Vijayapura; ಕಳಪೆ ಗುಣಮಟ್ಟದ ಸ್ಪಿಂಕ್ಲರ್ ಪೈಪ್ ವಿತರಣೆ ಆರೋಪ: ರೈತರ ಪ್ರತಿಭಟನೆ


Team Udayavani, Jan 16, 2024, 3:11 PM IST

Vijayapura; ಕಳಪೆ ಗುಣಮಟ್ಟದ ಸ್ಪಿಂಕ್ಲರ್ ಪೈಪ್ ವಿತರಣೆ ಆರೋಪ: ರೈತರ ಪ್ರತಿಭಟನೆ

ವಿಜಯಪುರ: ಸರ್ಕಾರದಿಂದ ಕೃಷಿ, ತೋಟಗಾರಿಕೆ ಇಲಾಖೆ ಮೂಲಕ ರೈತರಿಗೆ ರಿಯಾಯಿತಿ ದರದಲ್ಲಿ ವಿತರಿಸುವ ಸ್ಪಿಂಕ್ಲರ್ ಪೈಪ್ ಕಳಪೆ ಗುಣಮಟ್ಟದಿಂದ ಕೂಡಿದೆ. ರೈತರನ್ನು ವಂಚಿಸಿ, ಸರ್ಕಾರಕ್ಕೆ ಮೋಸ ಮಾಡುತ್ತಿರುವ ಅವ್ಯವಹಾರದ ಸಮಗ್ರ ತನಿಖೆ ನಡೆಸುವಂತೆ ರೈತರು ಆಗ್ರಹಿಸಿದ್ದಾರೆ.

ಮಂಗಳವಾರ ನಗರದಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕಳಪೆ ಗುಣಮಟ್ಟದ ಸ್ಪಿಂಕ್ಲರ್ ಪೈಪ್ ಪ್ರದರ್ಶಿಸಿದ ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ವಿಠ್ಠಲ ಬಿರಾದಾರ, ಸರ್ಕಾರದ ಇಲಾಖೆ ಮೂಲಕವೇ ರೈತರಿಗೆ ಕಳಪೆ ಗುಣಮಟ್ಟದ ಸ್ಪ್ರಿಂಕ್ಲರ್ ಪೈಪ್‍ ವಿತರಿಸಿದ್ದಾರೆ. ಇದರ ವಿರುದ್ಧ 2023 ಜುಲೈ ತಿಂಗಳಲ್ಲಿ ಹೋರಾಟ ನಡೆಸಿ, ತನಿಖೆಗೆ ಆಗ್ರಹಿಸಿದರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ದೂರು ನೀಡಿದರೂ ಕೃಷಿ ಇಲಾಖೆಯಿಂದ ರಿಯಾಯಿತಿ ದರದಲ್ಲಿ ರೈತರಿಗೆ ಪೂರೈಸಿದ ತುಂತುರು ಹನಿ ನೀರಾವರಿ (ಸ್ಪ್ರಿಂಕ್ಲರ್ ಪೈಪ್‍ಗಳು) ಸಂಪೂರ್ಣ ಕಳಪೆ ಮಟ್ಟದಿಂದ ಕೂಡಿದೆ.  ಸ್ಪ್ರಿಂಕ್ಲರ್ ಪೈಪ್ ತಯಾರಿಸಿ, ಪೂರೈಸಿದ ಕಂಪನಿಯ ನೋಂದಣಿ ರದ್ದು ಮಾಡುವ, ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿಲ್ಲ ಎಂದು ಕಿಡಿ ಕಾರಿದರು.

ಕೇಂದ್ರ-ರಾಜ್ಯ ಸರ್ಕಾರಗಳ ಶೇ. 90 ರಿಯಾಯಿತಿ ದರದ ಅನುದಾನದಲ್ಲಿ ರೈತರಿಗೆ  ಸ್ಪ್ರಿಂಕ್ಲರ್ ಪೈಪ್ ವಿತರಿಸಲಾಗಿದೆ. ಆದರೆ ಪೂರೈಸಿದ ಸ್ಪ್ರಿಂಕ್ಲರ್ ಪೈಪ್‍ಗಳು ಸಂಪೂರ್ಣ ಕಳಪೆ ಮಟ್ಟದ ಕಚ್ಚಾ ವಸ್ತು ಬಳಸಿ ತಯಾರಿಸಲಾಗಿದೆ. ಈ ಅವ್ಯವಹಾರದ ತನಿಖೆಗೆ ಆಗ್ರಹಿಸಿ ದಿ.7-7-2023 ರಂದು ಜಿಲ್ಲಾಡಳಿತದ ಆವರಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಸಮಗ್ರ ತನಿಖೆಗೆ ಆಗ್ರಹಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದರೂ ತನಿಖೆ ನಡೆಸಿಲ್ಲ ಎಂದು ದೂರಿದರು.

ಸರ್ಕಾರದ ಹಣ ಪಡೆದು ರೈತರಿಗೆ ಕಳಪೆ ಗುಣಮಟ್ಟದ ಸಾಮಗ್ರಿ ಪೂರೈಸಿರುವ ಕಂಪನಿ ವಿರುದ್ಧ ಕ್ತಮ ಕೈಗೊಳ್ಳದ ಸರ್ಕಾರದ ಧೋರಣೆ ಅವ್ಯವಹಾರ ನಡೆಸಿದ ಕಂಪನಿ ಕೊತೆ ಶ್ಯಾಮೀಲಾಗಿದೆ ಎಂಬ ಅನುಮಾನ ಮೂಡಿಸುತ್ತಿದೆ ಎಂದು ಆರೋಪಿಸಿದರು.

