Chitradurga; ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ…: ಆಂಜನೇಯ ಕಿಡಿ
Team Udayavani, Jan 15, 2024, 12:41 PM IST
ಚಿತ್ರದುರ್ಗ: ಅನಂತ ಕುಮಾರ್ ಹೆಗಡೆ ಒಬ್ಬ ಹುಚ್ಚ. ಹುಚ್ಚರ ಬಗ್ಗೆ ಯಾರಾದರೂ ಮಾತನಾಡುತ್ತಾರಾ? ಅವನ ಬಗ್ಗೆ ಮಾತನಾಡುವುದಿಲ್ಲ ಎಂದ ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಅವನ ಬಗ್ಗೆ ಮಾತಾಡಿದರೆ ದೊಡ್ಡವನನ್ನಾಗಿಸಿದಂತೆ ಆಗುತ್ತದೆ. ಅವನು ಬೆಳೆದ ಹಿನ್ನೆಲೆ ಸಂಸ್ಕೃತಿ ಅದೇ ರೀತಿ ಇರಬೇಕು. ಹೀಗಾಗಿ ಅವನು ಆ ರೀತಿ ವರ್ತನೆ ಮಾಡುತ್ತಾನೆ. ನಾವು ಆ ರೀತಿ ಅಲ್ಲ, ನಾನು ಸಹ ಏಕವಚನ ಬಳಸಬಾರದು. ಆದರೆ ಅವನಿಗೆ ಯಾವ ಭಾಷೆ ಬಳಸಿದರೂ ಕೂಡ ಸಾಲದು. ನಮ್ಮ ನಾಡಿನ ದೊರೆ ಮುಖ್ಯಮಂತ್ರಿ ಸಿದ್ಧರಾಮಯ್ಯ. ರಾಮರಾಜ್ಯದ ಕನಸು ಅನಾವರಣ ಮಾಡಿ ಕಾರ್ಯರೂಪಕ್ಕೆ ತಂದವರು. ಜನ ಮೆಚ್ಚಿದ ಸಿದ್ಧರಾಮಯ್ಯ ಬಗ್ಗೆ ಹಗುರವಾಗಿ ಮಾತಾಡ್ತಾನಲ್ಲ, ಅವನು ಮನುಷ್ಯನಾ ಎಂದು ಅನಂತ ಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಹಿಂಧೂ ಧರ್ಮ, ಶ್ರೀರಾಮನ ವಿರೋಧಿ ಎಂಬ ಸಂಸದ ಮುನಿಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಬಹಳಷ್ಟು ಜನ ಹಿಂದೂಗಳಿರುವುದೇ ಕಾಂಗ್ರೆಸ್ ಪಕ್ಷದಲ್ಲಿ. ಹಿಂದೂ ಧರ್ಮ, ರಾಮ ಪೂಜೆ ಮಾಡುವವರು ಹೆಚ್ಚಿರುವುದು ಕಾಂಗ್ರೆಸ್ ಪಕ್ಷದಲ್ಲಿ. ರಾಮನ ಹೆಸರಿನಲ್ಲಿ ಮತಕ್ಕಾಗಿ ಮಾರ್ಕೆಂಟಿಂಗ್ ಮಾಡುವವರು ಕಾಂಗ್ರೆಸ್ಸಿಗರಲ್ಲ ಎಂದರು.
ಕೋಟ್ಯಾಂತರ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮನಿದ್ದಾನೆ. ಆಂಜನೇಯನ ಹೃದಯದಲ್ಲಿ ರಾಮನಿದ್ದಂತೆ ಕಾಂಗ್ರೆಸ್ಸಿಗರ ಹೃದಯದಲ್ಲಿ ರಾಮ. ನಾವು ರಾಮನ ವಿರೋಧಿ ಅಲ್ಲ, ಹಿಂದೂಗಳ ವಿರೋಧಿ ಅಲ್ಲ. ಹಿಂದೂಗಳ ಪರ, ಮುಸ್ಲಿಂರ ಪರ ಎಲ್ಲಾ ಧರ್ಮಗಳ ಜನರ ಪರವಿದ್ದೇವೆ ಎಂದು ಹೆಚ್.ಆಂಜನೇಯ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸರ್ಕಾರದಿಂದ ಜನತೆಗೆ ಆತ್ಮಹತ್ಯೆ ಭಾಗ್ಯ: ಕಾರಜೋಳ
ತೋಟದ ಮನೆಗಳಿಗೆ ಹಗಲು ತ್ರಿಫೇಸ್, ರಾತ್ರಿ ಸಿಂಗಲ್ ಫೇಸ್ ವಿದ್ಯುತ್: ಸಚಿವ ಜಾರ್ಜ್
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್
Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.