Hit and run: ಪರಿಹಾರ ಹೆಚ್ಚಳ ಸುಪ್ರೀಂ ಆದೇಶ ಸ್ವಾಗತಾರ್ಹ; ಅನುಷ್ಠಾನಯೋಗ್ಯ


Team Udayavani, Jan 15, 2024, 5:21 AM IST

Supreme Court

ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. ಇತ್ತೀಚೆಗೆ ಕೇಂದ್ರ ಸರಕಾರ ಹೊಸದಾಗಿ ರೂಪಿಸಿದ ಭಾರತೀಯ ನ್ಯಾಯ ಸಂಹಿತಾ ಕಾಯಿದೆಯಲ್ಲಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಶಿಕ್ಷೆಗೀಡಾಗುವ ಚಾಲಕರಿಗೆ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ರೂ.ಗಳ ವರೆಗೆ ದಂಡ ವಿಧಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ಇದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್‌, ಟ್ಯಾಂಕರ್‌ ಚಾಲಕರು ಮುಷ್ಕರ ನಡೆಸಿದ್ದರು. ಈ ಬೆಳವಣಿಗೆಯ ನಡುವೆಯೇ ಈಗ ಸುಪ್ರೀಂ ಕೋರ್ಟ್‌ ಕೇಂದ್ರ ಸರಕಾರಕ್ಕೆ ನೀಡಿರುವ ಈ ನಿರ್ದೇಶನ ಹೆಚ್ಚಿನ ಮಹತ್ವವನ್ನು ಪಡೆದಿದೆ.

ಸದ್ಯ ದೇಶದಲ್ಲಿ ಜಾರಿಯಲ್ಲಿರುವ ಮೋಟಾರು ವಾಹನಗಳ ತಿದ್ದುಪಡಿ ಕಾಯಿದೆ ಅನ್ವಯ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ 2ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರವನ್ನು ನೀಡಲಾಗುತ್ತಿದೆ. ಆದರೆ ಸರಕಾರ ಇಂತಹ ಪ್ರಕರಣಗಳ ಸಂತ್ರಸ್ತರಿಗೆ ನೀಡಲಾ ಗುತ್ತಿರುವ ಪರಿಹಾರ ಮೊತ್ತವನ್ನು ಹೆಚ್ಚಿಸುವ ಸಂಬಂಧ, ಪ್ರತೀ ವರ್ಷ ಪರಿಷ್ಕರಿಸುವ ಬಗೆಗೆ ಗಂಭೀರ ಚಿಂತನೆ ನಡೆಸಬೇಕು ಎಂದು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದೆ.

