Bangalore – Mysore Expressway: ಎಕ್ಸ್‌ಪ್ರೆಸ್‌ ವೇನಲ್ಲಿ ಎಕ್ಸಿಟ್‌ ಟೋಲ್‌ ವ್ಯವಸ್ಥೆ


Team Udayavani, Jan 15, 2024, 2:31 PM IST

Bangalore – Mysore Expressway: ಎಕ್ಸ್‌ಪ್ರೆಸ್‌ ವೇನಲ್ಲಿ ಎಕ್ಸಿಟ್‌ ಟೋಲ್‌ ವ್ಯವಸ್ಥೆ

ರಾಮನಗರ: ಬೆಂಗಳೂರು – ಮೈಸೂರು ಎಕ್ಸ್‌ ಪ್ರಸ್‌ ವೇನಲ್ಲಿ ಇನ್ನು ಮುಂದೆ ಪ್ರಯಾಣಿಕರು ಸಂಚರಿಸಿದ ದೂರಕ್ಕಷ್ಟೇ ಟೋಲ್‌ ಪಾವತಿಸುವ ವ್ಯವಸ್ಥೆ ಜಾರಿಗೆ ತರಲು ಹೆದ್ದಾರಿ ಪ್ರಾಧಿಕಾರ ಮುಂದಾಗಿದ್ದು, ಎಂಟ್ರಿ ಎಕ್ಸಿಟ್‌ಗಳಿಗೆ ಪ್ರತ್ಯೇಕ ಟೋಲ್‌ಬೂತ್‌ ಅಳವಡಿಸಲು ಸಿದ್ಧತೆ ನಡೆಸಿದೆ.

ಇದು ಹೊಸ ಟೋಲ್‌ ನಿಯಮ ಜಾರಿಯಾದರೆ ಪ್ರಯಾಣಿಕರು ರಸ್ತೆಯಲ್ಲಿ ಪ್ರಯಾಣಿಸಿದಷ್ಟು ದೂರ ಮಾತ್ರ ಟೋಲ್‌ ಶುಲ್ಕ ಪಾವತಿಸಬಹುದು. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸುರಕ್ಷತಾ ಕಾಮಗಾರಿಗಳನ್ನು ಕೈಗೊಳ್ಳಲು ಎನ್‌ ಎಚ್‌ಎಐ 688 ಕೋಟಿ ರೂ.ನಲ್ಲಿ, ವಿವಿಧ ಕಾಮಗಾರಿಗಳಿಗೆ ಟೆಂಡರ್‌ ಕರೆದಿದೆ. ಎಂಟ್ರಿ ಎಕ್ಸಿಟ್‌ಗಳನ್ನು ಕ್ಲೋಸ್ಡ್ ಟೋಲ್‌ಗ‌ಳಾಗಿ ಪರಿವರ್ತಿಸುವ ಕಾಮಗಾರಿಯೂ ಈ ಟೆಂಡರ್‌ ನಲ್ಲಿ ಒಳಗೊಂಡಿದೆ ಎಂದು ಎನ್‌ಎಚ್‌ಎಐ ಮೂಲಗಳು ತಿಳಿಸಿವೆ. ಇದು ಜಾರಿಯಾದ್ರೆ ಸ್ವಲ್ಪ ದೂರ ಪ್ರಯಾಣಿಸಿದರೂ ಪೂರ್ಣ ಟೋಲ್‌ ಪಾವತಿಸುವುದು ತಪ್ಪಲಿದೆ.

