Mangaluru ಕೌಟುಂಬಿಕ ದೌರ್ಜನ್ಯ: ನಿರಂತರ ನಿಗಾ ವಹಿಸಿ
Team Udayavani, Jan 17, 2024, 1:00 AM IST
ಮಂಗಳೂರು: ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ದೊರಕಿಸಲು ಕ್ರಮ ವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ
ನಿರ್ವಹಣಾಧಿಕಾರಿ ಡಾ| ಆನಂದ್ ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ನೇತ್ರಾವತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ 170 ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಸಾಂತ್ವನ ಕೇಂದ್ರಗಳಲ್ಲಿ ಪ್ರಕರಣಗಳ ವಿಚಾರಣೆ ನಡೆಸಿ, ಸಂತ್ರಸ್ತರಿಗೆ ಸೂಕ್ತ ನ್ಯಾಯ ದೊರಕಿಸಬೇಕು.
ನ್ಯಾಯಾಲಯಗಳಲ್ಲಿ ದಾಖಲಿಸಲಾದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಸೂಕ್ತ ಕಾನೂನು ನೆರವು ನೀಡಲು ಇಲಾಖೆ ಒತ್ತು ನೀಡಬೇಕು. ಪ್ರಕರಣದ ವಿಚಾರಣಾ ಹಂತದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಗಮನಹರಿಸಬೇಕು ಎಂದು ನಿರ್ದೇಶಿಸಿದರು.
ಸ್ತ್ರೀಶಕ್ತಿ ಗುಂಪುಗಳು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಲು ಅವುಗಳಿಗೆ ಆಹಾರ ಸುರಕ್ಷತೆ ಪ್ರಮಾಣಪತ್ರ ನೀಡಿ, ಉತ್ತಮ ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಸಾಲ ನೀಡುವುದಕ್ಕಿಂತಲೂ ಉತ್ಪಾದನಾ ಚಟುವಟಿಕೆಗಳಿಗೆ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ತೊಡಗಿಸಿಕೊಳ್ಳಲು ಆದ್ಯತೆ ನೀಡಲು ತಿಳಿಸಿದರು.
ಡಿಎಚ್‌ಒ ಡಾ| ತಿಮ್ಮಯ್ಯ, ಅಪರ ಪೊಲೀಸ್ ವರಿಷ್ಠಾಧಿಕಾರಿ ಧರ್ಮಪ್ಪ, ಇಲಾಖೆಗಳ ಅಧಿಕಾರಿಗಳು, ಡಾ| ಹಿಲ್ಡಾ ರಾಯಪ್ಪನ್, ಸಾಂತ್ವನ ಕೇಂದ್ರಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಚಾರ್ಜ್‌ಶೀಟ್ ಸಲ್ಲಿಸಲು ಸೂಚನೆ
ಜಿಲ್ಲೆಯಲ್ಲಿ ವರದಕ್ಷಿಣೆ ನಿಷೇಧ ಕಾಯಿದೆಯಡಿ 36 ಪ್ರಕರಣ ದಾಖಲಾಗಿದ್ದು, ಈ ಪೈಕಿ 30 ಪ್ರಕರಣ ತನಿಖಾ ಹಂತದಲ್ಲಿದೆ. ದಾಖಲಾದ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ದ.ಕ. ಜಿ.ಪಂ. ಸಿಇಒ ಡಾ| ಆನಂದ್ ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
Supreme Court: ಖಾಸಗಿ ಸಂಪನ್ಮೂಲ ಸ್ವಾಧೀನ ಸುಪ್ರೀಂ ತೀರ್ಪು ಸಮತೋಲಿತ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.