ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದ ಅಜ್ಜಿ!- CM ವಿರುದ್ಧ ಎಚ್‌ಡಿಕೆ ಕಿಡಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ಎಚ್‌ಡಿಕೆ ವಾಗ್ಧಾಳಿ
Team Udayavani, Jan 14, 2024, 11:10 PM IST
ಬೆಂಗಳೂರು: ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಬದುಕು ಹಸನು ಮಾಡುತ್ತಿದ್ದೇವೆ ಎಂದು ಹೇಳುತ್ತಿದೆ. ಆದರೆ, ಯೋಜನೆಗಳ ಹಣ ಸಕಾಲದಲ್ಲಿ ಸಿಗಬೇಕಾದ ಜನರಿಗೆ ಸಿಗುತ್ತಿದೆಯೇ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ಈ ಬಗ್ಗೆ ಜಾಲತಾಣ “ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಸಾಶನಕ್ಕಾಗಿ 5 ಕಿ.ಮೀ. ದೂರ ತೆವಳಿಕೊಂಡು ಬಂದಿರುವ ದಾವಣಗೆರೆ ಜಿಲ್ಲೆಯ ಅಜ್ಜಿಯೊಬ್ಬರ ಚಿತ್ರ ಹಂಚಿಕೊಂಡು, ಆ ಅಜ್ಜಿ ನಾಗರಿಕ ಸಮಾಜದ ಆತ್ಮಸಾಕ್ಷಿಯನ್ನೇ ಕಲಕಿದ್ದಾರೆ. ಆ ಅಜ್ಜಿ ಅನುಭವಿಸಿರುವ ಯಾತನೆ ನಾವೆಲ್ಲರೂ ತಲೆತಗ್ಗಿಸುವಂತೆ ಮಾಡಿದೆ. ಸರಕಾರದ ಕ್ಷಮತೆಯನ್ನೂ ಪ್ರಶ್ನಿಸಿದೆ ಎಂದು ಕುಟುಕಿದ್ದಾರೆ.
ಆ ಅಜ್ಜಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕುಣಿಬೆಳಕೆರೆ ಗ್ರಾಮದವರು. ರಸ್ತೆಯ ಬದಿಯಲ್ಲಿ ತೆವಳಿಕೊಂಡು ಸಾಗಿದ ಅಜ್ಜಿಯ ದುಃಸ್ಥಿತಿಯನ್ನು ಕಂಡು ನನಗೆ ತೀವ್ರ ಆಘಾತ ಉಂಟಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ. ಇಂಥ ಅಸಕ್ತರನ್ನು ಸರಕಾರ ನಿರ್ಲಕ್ಷ್ಯ ಮಾಡಬಾರದು. ನಿಯಮಿತವಾಗಿ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಸರಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ, ಸಂತೋಷ. ಆದರೆ ಬಡ, ಅಶಕ್ತ ಮಹಿಳೆಯರಿಗೆ ನೆರವಾಗುವ ವೃದ್ಧಾಪ್ಯ ವೇತನ, ವಿಧವಾ ವೇತನವನ್ನು ನಿಯಮಿತವಾಗಿ ಬಿಡುಗಡೆ ಮಾಡಬೇಕು. ಮಾಸಾಶನಕ್ಕಾಗಿ ಈ ಅಜ್ಜಿ 5 ಕಿ.ಮೀ. ತೆವಳಿಕೊಂಡು ಬಂದ ದೃಶ್ಯಗಳು ಪುನರಾವರ್ತನೆ ಆಗಬಾರದು. ಕೂಡಲೇ ಆ ತಾಯಿಗೆ ಸರಕಾರ ಎಲ್ಲ ಸೌಲಭ್ಯಗಳನ್ನು ಕೂಡಲೇ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.