ಎಡವಟ್ಟು ಸರಿಪಡಿಸಲು ಮುಂದಾದ ಎನ್‌ ಎಚ್‌ಎಐ: ಬೆಂಗಳೂರು-ಮೈಸೂರು ನಡುವಿನ ದಶಪಥ ರಸ್ತೆಯ ಪೈಕಿ 6 ಪಥಗಳ ಆ್ಯಕ್ಸೆಸ್‌ ಕಂಟ್ರೋಲ್‌ ಹೈವೇ ನೀಲನಕ್ಷೆ ತಯಾರಿಸುವ ಸಮಯದಲ್ಲಿ ಎನ್‌ಎಚ್‌ಎಐ ಅಧಿಕಾರಿಗಳು ರಸ್ತೆ ಹಾದು ಹೋಗುವ ಪ್ರಮುಖ ನಗರಗಳಿಗೆ ಎಂಟ್ರಿ ಮತ್ತು ಎಕ್ಸಿಟ್‌ ಪಾಯಿಂಟ್‌ಗಳನ್ನು ಗುರುತಿಸಿಲ್ಲ. ಪ್ರಮುಖ ಪಟ್ಟಣಗಳಿಗೆ ತಾತ್ಕಾಲಿಕ ಎಂಟ್ರಿ, ಎಕ್ಸಿಟ್‌ ನಿರ್ಮಿಸಿದ್ದರೂ ಅವೈಜ್ಞಾನಿಕವಾಗಿದೆ. ಇದರಿಂದ ಸಾಕಷ್ಟು ಅಪಘಾತಗಳು ಆಗುತ್ತಿವೆ. ಇದರಿಂದಾಗಿ ಹೊಸದಾಗಿ ಎಂಟ್ರಿ ಮತ್ತು ಎಕ್ಸಿಟ್‌ಗಳನ್ನು ನಿರ್ಮಾಣ ಮಾಡುವ ಕಾಮಗಾರಿ ಕೈಗೊಳ್ಳಲಿದೆ.

ವರ್ತುಲ ಆಕಾರದ ಎಂಟ್ರಿ, ಎಕ್ಸಿಟ್‌ ನಿರ್ಮಾಣ: ಎನ್‌ಎಚ್‌ಎಐನಲ್ಲಿ ಎಂಟ್ರಿ ಮತ್ತು ಎಕ್ಸಿಟ್‌ಅನ್ನು ಇದೀಗ ನೀಡಿರುವಂತೆ ನೇರವಾಗಿ ನೀಡಲು ಸಾಧ್ಯವಿಲ್ಲ. ಐಆರ್‌ಸಿ(ಇಂಡಿಯನ್‌ ರೋಡ್‌ ಕಾಂಗ್ರೆಸ್‌) ನಿಯಮಾವಳಿಯ ಪ್ರಕಾರ ಆ್ಯಕ್ಸೆಸ್‌ ಕಂಟ್ರೋಲ್‌ ಹೈವೇಗೆ ಎಂಟ್ರಿ ಪಡೆಯುವ ವಾಹನಗಳು ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿರುವ ವಾಹನಗಳಿಗೆ ಅಡಚಣೆ ಆಗಬಾರದು. ಸುರಕ್ಷಿತವಾಗಿ ಹೆದ್ದಾರಿಗೆ ಎಂಟ್ರಿ ಪಡೆಯಬೇಕು. ಇದಕ್ಕೆ ವರ್ತುಲ ಆಕಾರದ ಎಂಟ್ರಿ ಮತ್ತು ಎಕ್ಸಿಟ್‌ಗಳನ್ನು ನಿರ್ಮಿಸಬೇಕು. ಇದಕ್ಕೆ ಹೊಸ ಕಾಮಗಾರಿಯನ್ನು ಆರಂಭಿಸುವ ಜೊತೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನೂ ಕೈಗೊಳ್ಳಬೇಕಿದೆ. ಇದಕ್ಕಾಗಿ ಎನ್‌ಎಚ್‌ಎಐ ನೀಲನಕ್ಷೆ ಸಿದ್ಧಪಡಿಸಿದೆ. ಕಾಮಗಾರಿಗೆ ಇದೀಗ ಟೆಂಡರ್‌ ಕರೆಯವಾಗಿದೆ.

