Udupi Paryaya; ಅನ್ನದಾನ ಮನಃತೃಪ್ತಿಯ ಶ್ರೇಷ್ಠ ದಾನ: ಪುತ್ತಿಗೆ ಶ್ರೀ

ಸ್ವಸಹಾಯ ಸಂಘ, ಸಹಕಾರಿ ಸಂಘದಿಂದ ಹೊರೆ ಕಾಣಿಕೆ ಸಮರ್ಪಣೆ

Team Udayavani, Jan 14, 2024, 11:45 PM IST

UDUdupi Paryaya; ಅನ್ನದಾನ ಮನಃತೃಪ್ತಿಯ ಶ್ರೇಷ್ಠ ದಾನ: ಪುತ್ತಿಗೆ ಶ್ರೀUdupi Paryaya; ಅನ್ನದಾನ ಮನಃತೃಪ್ತಿಯ ಶ್ರೇಷ್ಠ ದಾನ: ಪುತ್ತಿಗೆ ಶ್ರೀ

ಉಡುಪಿ: ನಾವು ಗಳಿಸಿದ ಸಂಪತ್ತಿನಲ್ಲಿ ಒಂದಿಷ್ಟು ಪಾಲು ದೇವರಿಗೂ ಸಮರ್ಪಿಸಿದರೆ, ಭಗವಂತನು ದುಪ್ಪಟ್ಟು ನಮಗೆ ಕರುಣಿಸುತ್ತಾನೆ. ಎಲ್ಲ ದಾನಕ್ಕಿಂತಲೂ ಅನ್ನದಾನ ಮನಃತೃಪ್ತಿಯ ಶ್ರೇಷ್ಠದಾನವಾಗಿದೆ ಎಂದು ಭಾವೀ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದರು.

ಪುತ್ತಿಗೆ ಪರ್ಯಾಯೋತ್ಸವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನವೋದಯ ಸ್ವಸಹಾಯ ಸಂಘ ಮತ್ತು ಉಡುಪಿ ಜಿಲ್ಲಾ ವಿವಿಧ ಸಹಕಾರಿ ಸಂಘಗಳ ವತಿಯಿಂದ ರವಿವಾರ ಹೊರೆ ಕಾಣಿಕೆ ಸಮರ್ಪಣೆಯ ಅನಂತರ ಜರಗಿದ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಈ ಬಾರಿ ಪರ್ಯಾಯದಲ್ಲಿ ಎರಡು ಮಹತ್ವದ ಉದ್ದೇಶ ನಮ್ಮದಾಗಿದ್ದು, ಎರಡು ವರ್ಷ ಭಕ್ತರಿಗೆ ಹೊಟ್ಟೆಗೆ ಸಾತ್ವಿಕ ಅನ್ನ ಪ್ರಸಾದ, ತಲೆಗೆ ಗೀತಾ ಸಂದೇಶ ನಮ್ಮ ಆಶಯವಾಗಿದೆ. ಇದೆರಡೂ ಸಿಕ್ಕರೆ ಪ್ರತಿಯೊಬ್ಬರ ಜೀವನ ಸಾರ್ಥಕವಾಗುತ್ತದೆ. ರವಿವಾರ ದಾಖಲೆ ಪ್ರಮಾಣದಲ್ಲಿ ದೇವರಿಗೆ ಹೊರೆಕಾಣಿಕೆ ಸಲ್ಲಿಕೆಯಾಗಿದೆ ಎಂದರು.