ಈ‌ ಕುರಿತು ದಾಖಲೆ ಸಮೇತ ಲೋಕಾಯುಕ್ತರಿಗೂ ದೂರು ನೀಡಲಾಗಿದ್ದು, ತನಿಖೆ ಆರಂಭಗೊಂಡಿಲ್ಲ ಎಂದರು.

ಸರ್ಕಾರದ ಯೋಜನೆ ಅನುಷ್ಠಾನದಲ್ಲಿ ರೈತರಿಗೆ ಮೋಸ ಮಾಡಿರುವ ನೋಂದಾಯಿತ ಕಂಪನಿಗಳ ಮೇಲೆ ಕ್ರಮ ಕೈಗೊಂಡಿಲ್ಲ. ಕಾಗದದ ದಾಖಲೆಗಳಿಗಿಂತ ಕಳಪೆ ಗುಣಮಟ್ಟದ ಸ್ಪ್ರಿಂಕ್ಲರ್ ಪೈಪುಗಳೇ ಕಣ್ಣೆದುರಿಗೆ ಸಾಕ್ಷಿ ಇದ್ದು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ವರ್ಷಪೂರ್ತಿ ಸ್ಪಿಂಕ್ಲರ್ ಪೈಪ್ ಪೂರೈಕೆಗೆ ಅವಕಾಶ ಇದ್ದರೂ ಕೇವಲ ಮೂರು ತಿಂಗಳು ಮಾತ್ರ ವಿತರಿಸಲಾಗುತ್ತದೆ. ಒಬ್ಬ ರೈತನಿಗೆ ಒಂದುಬಾರಿ ಸ್ಪಿಂಕ್ಲರ್ ಪೈಪ್ ಸೌಲಭ್ಯ ನೀಡಿದ ಬಳಿಕ ಮತ್ತೆ 7 ವರ್ಷಗಳ ವರೆಗೆ ಪೈಪ್ ಸೌಲಭ್ಯ ಸಿಗುವುದಿಲ್ಲ. ಒಂದೆಡೆ ರೈತರಿಗೆ ಅನ್ಯಾಯವಾಗುತ್ತಿದ್ದು, ತೊಂದರೆ ಅನುಭವಿಸುವಂತಾಗಿದೆ. ರಿಯಾಯಿತಿ ಹಣ ನೀಡುವ ಕಾರಣ ಸರ್ಕಾರಕ್ಕೂ ಆರ್ಥಿಕ ವಂಚನೆ ಆಗಿದೆ ಎಂದು ದೂರಿದರು.

ಕಳಪೆ ಮಟ್ಟದ ಸ್ಪಿಂಕ್ಲರ್ ಪೈಪ್ ತಯಾರಿಸಿ ರೈತರು, ಸರ್ಕಾರವನ್ನು ವಂಚಿಸಿದ ನೋಂದಾಯಿತ ಕಂಪನಿಗಳ ವಿರುದ್ಧ ಕೂಡಲೇ ಸರ್ಕಾರ ಹಾಗೂ ಲೋಕಾಯುಕ್ತರು ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಕಳಪೆ ಗುಣಮಟ್ಟದ ಸಾಮಗ್ರಿ ಪೂರೈಸಿದ ಕಂಪನಿಯ ನೋಂದಣಿ ರದ್ದುಪಡಿಸಬೇಕು ಎಂದು ಆಗ್ರಹಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ ಇತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

BGT: Another shock for Team India; After Virat and Rahul, another batsman is injured

BGT: ಟೀಂ ಇಂಡಿಯಾಗೆ ಮತ್ತೆ ಆಘಾತ; ವಿರಾಟ್‌, ರಾಹುಲ್‌ ಬಳಿಕ ಮತ್ತೊಬ್ಬ ಬ್ಯಾಟರ್‌ ಗೆ ಗಾಯ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

18-muddebihal

Muddebihal: ಕಬ್ಬು ತುಂಬಿದ್ದ ಟ್ರ್ಯಾಕ್ಟರ್ – ಟ್ರ್ಯಾಲಿ ಉರುಳಿ ಬೈಕ್ ಸವಾರ ಮೃತ್ಯು

6-muddebihala

Muddebihal: ಆಟೋ ಪಲ್ಟಿ: ಕೂಲಿ ಕಾರ್ಮಿಕ ಮಹಿಳೆ ಮೃತ್ಯು

2-muddebihala

Muddebihal: ಟ್ರ್ಯಾಕ್ಟರ್-ಟ್ರೇಲರ್‌ ಗೆ ಬೈಕ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Team India: ದ.ಆಫ್ರಿಕಾ ವಿರುದ್ದದ ಗೆಲುವಿನೊಂದಿಗೆ ಪಾಕ್‌ ದಾಖಲೆ ಮುರಿದ ಟೀಂ ಇಂಡಿಯಾ

Kota-Shrinivas

Udupi: ಸಿಎನ್‌ಜಿ ಪೂರೈಕೆಯಲ್ಲಿ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಕೋಟ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.