ನೈಸ್‌ ಜಂಕ್ಷನ್‌, ಮೈಸೂರಿನ ಮಣಿಪಾಲ್‌ ವೃತ್ತ ಅಗಲೀಕರಣ: ಬೆಂ-ಮೈ ಎಕ್ಸ್‌ಪ್ರೆಸ್‌ ಹೈವೇನಲ್ಲಿ 118 ಕಿ.ಮೀ. ದೂರ 90 ನಿಮಿಷಗಳಲ್ಲಿ ಕ್ರಮಿಸುವ ವಾಹನಗಳು, ಬೆಂಗಳೂರು ನೈಸ್‌ರಸ್ತೆ ಜಂಕ್ಷನ್‌ ಹಾಗೂ ಮೈಸೂರಿನ ಮಣಿಪಾಲ್‌ ಆಸ್ಪತ್ರೆ ವೃತ್ತದಲ್ಲಿ ಗಂಟೆಗಟ್ಟಲೆ ಕಾಯಬೇಕಾ ಗುತ್ತದೆ. ಇದಕ್ಕೆ ಕಾರಣ ರಸ್ತೆ ಕಿರಿದಾಗಿರುವುದು. ಹೀಗಾಗಿ ನೂತನ ಕಾಮಗಾರಿಯಲ್ಲಿ ಎರಡೂ ಕಡೆ ರಸ್ತೆ ಅಗಲೀಕರಣ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ.

ಭೂ ಸ್ವಾಧೀನಕ್ಕೆ 500 ಕೋಟಿ ರೂ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ ವೇನ ಎಂಟ್ರಿ ಎಕ್ಸಿಟ್‌ಗಳ ಬಳಿಕ ಟೋಲ್‌ಪ್ಲಾಜಾ ನಿರ್ಮಾಣ ಹಾಗೂ ರಸ್ತೆ ಅಗಲೀಕರಣಕ್ಕೆ ಬೇಕಿರುವ ಅಗತ್ಯವಿರುವ ಭೂಮಿ ಗುರುತಿಸಿ ನೀಲನಕ್ಷೆ ಸಿದ್ಧಪಡಿಸಿರುವ ಎನ್‌ಎಚ್‌ಎಐ 500 ಕೋಟಿ ರೂ. ಹಣ ನಿಗದಿಪಡಿಸಿದೆ.

ಹೊಸ ಟೋಲ್‌ ವ್ಯವಸ್ಥೆ ಹೇಗಿರುತ್ತದೆ? : ರಾಷ್ಟ್ರೀಯ ಹೆದ್ದಾರಿ 275 ಬೆಂಗಳೂರಿನಿಂದ ಮೈಸೂರು ವರೆಗೆ 118 ಕಿ.ಮೀ. ನಷ್ಟು 6 ಪಥಗಳ ಎಕ್ಸ್‌ಪ್ರೆಸ್‌ ವೇಗೆ ಟೋಲ್‌ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಪಂಚಮುಖೀ ಗಣಪತಿ ದೇವಾಲಯದಿಂದ ನಿಡಘಟ್ಟ ವರೆಗೆ ಮೊದಲ ಹಂತದ ಎಕ್ಸ್‌ಪ್ರೆಸ್‌ ವೇ 56 ಕಿ.ಮೀ. ದೂರ ಇದ್ದು, ಈ ರಸ್ತೆಗೆ ವಾಹನದ ಮಾದರಿಯನ್ನು ಆಧರಿಸಿ 165 ರೂ. ನಿಂದ 1,080 ರೂ. ವರೆಗೆ ಶುಲ್ಕ ಸಂಗ್ರಹಿಸಲಾಗುತ್ತಿದೆ. ಬೆಂಗಳೂರಿನಿಂದ ಮೈಸೂರು ಕಡೆ ಹೋಗುವವರು ಕಣ್ಮಿಣಕಿ ಬಳಿ, ಬೆಂಗಳೂರಿಗೆ ಹೋಗುವವರು ಬಿಡದಿಯ ಶೇಷಗಿರಿ ಹಳ್ಳಿ ಬಳಿ ಟೋಲ್‌ಶುಲ್ಕ ಪಾವತಿಸಬೇಕು. ಬೆಂಗಳೂರಿನಿಂದ ಹೊರಟವರು, ಬಿಡದಿಗೆ ಹೋಗಲಿ, ನಿಡಘಟ್ಟ ವರೆಗೆ ಪ್ರಯಾಣಿಸಲಿ 165 ರೂ. ನಿಂದ 1,080 ರೂ. ವರೆಗೆ ಶುಲ್ಕವನ್ನು ಪಾವತಿಸಬೇಕು.