ವಿಶಿಷ್ಟ ರೀತಿಯಲ್ಲಿ ಹೊರೆಕಾಣಿಕೆ ಸಲ್ಲಿಸಿದ ಸಹಕಾರ ಕ್ಷೇತ್ರದ ರಾಜನಾಗಿರುವ ರಾಜೇಂದ್ರ ಕುಮಾರ್‌ ಅವರು ಸಹಕಾರಿ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೇರಿ ಸಾಧನೆ ಮಾಡುವಂತಾಗಲಿ. ಶ್ರೀಕೃಷ್ಣನಿಗೆ ನಾವು ಏನನ್ನೇ ಅರ್ಪಿಸಿದರೂ ದುಪ್ಪಟ್ಟು ರೀತಿಯಲ್ಲಿ ನಮಗೆ ಹಿಂದಿರುಗಿಸುತ್ತಾನೆ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಮತ್ತು ನವೋದಯ ಸ್ವಸಹಾಯ ಸಂಘ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕಮಾರ್‌, ರಾಜೆ ಛತ್ರಪತಿ ಶಿವಾಜಿ ಮಹಾರಾಜ್‌ ಮರಾಠಿ ಗೋಲ್ಡ್‌ ಆ್ಯಂಡ್‌ ಸಿಲ್ವರ್‌ ಅಸೋಸಿಯೇಶನ್‌ನ ಪ್ರಮುಖರಾದ ಪುಂಡಲೀಕ ಪಾಟೀಲ್‌, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೆ. ರಘುಪತಿ ಭಟ್‌, ಪ್ರಮುಖರಾದ ದೇವಿಪ್ರಸಾದ್‌ ಶೆಟ್ಟಿ ಬೆಳಪು, ರಂಜನ್‌ ಕಲ್ಕೂರ, ಸುಪ್ರಸಾದ್‌ ಶೆಟ್ಟಿ, ಶ್ರೀ ಪುತ್ತಿಗೆ ಮಠದ ಪ್ರಸನ್ನ ಆಚಾರ್ಯ, ನಾಗರಾಜ್‌ ಆಚಾರ್ಯ ಉಪಸ್ಥಿತರಿದ್ದರು. ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿ, ಪ್ರಸ್ತಾವನೆಗೈದರು. ಪುತ್ತಿಗೆ ಮಠದ ರಮೇಶ್‌ ಭಟ್‌ ನಿರೂಪಿಸಿದರು.

40 ಲಕ್ಷ ರೂ. ಮೌಲ್ಯದ ಹೊರೆಕಾಣಿಕೆ
ನವೋದಯ ಸ್ವಸಹಾಯ ಸಂಘ ಮತ್ತು ಉಡುಪಿ ಜಿಲ್ಲಾ ವಿವಿಧ ಸಹಕಾರಿ ಸಂಘಗಳ ವತಿಯಿಂದ ಪುತ್ತಿಗೆ ಪರ್ಯಾಯೋತ್ಸವಕ್ಕೆ 40 ಲಕ್ಷ ರೂ. ಮೌಲ್ಯದ ಹೊರೆಕಾಣಿಕೆ ಸಮರ್ಪಿಸಲಾಯಿತು. ನವೋದಯ ಟ್ರಸ್ಟ್‌ ನ ವತಿಯಿಂದ ಡಾ| ಎಂ.ಎನ್‌. ರಾಜೇಂದ್ರ ಕಮಾರ್‌ ಅವರು 5 ಲಕ್ಷ ರೂ. ಚೆಕ್‌ ಅನ್ನು ಪುತ್ತಿಗೆ ಮಠಕ್ಕೆ ಹಸ್ತಾಂತರಿಸಿದರು.

ಪುತ್ತಿಗೆ ಶ್ರೀಗಳು ಇಂದು ಕಾರ್ಕಳಕ್ಕೆ
ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಶಿಷ್ಯರಾದ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರೊಂದಿಗೆ ಸೋಮವಾರ ಸಂಜೆ 4ಕ್ಕೆ ಕಾರ್ಕಳದ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಹಾಗೂ 4.30ಕ್ಕೆ ಕಾರ್ಕಳದ ಪಡು ತಿರುಪತಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಠದ ಪ್ರಕಟನೆ ತಿಳಿಸಿದೆ

ಟಾಪ್ ನ್ಯೂಸ್

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

puttige-5

Udupi:ಗೀತಾರ್ಥ ಚಿಂತನೆ 103: ಪಂಡಿತರೆಂದರೇನು?ಅಥವ ಪಂಡಿತರೆಂದರೆ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.