CEO ಪೈಶಾಚಿಕ ಕೃತ್ಯ: ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲಿರುವ ಪೊಲೀಸರು!

ಮಗನ ಮುಖ ತಂದೆಯ ಮುಖವನ್ನೇ ಹೋಲುತ್ತಿದ್ದುದು ತಾಯಿ ದುಷ್ಟೆಯಾಗಲು ಕಾರಣ?

Team Udayavani, Jan 11, 2024, 7:44 PM IST

1-sadsdas

ಪಣಜಿ: ತನ್ನ ನಾಲ್ಕು ವರ್ಷದ ಮಗುವನ್ನು ಬರ್ಬರವಾಗಿ ಹತ್ಯೆಗೈದಿರುವ ಆರೋಪ ಹೊತ್ತಿರುವ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಳನ್ನು ಶುಕ್ರವಾರ ಗೋವಾ ಪೊಲೀಸರು ಅಪರಾಧದ ದೃಶ್ಯವನ್ನು ಮರುಸೃಷ್ಟಿಸಲು ಆಕೆ ತಂಗಿದ್ದ ಸರ್ವಿಸ್ ಅಪಾರ್ಟ್‌ಮೆಂಟ್‌ಗೆ ಕರೆದೊಯ್ಯಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದು, ಪ್ರಕರಣದ ತನಿಖೆಯ ಭಾಗವಾಗಿ ಇದು ಅಗತ್ಯ ಎಂದು ಹೇಳಿದ್ದಾರೆ.

39 ರ ಹರೆಯದ ಸುಚನಾ ಜನವರಿ 6 ರಂದು ಗೋವಾದ ಕ್ಯಾಂಡೋಲಿಮ್‌ನಲ್ಲಿರುವ ಅಪಾರ್ಟ್‌ಮೆಂಟ್‌ ಗೆ ತೆರಳಿ ಜನವರಿ 8 ರವರೆಗೆ ಅಲ್ಲಿಯೇ ಇದ್ದರು. ಆಕೆ ತನ್ನ ಮಗನನ್ನು ಅಪಾರ್ಟ್‌ಮೆಂಟ್‌ನಲ್ಲಿಯೇ ಶವವನ್ನು ತೆಗೆದುಕೊಂಡು ಹೋಗುವ ಮೊದಲು ಬ್ಯಾಗ್‌ನಲ್ಲಿ ತುಂಬಿದ್ದಳು. ಸೋಮವಾರ ರಾತ್ರಿ ಟ್ಯಾಕ್ಸಿಯಲ್ಲಿ ಬರುತ್ತಿದ್ದ ವೇಳೆ ಚಿತ್ರದುರ್ಗದಲ್ಲಿ ಆಕೆಯನ್ನು ಬಂಧಿಸಿ ಮಂಗಳವಾರ ಗೋವಾಕ್ಕೆ ಕರೆತರಲಾಗಿತ್ತು.

“ಇದು ತನಿಖೆಯ ಭಾಗವಾಗಿದೆ. ಸದ್ಯ ಆಕೆ ಪೊಲೀಸ್ ವಶದಲ್ಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯನ್ನು ವಿಚಾರಣೆ ನಡೆಸುತ್ತಿದ್ದೇವೆ.ನಾಲ್ಕು ವರ್ಷದ ಮಗುವನ್ನು ಬಟ್ಟೆಯ ತುಂಡಿನಿಂದ ಅಥವಾ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದು ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಗುವಿನ ಮೃತದೇಹವನ್ನು ತಂದೆ ವೆಂಕಟ್ ರಾಮನ್ ಅವರು ಬುಧವಾರ ಬೆಂಗಳೂರಿನಲ್ಲಿ ಅಂತ್ಯಸಂಸ್ಕಾರ ಮಾಡಿದರು.

ದ್ವೇಷವೇ ಕುಕೃತ್ಯಕ್ಕೆ ಕಾರಣವಾಯಿತು? 

