Deep Fake; ತಮ್ಮದೇ ವೀಡಿಯೋ ನೋಡಿ ಸಚಿನ್ ತೆಂಡುಲ್ಕರ್ ದಿಗ್ಭ್ರಮೆ!
Team Udayavani, Jan 16, 2024, 6:15 AM IST
ಹೊಸದಿಲ್ಲಿ: ಕ್ರಿಕೆಟ್ ದೇವರೆಂದೇ ಖ್ಯಾತಿ ಪಡೆದಿರುವ ಸಚಿನ್ ತೆಂಡು ಲ್ಕರ್ ಅವರ ಡೀಪ್ಫೇಕ್ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಚಿನ್ ಆತಂಕ ವ್ಯಕ್ತಪಡಿಸಿ ದ್ದಾರೆ. ಆನ್ಲೈನ್ ಗೇಮಿಂಗ್ ಆ್ಯಪ್ವೊಂದನ್ನು ಸಚಿನ್ ಅವರು ಪ್ರಚುರ ಪಡಿಸುತ್ತಿರುವಂತೆ ನಕಲಿ ವೀಡಿಯೋ ಸೃಷ್ಟಿಸಿ ಹರಿಬಿಡಲಾಗಿದೆ.
ಇದು ಗಮನಕ್ಕೆ ಬರುತ್ತಿದ್ದಂತೆಯೇ ಈ ಕುರಿತು ಎಕ್ಸ್ನಲ್ಲಿ ಕಳವಳ ವ್ಯಕ್ತಪಡಿಸಿ, ವೀಡಿಯೋಸಂದೇಶ ನೀಡಿರುವ ಸಚಿನ್ ತೆಂಡುಲ್ಕರ್, ಈ ವೀಡಿಯೋನಕಲಿ. ತಂತ್ರಜ್ಞಾನದ ದುರ್ಬಳಕೆ ಆಗುತ್ತಿರು ವುದನ್ನು ನೋಡಿದರೆ ತುಂಬಾ ಬೇಸರವಾಗುತ್ತದೆ. ಸಾಮಾಜಿಕ ಮಾಧ್ಯಮ ವೇದಿಕೆಗಳು ದೂರುಗಳು ಹಾಗೂ ಎಚ್ಚರಿಕೆಗಳಿಗೆ ಸ್ಪಂದಿಸುವ ಅಗತ್ಯವಿದೆ. ಡೀಪ್ಫೇಕ್ ಹಾಗೂ ತಪ್ಪು ಮಾಹಿತಿ ಹರಡುವಿಕೆಯನ್ನು ತಡೆಯಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ. ಆನ್ಲೈನ್ ಗೇಮಿಂಗ್ ಆ್ಯಪ್ ಅರ್ಹತೆ ಬಗ್ಗೆ ತೆಂಡುಲ್ಕರ್ ಮಾತನಾಡುವುದನ್ನು ವೀಡಿಯೋ ತೋರಿಸುತ್ತದೆ. ಇದರಿಂದ ತುಂಬಾ ಸುಲಭವಾಗಿ ಹಣ ಸಂಪಾದಿಸಬಹುದು. ನನ್ನ ಮಗಳೂ ಇದನ್ನು ಬಳಸುತ್ತಿದ್ದಾಳೆ ಎಂದು ನನಗೆ ತಿಳಿದಿರಲಿಲ್ಲ ಎಂದು ಸಚಿನ್ ಹೇಳುವಂತೆ ನಕಲಿ ವೀಡಿಯೋಸೃಷ್ಟಿಸಲಾಗಿದೆ. ಸಚಿನ್ ಅವರ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್, ಮಾಹಿತಿ ಹಾಗೂ ತಂತ್ರಜ್ಞಾನ ಕಾಯ್ದೆಯಡಿಯಲ್ಲಿ ಕಠಿನ ನಿಯಮ ರೂಪಿಸಲು ಕೇಂದ್ರ ಸರಕಾರ ಚಿಂತನೆ ನಡೆಸುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.