Road mishap: ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು, ಮರಕ್ಕೆ ಡಿಕ್ಕಿ ಹೊಡೆದು ಟೆಕಿ ಸಾವು
Team Udayavani, Jan 16, 2024, 12:08 PM IST
ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ರಸ್ತೆಬದಿ ನಿಲುಗಡೆ ಮಾಡಿದ್ದ ಮತ್ತೂಂದು ಕಾರಿಗೆ ಡಿಕ್ಕಿ ಹೊಡೆದು, ಮರಕ್ಕೆ ಗುದ್ದಿದ್ದೂ ಅಲ್ಲದೆ, ಮನೆಯೊಂದರ ಗೇಟ್ಗೆ ಡಿಕ್ಕಿಯಾಗಿ ಟೆಕಿ ಮೃತಪಟ್ಟಿರುವ ಘಟನೆ ಬಾಣಸವಾಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಹೊರಮಾವು ನಿವಾಸಿ ಮೆಲ್ವಿನ್ ಜೋಸ್ವಾ (25) ಮೃತ ಚಾಲಕ. ಈತನ ಸ್ನೇಹಿತೆ ಆಡಿಲಿನ್ ಸಣ್ಣ-ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯ ದಿಂದ ಪಾರಾಗಿದ್ದಾರೆ. ಸೋಮವಾರ ರಾತ್ರಿ 2 ಗಂಟೆಗೆ ಹೆಣ್ಣೂರು ರಸ್ತೆ ಕಡೆಯಿಂದ ಹೊರಮಾವು ಕಡೆಗೆ ಬರುವಾಗ ಸಿಎಂಆರ್ ರಸ್ತೆಯಲ್ಲಿ ಅಪಘಾತ ನಡೆದಿದೆ.
ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೆಲ್ವಿನ್ ಜೋಸ್ವಾ, ಭಾನುವಾರ ರಾತ್ರಿ ಹೆಣ್ಣೂರು ರಸ್ತೆಯಲ್ಲಿ ಸಂಬಂಧಿಕರೊಬ್ಬರ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಕಾರ್ಯಕ್ರಮ ಮುಗಿಸಿಕೊಂಡು ಸ್ನೇಹಿತೆ ಆಡಿಲಿನ್ ಜತೆ ಕಾರಿನಲ್ಲಿ ಹೊರಮಾವಿನಲ್ಲಿರುವ ಮನೆಗೆ ಬರುತ್ತಿದ್ದ. ಸಿಎಂಆರ್ ರಸ್ತೆಯಲ್ಲಿ ಬರುವಾಗ ಅತಿವೇಗವಾಗಿ ಕಾರು ಚಾಲನೆ ಮಾಡಿದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಲುಗಡೆ ಮಾಡಿದ ಕಾರೊಂದಕ್ಕೆ ಡಿಕ್ಕಿಯಾಗಿ ಬಳಿಕ ಮರಕ್ಕೆ ಗುದ್ದಿ ಸಮೀಪದ ಮನೆಯೊಂದರ ಗೇಟ್ಗೆ ಡಿಕ್ಕಿಯಾಗಿ ನಿಂತಿದೆ.
ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಮೆಲ್ವಿನ್ ಜೋಸ್ವಾರನ್ನು ಸ್ಥಳೀಯರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದ ಪರಿಣಾಮ ಚಿಕಿತ್ಸೆ ಫಲಿಸದೆ ಆತ ಮೃತಪಟ್ಟಿದ್ದಾನೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಆತನ ಸ್ನೇಹಿತೆ ಆಡಿಲಿನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು.
ಬೈಕ್ ಅಪಘಾತದಲ್ಲಿ ಒಂದು ಕೈ ಕಳೆದುಕೊಂಡಿದ್ದ ಟೆಕಿ! :
ಕೆಲ ವರ್ಷಗಳ ಹಿಂದೆ ಬೈಕ್ನಲ್ಲಿ ಹೋಗುವಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೆಲ್ವಿನ್ ಕೈಗೆ ಗಂಭೀರ ಪೆಟ್ಟು ಬಿದ್ದು ಸ್ವಾಧೀನ ಕಳೆದುಕೊಂಡಿದ್ದ. ರಾತ್ರಿ ಕಾರನ್ನು ಒಂದೇ ಕೈಯಲ್ಲಿ ವೇಗವಾಗಿ ಓಡಾಡಿಸಿಕೊಂಡು ಬರುವಾಗ ನಿಯಂತ್ರಿಸಲು ಸಾಧ್ಯವಾಗದೆ ಅಪಘಾತ ಎಸಗಿರುವ ಸಾಧ್ಯತೆಯಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಬಾಣಸವಾಡಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.