿ ರಾಘವೇಂದ್ರ ಹಿಟ್ನಾಳ್ ಧ್ವನಿ ಎತ್ತಿಲ್ಲ ಎಂದರು.

ಲೋಕಸಭಾ ಕ್ಷೇತ್ರದ 7 ಕ್ಷೇತ್ರದಲ್ಲಿ ನಾನು ಕೆಲಸ ಮಾಡುತ್ತೇನೆ. ಸಿರಗುಪ್ಪದಲ್ಲಿ ನನ್ನ ಶ್ರೀಮತಿ, ಪುತ್ರಿ ಪ್ರಚಾರ ಮಾಡುತ್ತಾರೆ. ಅಂಜನಾದ್ರಿ‌ ಅಭಿವೃದ್ಧಿಗೆ ನಾನು ಹಲವು ಯೋಜನೆಗಳ ಹಾಕಿಕೊಂಡಿದ್ದೇನೆ. ಪ್ರಧಾನಿ ಮೋದಿ ಅವರು ಅಂಜನಾದ್ರಿ, ಶ್ರೀರಾಮ್ ಸರ್ಕ್ಯೂಟ್ ಮಾಡುವುದಾಗಿ ಹೇಳಿದ್ದರು. ಆದರೆ ಅದನ್ನು ನೆನಪು ಮಾಡಲು ಎಂಪಿ ಸಂಗಣ್ಣ ವಿಫಲರಾದರಾ? ಅವರು ಏಕೆ ಮರೆತರೆಂದು ಗೊತ್ತಾಗಲಿಲ್ಲ. ಕೊಪ್ಪಳದ ಧ್ವನಿ ದೆಹಲಿಯಲ್ಲಿ ಕೇಳಿಬರಲು ಆಶೀರ್ವಾದ ಮಾಡಬೇಕು. ಕೊಪ್ಪಳ‌ ಲೋಕಸಭೆ ವ್ಯಾಪ್ತಿಯಲ್ಲಿ 100 ಬಹಿರಂಗ ಸಭೆಗಳನ್ನು ಮಾಡುತ್ತೇನೆ. ಮುಂದಿನ ದಿನಗಳಲ್ಲಿ ಕೆಆರ್ ಪಿಪಿ 15 ಜಿಲ್ಲೆಗಳಲ್ಲಿ ಪಕ್ಷವನ್ನು ಅಚ್ಚುಕಟ್ಟಾಗಿ ಸಂಘಟನೆ ಮಾಡಿ ಅಧಿಕಾರಕ್ಕೆ ತರುತ್ತೇನೆ ಎಂದು ಜನಾರ್ದನ ರೆಡ್ಡಿ ಹೇಳಿದರು.

ಟಾಪ್ ನ್ಯೂಸ್

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

Koppala–women

Tragedy: ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲೂ ಬಾಣಂತಿ, ಶಿಶು ಸಾವು: ಕುಟುಂಬಸ್ಥರ ಆಕ್ರೋಶ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

doctor

ಕೊಪ್ಪಳದಲ್ಲಿ ಕ್ಯಾನ್ಸರ್‌ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್‌ ಪತ್ತೆ!

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.