ಸದ್ಯ ದೇಶದಲ್ಲಿ ದಾಖಲಾಗುತ್ತಿರುವ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನಿಗದಿತ ಪರಿಹಾರ ಮೊತ್ತವೂ ಲಭಿಸುತ್ತಿಲ್ಲ. ಬಹುತೇಕ ಸಂದರ್ಭಗಳಲ್ಲಿ ಅರಿವಿನ ಕೊರತೆಯಿಂದಾಗಿ ಸಂತ್ರಸ್ತ ಕುಟುಂಬಗಳು ಪರಿಹಾರಕ್ಕಾಗಿ ಪ್ರಾಧಿಕಾರಕ್ಕೆ ಅರ್ಜಿಯನ್ನೂ ಸಲ್ಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್‌ ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳ ಸಂದರ್ಭದಲ್ಲಿ ಪೊಲೀಸರೇ ಸ್ವತಃ ಕ್ಲೇಮು ಪ್ರಾಧಿಕಾರಕ್ಕೆ ವಿವರ ಸಲ್ಲಿಸಬೇಕು ಎಂದು ನಿರ್ದೇಶ ನೀಡಿದ್ದು, ಇದರಿಂದ ಸಂತ್ರಸ್ತರಿಗೆ ಕಾನೂನು ರೀತಿಯಲ್ಲಿ ಪರಿಹಾರ ಮೊತ್ತ ಲಭಿಸುವುದು ಖಾತರಿಯಾಗಲಿದೆ.
ಒಂದೆಡೆಯಿಂದ ಹಿಟ್‌ ಆ್ಯಂಡ್‌ ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಕಾನೂನನ್ನು ಬಿಗಿಗೊಳಿಸಿ ಭಾರೀ ಪ್ರಮಾಣದ ದಂಡವನ್ನು ವಿಧಿಸಿ ಹೊಸ ಕಾನೂನನ್ನು ಜಾರಿಗೊಳಿಸಲು ಮುಂದಾದಾಗ ಟ್ರಕ್‌ ಚಾಲಕರು ಪ್ರತಿಭಟನೆ ನಡೆಸಿ ಈ ಕಾನೂನಿನ ಜಾರಿಗೆ ತಡೆ ಒಡ್ಡಿದ್ದರು. ಈಗ ಸುಪ್ರೀಂ ಕೋರ್ಟ್‌ ನೀಡಿರುವ ಈ ಆದೇಶದಿಂದ ಸರಕಾರದ ಹೊಸ ಕಾನೂನಿಗೆ ಮತ್ತಷ್ಟು ಬಲ ಬಂದಂತಾಗಿದ್ದು, ಟ್ರಕ್‌ ಚಾಲಕ ಸಂಘಟನೆಗಳ ಮುಂದಿನ ನಡೆಯ ಕುರಿತಂತೆ ಸಹಜವಾಗಿಯೇ ಕುತೂಹಲ ಮೂಡಿದೆ.

ಸಂತ್ರಸ್ತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಸರಕಾರ ಹೆಚ್ಚಿಸಿದ್ದೇ ಆದಲ್ಲಿ ಆ ಮೊತ್ತವನ್ನು ಸರಕಾರ ಭರಿಸಬೇಕಾಗುತ್ತದೆ. ಇದರಿಂದ ಬೊಕ್ಕಸಕ್ಕೆ ಹೆಚ್ಚಿನ ಹೊರೆ ಬೀಳಲಿದೆ. ಹೀಗಾಗಿ ಕೇಂದ್ರ ಸರಕಾರ ತನ್ನ ಮೇಲೆ ಬೀಳಲಿರುವ ಹೆಚ್ಚುವರಿ ಹೊರೆಯನ್ನು ತಪ್ಪಿತಸ್ಥರ ಹೆಗಲಿಗೆ ವರ್ಗಾಯಿಸಲೇಬೇಕಾದ ಅನಿವಾರ್ಯ ಸೃಷ್ಟಿಯಾಗುತ್ತದೆ. ಹಿಟ್‌ ಆ್ಯಂಡ್‌ ರನ್‌ ಪ್ರಕರಣಗಳ ಸಂತ್ರಸ್ತರಿಗೆ ನ್ಯಾಯಯುತ ಪರಿಹಾರ ದೊರಕಿಸಿಕೊಡುವ ದಿಸೆಯಲ್ಲಿ ಸುಪ್ರೀಂ ಕೋರ್ಟ್‌ನ ಈ ಆದೇಶ ಅತ್ಯಂತ ಪ್ರಾಮುಖ್ಯವನ್ನು ಪಡೆದುಕೊಂಡಿದೆಯಲ್ಲದೆ ತನ್ಮೂಲಕ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವಲ್ಲಿಯೂ ನೆರವಾಗಲಿದೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

ಗ್ರಾಮೀಣ ಬಡಜನರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರಕಾರ

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Jammu-Kashmir ಗಡಿಯಲ್ಲಿ ಉದ್ಧಟತನ: ಪಾಠ ಕಲಿಯದ ಪಾಕ್‌

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

Train ಹಳಿ ತಪ್ಪಿಸುವ ಯತ್ನ: ಉಗ್ರರ ಷಡ್ಯಂತ್ರ ಮಟ್ಟ ಹಾಕಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.