ಇನ್ನು ನಿಡಘಟ್ಟದಿಂದ ಮೈಸೂರು ವರೆಗೆ 62 ಕಿ.ಮೀ.ಉದ್ದ ರಸ್ತೆ ಇದ್ದು ಇಲ್ಲಿಗೆ ಶ್ರೀರಂಗಪಟ್ಟಣದ ಗಣಂಗೂರು ಬಳಿ ಟೋಲ್‌ ಪ್ಲಾಜಾದಲ್ಲಿ ಟೋಲ್‌ ಶುಲ್ಕವನ್ನು ಪಾವತಿಸಬೇಕಿದೆ. ಇಲ್ಲಿ ಟೋಲ್‌ ಶುಲ್ಕ 155 ರೂ. ನಿಂದ 1005 ರೂ.ವರೆಗೆ ಇದೆ. ಈಗ ಹೊಸದಾಗಿ ಎಂಟ್ರಿ ಎಕ್ಸಿಟ್‌ಗಳಲ್ಲಿ ಟೋಲ್‌ ಬೂತ್‌ಗಳನ್ನು ಅಳವಡಿಸುವುದ ರಿಂದ ಪ್ರಯಾಣಿಕರು ಯಾವ ಟೋಲ್‌ನಿಂದ ಯಾವ ಟೋಲ್‌ಗೆ ಸಂಚರಿಸುತ್ತಾರೋ ಅಷ್ಟು ಮಾತ್ರ ಹಣ ಪಾವತಿ ಮಾಡಬೇಕು. ಫಾಸ್ಟ್‌ ಟ್ಯಾಗ್‌ ಮೂಲಕ ಟೋಲ್‌ ಬಳಿ ಸ್ಕ್ಯಾನ್‌ ಆಗಿ, ಸಂಚರಿಸಿದಷ್ಟು ದೂರಕ್ಕೆ ಮಾತ್ರ ಶುಲ್ಕ ಕಡಿತವಾಗುತ್ತದೆ. ಇನ್ನು ಫಾಸ್ಟ್‌ ಟ್ಯಾಗ್‌ ಇಲ್ಲದ ವಾಹನಗಳು ಟೋಲ್‌ ಪ್ಲಾಜಾದಲ್ಲಿ ಎಂಟ್ರಿ ಪಡೆಯುವಾಗಲೇ ಶುಲ್ಕ ಪಾವತಿ ಮಾಡಿ ಪ್ರವೇಶಿಸಬೇಕಾಗುತ್ತದೆ.

ಮಾರ್ಚ್‌ ವೇಳೆಗೆ ಕಾಮಗಾರಿ ಆರಂಭ : ಎನ್‌ಎಚ್‌ಎಐ ಹೊಸ ಕಾಮಗಾರಿ ಗಳಿಗೆ ಕರೆದಿರುವ ಟೆಂಡರ್‌ ಫೆ.19ಕ್ಕೆ ಕೊನೆಗೊಳ್ಳಲಿದೆ. ಟೆಂಡರ್‌ ಪ್ರಕ್ರಿಯೆ ಮುಗಿದ ಬಳಿಕ 6 ತಿಂಗಳೊಳಗೆ ಕಾಮಗಾರಿ ಆರಂಭವಾಗಿ ಪೂರ್ಣಗೊಳ್ಳಲಿದೆ ಎಂದು ಎನ್‌ ಎಚ್‌ಎಐ ಮೂಲಗಳ ತಿಳಿಸಿವೆ.

