Jammu – Kashmir: ಸೇನಾ ವಾಹನದ ಮೇಲೆ ಮತ್ತೆ ಗುಂಡಿನ ದಾಳಿ… ಶೋಧ ಕಾರ್ಯಾಚರಣೆ
Team Udayavani, Jan 13, 2024, 8:31 AM IST
ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್ ನಲ್ಲಿ ಮತ್ತೆ ಭಯೋತ್ಪಾದಕರು ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಇದಕ್ಕೆ ಪ್ರತಿಯಾಗಿ ಸೇನೆಯು ಗುಂಡಿನ ದಾಳಿ ನಡೆಸಿದ್ದು ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆದಿರುವುದಾಗಿ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ತಲೆಮರೆಸಿಕೊಂಡಿರುವ ಭಯೋತ್ಪಾದಕರ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸೇನೆ ‘ಕೃಷ್ಣ ಘಾಟಿ (ಇನ್) ಪೂಂಛ್ ಸೆಕ್ಟರ್ ಬಳಿಯ ಕಾಡಿನಲ್ಲಿ ಶಂಕಿತ ಭಯೋತ್ಪಾದಕರು ಭದ್ರತಾ ಪಡೆಗಳ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದು ಸೇನಾ ಪಡೆ ಪ್ರತಿಯಾಗಿ ನಡೆಸಿದ ಸಂದರ್ಭ ಭಯೋತ್ಪಾದಕರು ಕಾಡಿನೊಳಗೆ ಅವಿತು ಕುಳಿತಿರುವ ಶಂಕೆ ಇದ್ದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಅಲ್ಲದೆ ಗುಂಡಿನ ದಾಳಿಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸೇನೆ ತಿಳಿಸಿದೆ.
ಈ ಪ್ರದೇಶದಲ್ಲಿ ಭಯೋತ್ಪಾದಕರ ವಿನ್ಯಾಸವನ್ನು ವಿಫಲಗೊಳಿಸಲು ಹೊಸ ವರ್ಷಕ್ಕೆ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಯೋಜನೆಯನ್ನು ರೂಪಿಸಲು ಉತ್ತರ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಭದ್ರತಾ ಸಭೆಯ ನಂತರ ಈ ಘಟನೆ ನಡೆದಿದೆ ಎಂದು ಪಿಟಿಐ ವರದಿ ಮಾಡಿದೆ.
ಕಳೆದ ಕೆಲ ವಾರಗಳ ಹಿಂದೆ ಪೂಂಛ್ ನಲ್ಲಿ ಸೇನಾ ವಾಹನದ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಯೋಧರು ಹುತಾತ್ಮರಾಗಿದ್ದರು.
At around 1800h today, a Security Forces convoy of vehicles was fired upon by suspected terrorists from a jungle near Krishna Ghati #Poonch sector. No casualties to own troops. Joint search
Operations by #IndianArmy and #JKP are in progress.@adgpi @NorthernComd_IA pic.twitter.com/jR0ytWRy88— White Knight Corps (@Whiteknight_IA) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.