Congress: ಜ. 21ರಂದು ಮಂಗಳೂರಿನಲ್ಲಿ ಕಾರ್ಯಕರ್ತರ ರಾಜ್ಯ ಸಮಾವೇಶ
Team Udayavani, Jan 12, 2024, 11:36 PM IST
ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ ವನ್ನು ಜ. 21ರಂದು ಮಂಗಳೂರಿನಲ್ಲಿ ಆಯೋಜಿಸಲಾಗಿದ್ದು, 1 ಲಕ್ಷ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆಯಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಖೀಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಜ. 21ರಂದು ಪ್ರತೀ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯಕ್ಕೆ ಸಂಬಂ ಧಿಸಿದಂತೆ ಸಮಾವೇಶವನ್ನು ಮಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪದಾಧಿಕಾರಿಗಳಿಗೆ ಸೂಚಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುಜೇìವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹಿತ ಕಾಂಗ್ರೆಸ್ ವರಿಷ್ಠರು ಭಾಗವಹಿಸುವ ನಿರೀಕ್ಷೆಯಿದೆ.
ಸಚಿವ ದಿನೇಶ್ ಗುಂಡೂರಾವ್, ಪಕ್ಷದ ನಾಯಕರಾದ ಬಿ. ರಮಾನಾಥ ರೈ, ವಿನಯ ಕುಮಾರ್ ಸೊರಕೆ, ಅಭಯಚಂದ್ರ ಜೈನ್, ಅಶೋಕ್ ಕುಮಾರ್ ರೈ, ಮಂಜುನಾಥ ಭಂಡಾರಿ, ಶಕುಂತಳಾ ಶೆಟ್ಟಿ, ಜೆ.ಆರ್. ಲೋಬೊ, ವಿ.ಪರಿಷತ್ ಮಾಜಿ ಸದಸ್ಯ ಐವನ್ ಡಿ’ಸೋಜಾ ಮಾತನಾಡಿದರು. ಅಶೋಕ್ ಕೊಡವೂರು, ಇಬ್ರಾಹಿಂ ಕೋಡಿಜಾಲ್, ಪಿ.ವಿ ಮೋಹನ್, ಮಮತಾ ಗಟ್ಟಿ, ರಕ್ಷಿತ್ ಶಿವರಾಮ್, ಯು.ಕೆ ಮೋನು, ಎಂ.ಎ. ಗಫೂರ್, ಸದಾಶಿವ ಉಳ್ಳಾಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.