ಎನ್‌ಎಚ್‌-275ರಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳಿವು :

 ನೈಸ್‌ ರಸ್ತೆ ಜಂಕ್ಷನ್‌ ಸಮೀಪ ಪಂಚಮುಖೀ ಗಣಪತಿ ದೇಗುಲದಿಂದ, ಎಲಿವೇಟೆಡ್‌ ರಸ್ತೆವರೆಗಿನ ರಸ್ತೆ ಅಗಲೀಕರಣ, ಮೈಸೂರಿನ ಮಣಿಪಾಲ್‌ ಆಸ್ಪತ್ರೆ ವೃತ್ತದಲ್ಲಿ ರಸ್ತೆ ಅಭಿವೃದ್ಧಿ.

 ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣ ನಗರಗಳ ಎಂಟ್ರಿ ಮತ್ತು ಎಕ್ಸಿಟ್‌ಗಳನ್ನು ಓಪನ್‌ನಿಂದ ಕ್ಲೋಸ್ಡ್ ಟೋಲ್‌ ಆಗಿ ಪರಿವರ್ತನೆ

 ಡಿವೈಡರ್‌ ಹಾರಿ ಮತ್ತೂಂದು ಬದಿಯ ವಾಹನಕ್ಕೆ ಡಿಕ್ಕಿ ಹೊಡೆಯು ವುದನ್ನು ತಪ್ಪಿಸಲು ಮೆಟಲ್‌ ಬೀಮ್‌ ಅಳವಡಿಕೆ, ಅಗತ್ಯವಿರುವ ಕಡೆ ವಿದ್ಯುತ್‌ ದೀಪ ಅಳವಡಿಕೆ

 ಶಿಂಷಾನದಿ ಬಳಿ ನನೆಗುದಿಗೆ ಬಿದ್ದಿರುವ ಸರ್ವೀಸ್‌ ರಸ್ತೆ ನಿರ್ಮಾಣ, ಬಸ್‌ ಬೇ ಮತ್ತು ಶೆಲ್ಟರ್‌ಗಳು ಸೇರಿದಂತೆ ಮೂಲ ಸೌಕರ್ಯಗಳ ಅಭಿವೃದ್ಧಿ, ಕೆಲವೆಡೆ ರೈಲ್ವೆ ಓವರ್‌ ಬ್ರಿಡ್ಜ್ ನಿರ್ಮಾಣ

 ತುರ್ತು ನಿರ್ಗಮನಕ್ಕೆ ಅಗತ್ಯವಿರುವ ಕಡೆ ಸ್ಲೈಡಿಂಗ್‌ ಗೇಟ್‌ಗಳ ನಿರ್ಮಾಣ

ರಸ್ತೆ ಅವ್ಯವಸ್ಥೆ ಬಗ್ಗೆ ಸಾಕಷ್ಟು ದೂರು ಬಂದಿವೆ. ಅಗತ್ಯ ಕಾಮಗಾರಿಗಳಿಗೆ ಸರ್ಕಾರ 688 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಭೂಸ್ವಾಧೀನಕ್ಕೂ 500 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಎಂಟ್ರಿ ಮತ್ತು ಎಕ್ಸಿಟ್‌ ಪಾಯಿಂಟ್‌ಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಕಡಿಮೆ ದೂರು ಪ್ರಯಾಣಿಸುವ ಪ್ರಯಾಣಿಕರು ಹೆಚ್ಚು ಶುಲ್ಕ ಪಾವತಿಸುವುದು ತಪ್ಪಲಿದೆ. -ಡಿ.ಕೆ.ಸುರೇಶ್‌, ಸಂಸದ.

ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Ramanagar: ನೀರಿಲ್ಲದೇ ಜಿಲ್ಲೆಯ ಕೆರೆಗಳು ಖಾಲಿ ಖಾಲಿ!

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.