Sirsi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ.23ಕ್ಕೆ ಸಿಐಟಿಯು ಪ್ರತಿಭಟನೆ
Team Udayavani, Jan 13, 2024, 2:42 PM IST
ಶಿರಸಿ: ಹಲವು ಬೇಡಿಕೆ ಈಡೇರಿಕೆಗೆ ಜ.23ಕ್ಕೆ ರಾಜ್ಯದೆಲ್ಲಡೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಸಂಸದರ ಕಚೇರಿ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷೆ ವರಲಕ್ಷ್ಮೀ ಹೇಳಿದರು.
ಅವರು ನಗರದ ಕರ್ಜಗಿ ಕಲ್ಯಾಣ ಮಂಟಪದಲ್ಲಿ ಜ.13ರ ಶನಿವಾರ ಸುದ್ದಿಗೊಷ್ಠಿ ನಡೆಸಿ, ಅಂಗನವಾಡಿ, ಬಿಸಿಯೂಟ ನೌಕರರು ಒಂದು ದಿನದ ಕೆಲಸ ನಿಲ್ಲಿಸಿ ಹೋರಾಟ ಮಾಡಲಿದ್ದಾರೆ. 2013 ರಿಂದ ಅಂಗನವಾಡಿಗೆ, 2000ದಿಂದ ಬಿಸಿಯೂಟದವರಿಗೆ ವೇತನ ಹೆಚ್ಚಳ ಮಾಡಿಲ್ಲ. ಹೆಚ್ಚುವರಿ ಕೆಲಸ ಮಾತ್ರ ಏರುತ್ತಿದೆ. ಅಂಗನವಾಡಿ, ಬಿಸಿಯೂಟದವರಿಗೆ ಬದುಕು ನಡೆಸುವುದೇ ಕಷ್ಟವಾಗಿದೆ. ಆಹಾರ, ಆರೋಗ್ಯ, ಉದ್ಯೋಗ ಭದ್ರತೆ ಆಗಬೇಕು. ಸೇವೆ ಸರಕಾಗಿಸಿದ್ದೇ ಸಮಸ್ಯೆ ಆಗಿದೆ ಎಂದರು.
ಕೇಂದ್ರ ಸರಕಾರ ಬಜೆಟ್ ನಲ್ಲಿ ಸೇರಿಸುವುದನ್ನೂ ಕಡಿತ ಮಾಡಲಾಗಿದೆ. ಅನುದಾನ ನೀಡಲು ಬಜೆಟ್ ನಲ್ಲೇ ಕೊರತೆ ಮಾಡುತ್ತಿದೆ. ಬರಲಿರುವ ಬಜೆಟ್ ನಲ್ಲಿ ಆದರೂ ಅಂಗನವಾಡಿ ಬಿಸಿಯೂಟಕ್ಕೆ ಕನಿಷ್ಠ ವೇತನ ಕೊಡಬೇಕು. ಕಡಿತ ಮಾಡಿದ ಅನುದಾನ ವಾಪಸ್ ಕೊಡಬೇಕು ಎಂದರು.
ಈಚೆಗೆ ಅಂಗನವಾಡಿ ಮಕ್ಕಳು ಕಡಿಮೆಯಾಗುತ್ತಿದ್ದಾರೆ. ಬೇರೆ ಬೇರೆ ಇಲಾಖೆಯಿಂದ ಈ ಮಕ್ಕಳಿಗೆ ಶಿಕ್ಷಣ ಕೊಡುವುದು ಹೆಚ್ಚುತ್ತಿದೆ. 3ರಿಂದ 6 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯಗೊಳಿಸಬೇಕು ಎಂಬ ಹೊಸ ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟಿದ್ದೇವೆ. ಕಾನೂನು ಜಾರಿಗೆ ತರಬೇಕು ಎಂದರು.
ಕಾರ್ಮಿಕರ ಪರವಾದ ಕಾನೂನು ಬರಬೇಕು. 31 ಸಾವಿರ ರೂ. ಸಮಾನ ಕನಿಷ್ಠ ವೇತನ ಜಾರಿಗೆ ಮಾಡಬೇಕು. ಏಕ ಧರ್ಮ, ಏಕ ಸಂಸ್ಜೃತಿ ಎನ್ನುವ ಕೇಂದ್ರ ಸರಕಾರ ವೇತನದಲ್ಲೂ ಏಕತೆ ತರಬೇಕಾಗಿದೆ ಎಂದರು.
ಸಿ.ಆರ್.ಶಾನಭೋಗ ಮಾತನಾಡಿ, ಜನರಿಂದ ಕೂಡ ಈ ಬೇಡಿಕೆಗಳ ಈಡೇರಿಕೆಗೆ ಸಹಿ ಸಂಗ್ರಹ ಕೂಡ ಮಾಡಲಾಗುತ್ತಿದೆ ಎಂದರು.
ಯಮುನಾ ಗಾಂವಕರ್ ಮಾತನಾಡಿ, ಪ್ರತಿ ತಾಲೂಕಿನಿಂದ ಸರಾಸರಿ 1 ಲಕ್ಷ ಸಹಿ ಸಂಗ್ರಹಿಸುವ ಆಂದೋಲನ ಮಾಡಲಾಗುತ್ತದೆ. ಜಿಲ್ಲೆಯ ಬೇರೆ ಬೇರೆ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ಈ ವೇಳೆ ಗಂಗಾ ನಾಯ್ಕ, ಮುತ್ತಾ ಪೂಜಾರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
Uttara kannada: ತಳಕು-ಬಳುಕಿನ ಹೊನ್ನಾವರ ನಿಲ್ದಾಣದೊಳಗೆ ಬರೀ ಹುಳುಕು!
ಕಾಣದ ಕಾನನಕ್ಕೆ ಹಂಬಲಿಸಿದ ಮನ! ಸಾವಿರಾರು ಸಸಿಗಳನ್ನು ಮಕ್ಕಳಂತೆ ಜೋಪಾನ ಮಾಡಿದ್ದ ತುಳಸಿ ಗೌಡ
Ankola; ವೃಕ್ಷಮಾತೆ ಪದ್ಮಶ್ರೀ ತುಳಸಿ ಗೌಡ ಇನ್ನಿಲ್ಲ
Ankola: ರಕ್ತದೊತ್ತಡ ಕುಸಿದ ಪರಿಣಾಮ ಕಬಡ್ಡಿ ಆಡುವಾಗಲೇ ಕ್ರೀಡಾಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.