ತನ್ನ ಮಗ ತನ್ನ ಪತಿ ವೆಂಕಟ್ ರಾಮನ್‌ನನ್ನು ಹೋಲುತ್ತಾನೆ ಮತ್ತು ಯಾವಾಗಲೂ ತಮ್ಮ ದೂರವಾದ ಸಂಬಂಧವನ್ನು ನೆನಪಿಸುತ್ತಾನೆ ಎಂದು ಸುಚನಾ ತನ್ನ ಸ್ನೇಹಿತರು ಮತ್ತು ಕುಟುಂಬ ಸದಸ್ಯರಿಗೆ ಹೇಳಿದ್ದಳು ಎಂದು ಪ್ರಕರಣದ ಆಳವಾದ ತನಿಖೆ ವೇಳೆ ತಿಳಿದು ಬಂದಿದೆ.

ನ್ಯಾಯಾಲಯದ ಆದೇಶದ ಪ್ರಕಾರ, ರಾಮನ್ ಅವರು ಸುಚನಾಗೆ ಕರೆ ಮಾಡಿ ಮಗನನ್ನು ಭೇಟಿಯಾಗಲು ಬಯಸಿದ್ದರು ಎಂದು ತಿಳಿದುಬಂದಿದೆ. ಸುಚನಾ ತನ್ನ ವಿಚ್ಛೇದಿತ ಗಂಡನ ಮನವಿಯನ್ನು ತಿರಸ್ಕರಿಸಿ, ನಗರದ ಸಾರ್ವಜನಿಕ ಸ್ಥಳದಲ್ಲಿ ತನ್ನನ್ನು ಭೇಟಿಯಾಗುವಂತೆ ಕೇಳಿಕೊಂಡಿದ್ದಳು ಎಂದು ತಿಳಿದು ಬಂದಿದೆ.

ಆಕೆಯ ಕೋರಿಕೆಯ ಮೇರೆಗೆ, ರಾಮನ್ ಸುಚನಾಗಾಗಿ ಸಾರ್ವಜನಿಕ ಸ್ಥಳದಲ್ಲಿ ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾದಿದ್ದು, ಬರದಿದ್ದಾಗ ಹಲವಾರು ಬಾರಿ ಕರೆ ಮಾಡಿದ್ದರು. ಸಂದೇಶಗಳು ಮತ್ತು ಇಮೇಲ್‌ಗಳಿಗೆ ಅವಳು ಪ್ರತಿಕ್ರಿಯಿಸಲಿಲ್ಲ ಎಂದು ಆರೋಪಿಸಲಾಗಿದೆ.

ಪಶ್ಚಾತ್ತಾಪ ಇಲ್ಲ

ಮಗುವನ್ನು ಕೊಂದಿರುವ ಬಗ್ಗೆ ಕೊಂಚವೂ ಪಶ್ಚತ್ತಾಪ ಪಡುತ್ತಿಲ್ಲವೆಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಈ ವೇಳೆ ಸರ್ವೀಸ್‌ ಅಪಾರ್ಟ್‌ಮೆಂಟ್‌ನ ಸಿಬಂದಿ ಕಾರ್‌ಗಿಂತ ವಿಮಾನದ ದರವೇ ಕಡಿಮೆ ಇದೆ ಎಂದರೂ ಸುಚನಾ ಅದನ್ನು ನಿರಾಕರಿಸಿದ್ದರು. 30,000ರೂ.ಗಳನ್ನು ನೀಡಿ ಕಾರ್‌ ಬಾಡಿಗೆ ಪಡೆದಿದ್ದರೆಂದು ಪೊಲೀಸರು ತಿಳಿಸಿದ್ದಾರೆ.
ತನಿಖೆ ವೇಳೆ ಪತ್ರ ಪತ್ತೆ: ಮಗುವನ್ನು ಕೊಲ್ಲು ವುದಕ್ಕೆ ನಿಜವಾದ ಕಾರಣವೇನು ಎನ್ನುವ ನಿಟ್ಟಿನಲ್ಲಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ. ಈ ವೇಳೆ ಸುಚನಾ ಅವರ ಕೊಠಡಿ ಯಲ್ಲಿ 4 ಸಾಲು ಗಳು ಬರೆದಿರುವ ಆಕೆಯ ಕೈಬರಹದ ಪತ್ರವೊಂದು ಸಿಕ್ಕಿದೆ. ಮಾದ ರಿಗಾಗಿ ಅದನ್ನು ವಶಪಡಿಸಿ ಕೊಂಡಿ ರುವುದಾಗಿ ಪೊಲೀಸರು ಹೇಳಿದ್ದಾರೆ.

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.