ಮೇಲ್ಜಾತಿಯವರು ಇಂದು ಶೋಷಿತರ ಧ್ವನಿ ಅಡಗಿಸುತ್ತಿದ್ದಾರೆ: ಕೆ.ಎಂ.ರಾಮಚಂದ್ರಪ್ಪ
ದಲಿತರು, ಆದಿವಾಸಿ, ಅಲೆಮಾರಿಗಳು, ಅಲ್ಪಸಂಖ್ಯಾತರು ಶಕ್ತಿ ಪ್ರದರ್ಶಿಸಬೇಕಿದೆ...ಸಿದ್ದರಾಮಯ್ಯನವರ ಕೈ ಬಲಪಡಿಸಬೇಕಿದೆ..
Team Udayavani, Jan 11, 2024, 8:20 PM IST
ಬೆಳಗಾವಿ: ಮೇಲ್ಜಾತಿಯವರು ಇಂದು ಶೋಷಿತರ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದ್ದು, ಅದಕ್ಕಾಗಿ ದಲಿತರು, ಹಿಂದುಳಿದವರು, ಆದಿವಾಸಿ, ಅಲೆಮಾರಿಗಳು, ಅಲ್ಪಸಂಖ್ಯಾತರು ನಮ್ಮ ಹಕ್ಕಿಗಾಗಿ ಶಕ್ತಿ ಪ್ರದರ್ಶಿಸಬೇಕಿದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ಕೆ.ಎಂ. ರಾಮಚಂದ್ರಪ್ಪ ಕರೆ ನೀಡಿದರು.
ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಜಿಲ್ಲಾ ಮಟ್ಟದ ಸಂಘಟನೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆಯಲ್ಲಿ ಇತ್ತೀಚಿಗೆ ನಡೆದ ವೀರಶೈವ-ಲಿಂಗಾಯತರ ಮಹಾ ಅಧಿವೇಶನದಲ್ಲಿ ಕಾಂತರಾಜ್ ವರದಿಯನ್ನು ವಿರೋಧಿಸುವುದಾಗಿ ನಿರ್ಣಯ ತೆಗೆದುಕೊಳ್ಳುವ ಮೂಲಕ ನಮ್ಮ ಮೇಲೆ ಸವಾರಿ ಮಾಡುವುದಾಗಿ ಸಂದೇಶ ನೀಡಿದ್ದಾರೆ. ಸರ್ಕಾರ ಇನ್ನು ವರದಿಯನ್ನೇ ಬಿಡುಗಡೆಗೊಳಿಸಿಲ್ಲ. ವೈಜ್ಞಾನಿಕ-ಅವೈಜ್ಞಾನಿಕ ಎಂದು ಹೇಗೆ ಹೇಳಲು ಸಾಧ್ಯ ಎಂದು ಪ್ರಶ್ನಿಸಿದರು.
1931 ರಲ್ಲಿ ಜಾತಿವಾರು ಸಮೀಕ್ಷೆಯಾಗಿತ್ತು. 92 ವರ್ಷಗಳ ನಂತರ ಈಗ ಮತ್ತೆ ಜಾತಿವಾರು ಜನಗಣತಿಯಾಗಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಶೋಷಿತ ಸಮುದಾಯಗಳು ಮೈಮರೆತು ಕೂತರೆ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಶೋಷಿತ ಸಮುದಾಯದ ಪ್ರಗತಿಗೆ ಶ್ರಮಿಸುತ್ತಿರುವ ಸಿಎಂ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕಿದೆ. ಪ್ರಜ್ಞಾವಂತ ರಾಜಕಾರಣಿ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನಮ್ಮೆಲ್ಲರ ನಾಯಕ ಎಂದು ಎಲ್ಲ ಶೋಷಿತರು ಒಪ್ಪಿಕೊಂಡಿದ್ದೇವೆ ಎಂದರು.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್ ಮಾತನಾಡಿ, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗದವರು, ಅಲ್ಪ ಸಂಖ್ಯಾತರು, ಓಬಿಸಿಗಳು ಇಷ್ಟು ದಿನ ನಮ್ಮ ನಮ್ಮ ಬೇಡಿಕೆಗಳಿಗಾಗಿ ಬೇರೆ ಬೇರೆ ವೇದಿಕೆಗಳಲ್ಲಿ ಹೋರಾಟ ಮಾಡುತ್ತಿದ್ದವು, ಆದರೆ ಇಂದು ಒಂದಾಗಿ ಹೋರಾಟಕ್ಕಿಳಿದಿರುವುದು ಸಂತಸದ ವಿಚಾರ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ, ಸ್ವಾತಂತ್ರ್ಯ ದೊರೆತು 75 ವರ್ಷಗಳು ಗತಿಸಿದರೂ ಶೋಷಿತ ಸಮುದಾಯದವರು ಇನ್ನು ಮೇಲ್ಜಾತಿಯವರ ಶೋಷಣೆಯಿಂದ ಮುಕ್ತಿ ಹೊಂದಿಲ್ಲ. ಈಗ ಕೆಲವು ರಾಜಕಾರಣಿಗಳ ಜತೆ ಸ್ವಾಮೀಜಿಗಳು ಹೆಚ್. ಕಾಂತರಾಜ್ ವರದಿ ಸ್ವೀಕಾರಕ್ಕೆ ವಿರೋಧಿಸುವ ಮೂಲಕ ಶೋಷಿತ ಸಮುದಾಯಗಳನ್ನು ತುಳಿಯುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟನೆ
ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ
Butterfly Park: ಬೆಳಗಾವಿಯ ಹಿಡಕಲ್ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.